ದಾವಣಗೆರೆ : ಬಿ.ಐ.ಇ.ಆರ್.ಟಿ ಹುದ್ದೆಗೆಳಿಗೆ ಅರ್ಜಿ ಆಹ್ವಾನ

davangere-biert-teacher-recruitment-notification

—Election Update—

ದಾವಣಗೆರೆ: ಪ್ರಸಕ್ತ ಸಾಲಿಗೆ ಸಮನ್ವಯ ಶಿಕ್ಷಣದ ಕಾಯತಂತ್ರದಡಿಯಲ್ಲಿ ಕ್ಷೇತ್ರ ಸಮನ್ವಯಾಧಿಕಾರಿಗಳ ಕೇಂದ್ರಗಳಿಗೆ ಖಾಲಿ ಇರುವ ಬಿ.ಐ.ಇ.ಆರ್.ಟಿ ಹುದ್ದೆಗಳಿಗೆ ವಿಶೇಷ ಶಿಕ್ಷಣದಲ್ಲಿ ಡಿ.ಇಡಿ ಮತ್ತು ಬಿ.ಇಡಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇರಗುತ್ತಿಗೆ ಮೂಲಕ ತಾತ್ಕಾಲಿಕವಾಗಿ ಆಯ್ಕೆ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ವಿದ್ಯಾರ್ಹತೆಯ ಎಲ್ಲಾ ಅಂಕಪಟ್ಟಿಗಳು ಮತ್ತು ಪ್ರಮಾಣ ಪತ್ರಗಳು ಮತ್ತು ಆರ್.ಸಿ.ಐ ನೊಂದಣಿ (2026-27ನೇ ಸಾಲಿಗೆ) ಪ್ರಮಾಣ ಪತ್ರದೊಂದಿಗೆ ಸ್ವ-ವಿವರವುಳ್ಳ ಮಾಹಿತಿಯನ್ನು ಜೂನ್ 15 ರೊಳಗಾಗಿ ಅಂಚೆ ಅಥವಾ ಮುದ್ದಾಂ ಉಪನಿರ್ದೇಶಕರು ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳ ಕಾರ್ಯಾಲಯ, ಸಮಗ್ರ ಶಿಕ್ಷಣ ಕರ್ನಾಟಕ, ಶಾಲಾ ಶಿಕ್ಷಣ ಇಲಾಖೆ, ಅಂಬೇಡ್ಕರ್ ವೃತ್ತ, ದಾವಣಗೆರೆ-577002 ಈ ವಿಳಾಸಕ್ಕೆ ತಲುಪಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ :9448999394 ಸಂಪರ್ಕಿಸಬೇಕೆಂದು ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

📩 ಸುದ್ದಿ ಕಳುಹಿಸಿ

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More

Related News

Home
Web Stories
Instagram
WhatsApp