ಬೆಂಗಳೂರು: ಪ್ರಸಕ್ತ ಸಾಲಿನ ವೃತ್ತಿಪರ ಕೋರ್ಸ್ಗಳ ಪ್ರವೇಶಾತಿಗಾಗಿ ಕಾಯುತ್ತಿದ್ದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಮಹತ್ವದ ಸುದ್ದಿಯೊಂದನ್ನು ನೀಡಿದೆ. 2026ರ ಏಪ್ರಿಲ್ 22, 23 ಮತ್ತು 24ರಂದು ಯಶಸ್ವಿಯಾಗಿ ನಡೆದಿದ್ದ ಯುಜಿ ಸಿಇಟಿ (UG CET-2026) ಪರೀಕ್ಷೆಯ ಫಲಿತಾಂಶವು ಇಂದು (ಜೂನ್ 6) ಅಧಿಕೃತವಾಗಿ ಪ್ರಕಟಗೊಳ್ಳಲಿದೆ.
ಮಧ್ಯಾಹ್ನ 2 ಗಂಟೆಯ ನಂತರ ಲಿಂಕ್ ಸಕ್ರಿಯ:
ಇಂದು ಬೆಳಿಗ್ಗೆ 12 ಗಂಟೆಗೆ ಸರಿಯಾಗಿ ವೈದ್ಯಕೀಯ ಶಿಕ್ಷಣ ಸಚಿವರಾದ ಶರಣು ಪ್ರಕಾಶ್ ಪಾಟೀಲ್ ಅವರು ಸುದ್ದಿಗೋಷ್ಠಿ ನಡೆಸುವ ಮೂಲಕ ಅಧಿಕೃತವಾಗಿ ಫಲಿತಾಂಶವನ್ನು ಬಿಡುಗಡೆ ಮಾಡಲಿದ್ದಾರೆ. ಸುದ್ದಿಗೋಷ್ಠಿಯ ಬಳಿಕ, ಅಂದರೆ ಮಧ್ಯಾಹ್ನ 2 ಗಂಟೆಯ ನಂತರ ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ಗಳ ಮೂಲಕ ತಮ್ಮ ಅಂಕಪಟ್ಟಿ ಮತ್ತು ರ್ಯಾಂಕ್ ವಿವರಗಳನ್ನು ಪರಿಶೀಲಿಸಬಹುದಾಗಿದೆ.

ಫಲಿತಾಂಶ ವೀಕ್ಷಿಸುವುದು ಹೇಗೆ?
ವಿದ್ಯಾರ್ಥಿಗಳು ಇಲಾಖೆಯ ಕೆಳಗಿನ ಅಧಿಕೃತ ಪೋರ್ಟಲ್ಗಳಿಗೆ ಭೇಟಿ ನೀಡಿ ತಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸುವ ಮೂಲಕ ಫಲಿತಾಂಶ ಪಡೆಯಬಹುದು:
https://keaonline.karnataka.gov.in/ugcet_2026_results
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
https://cetonline.karnataka.gov.in/kea
ರಾಜ್ಯಾದ್ಯಂತ ಎಂಜಿನಿಯರಿಂಗ್, ಕೃಷಿ, ಫಾರ್ಮಸಿ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳ ಸೀಟು ಆಕಾಂಕ್ಷಿಗಳಿಗೆ ಈ ಫಲಿತಾಂಶ ಅತ್ಯಂತ ನಿರ್ಣಾಯಕವಾಗಿದ್ದು, ಫಲಿತಾಂಶ ಪ್ರಕಟವಾದ ತಕ್ಷಣವೇ ಸರ್ವರ್ ದಟ್ಟಣೆಯನ್ನು ತಪ್ಪಿಸಲು ಪ್ರಾಧಿಕಾರವು ಎರಡು ಪ್ರತ್ಯೇಕ ಲಿಂಕ್ಗಳ ವ್ಯವಸ್ಥೆ ಮಾಡಿದೆ.

ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
