ಚಿತ್ರದುರ್ಗ: ಸಮಗ್ರ ಶಿಕ್ಷಣ ಕರ್ನಾಟಕ ಹಾಗೂ ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತಿನ ವತಿಯಿಂದ 2026-27ನೇ ಶೈಕ್ಷಣಿಕ ಸಾಲಿಗೆ ಜಿಲ್ಲೆಯ ಚಳ್ಳಕೆರೆ ಮತ್ತು ಮೊಳಕಾಲ್ಮುರು ತಾಲ್ಲೂಕುಗಳ ಆದರ್ಶ ವಿದ್ಯಾಲಯಗಳಲ್ಲಿ ಪ್ರವೇಶ ಪ್ರಕ್ರಿಯೆ ಆರಂಭವಾಗಿದೆ. ಈ ಶಾಲೆಗಳಲ್ಲಿ ಖಾಲಿ ಉಳಿದಿರುವ 7, 8 ಮತ್ತು 9ನೇ ತರಗತಿಗಳ ಸೀಟುಗಳ ಭರ್ತಿಗಾಗಿ ಅರ್ಹ ಹಾಗೂ ಆಸಕ್ತ ವಿದ್ಯಾರ್ಥಿಗಳಿಂದ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.
ಜೂನ್ 10 ರಿಂದ ಅರ್ಜಿ ಸಲ್ಲಿಕೆ ಆರಂಭ:
ಅರ್ಹ ವಿದ್ಯಾರ್ಥಿಗಳು ಸಂಬಂಧಪಟ್ಟ ಆದರ್ಶ ವಿದ್ಯಾಲಯದ ಮುಖ್ಯ ಶಿಕ್ಷಕರಿಗೆ ನೇರವಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಜೂನ್ 10 ರಿಂದ ಜೂನ್ 17 ರವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ.

ಜೂನ್ 22ಕ್ಕೆ ಪ್ರವೇಶ ಪರೀಕ್ಷೆ:
ದಾಖಲಾತಿಗಾಗಿ ಪ್ರವೇಶ ಪರೀಕ್ಷೆಯನ್ನು ಜೂನ್ 22ರಂದು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 1:00 ಗಂಟೆಯವರೆಗೆ ಚಳ್ಳಕೆರೆ ಮತ್ತು ಮೊಳಕಾಲ್ಮುರು ತಾಲ್ಲೂಕುಗಳ ವಿವಿಧ ನಿಗದಿಪಡಿತ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ಯಾರೆಲ್ಲಾ ಅರ್ಜಿ ಸಲ್ಲಿಸಬಹುದು?
ಚಳ್ಳಕೆರೆ ಮತ್ತು ಮೊಳಕಾಲ್ಮುರು ತಾಲ್ಲೂಕು ವ್ಯಾಪ್ತಿಯ ಸರ್ಕಾರಿ, ಅನುದಾನಿತ (Aided) ಮತ್ತು ಅನುದಾನ ರಹಿತ (Unaided) ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ಎರಡೂ ತಾಲ್ಲೂಕುಗಳ ಖಾಯಂ ನಿವಾಸಿಯಾಗಿದ್ದು, ಪ್ರಸ್ತುತ ಬೇರೆ ತಾಲ್ಲೂಕು, ಜಿಲ್ಲೆ ಅಥವಾ ಹೊರ ರಾಜ್ಯಗಳಲ್ಲಿ ಓದುತ್ತಿದ್ದರೂ ಸಹ, ತಮ್ಮ ಸ್ವಂತ ತಾಲ್ಲೂಕಿನ ಆದರ್ಶ ವಿದ್ಯಾಲಯದಲ್ಲಿ ಕಲಿಯಲು ಬಯಸುವ ವಿದ್ಯಾರ್ಥಿಗಳೂ ಅರ್ಜಿ ಹಾಕಲು ಅರ್ಹರಾಗಿರುತ್ತಾರೆ.
ಹೆಚ್ಚಿನ ವಿವರಗಳಿಗಾಗಿ ಮತ್ತು ಮಾಹಿತಿಗಾಗಿ ಡಿಡಿಪಿಐ (ಆಡಳಿತ/ಅಭಿವೃದ್ಧಿ), ಕ್ಷೇತ್ರ ಶಿಕ್ಷಣಾಧಿಕಾರಿಗಳು (BEO), ಬಿ.ಆರ್.ಸಿ ಚಳ್ಳಕೆರೆ ಮತ್ತು ಮೊಳಕಾಲ್ಮೂರು ತಾಲ್ಲೂಕು ಅಥವಾ ಆಯಾ ಆದರ್ಶ ವಿದ್ಯಾಲಯಗಳ ಮುಖ್ಯ ಶಿಕ್ಷಕರನ್ನು ಸಂಪರ್ಕಿಸಬಹುದಾಗಿದೆ ಎಂದು ಚಿತ್ರದುರ್ಗ ಡಯಟ್ ಪ್ರಾಚಾರ್ಯರಾದ ನಾಸಿರುದ್ದೀನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
