ಪಿಂಚಣಿದಾರರೇ ಗಮನಿಸಿ: ಸಕಾಲದಲ್ಲಿ ಜೀವಂತ ಪ್ರಮಾಣ ಪತ್ರ ಸಲ್ಲಿಸಲು ಉಪ ಮಹಾಲೇಖಪಾಲರ ಸೂಚನೆ

pensioners-life-certificate-awareness-davanagere

—Election Update—

ದಾವಣಗೆರೆ : ಪಿಂಚಣಿ ಪಡೆಯಲು ಜೀವಂತ ಸದಸ್ಯರ ಪ್ರಮಾಣ ಪತ್ರಗಳು ಕಡ್ಡಾಯವಾಗಿರುವುದರಿಂದ ಸಕಾಲಕ್ಕೆ ಸೂಕ್ತ ದಾಖಲಾತಿಗಳನ್ನು ನೀಡುವ ಮೂಲಕ ಸಹಕರಿಸಿ ಎಂದು ಉಪ ಮಹಾಲೇಖಪಾಲರಾದ ಸಚ್ಚಿನ್ ಕೃಷ್ಣ ಕೌಶಿಕ್ ತಿಳಿಸಿದರು.

ಶುಕ್ರವಾರ ಜೂನ್(19) ‌ಬೆಂಗಳೂರಿನ ಮಹಾಲೇಖಪಾಲರು ದಾವಣಗೆರೆ ಜಿಲ್ಲಾ ಖಜಾನೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಾಮಾನ್ಯ ಭವಿಷ್ಯ ನಿಧಿ ಹಾಗೂ ಲೆಕ್ಕಪತ್ರ ಸಮಸ್ಯೆಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪಿಂಚಣಿದಾರರು ತಮ್ಮ ಎಲ್ಲಾ ಬ್ಯಾಂಕ್‌ಗೆ 2ನೇ ವಾರ ಭೇಟಿ ನೀಡಿದರೆ ನಿಮ್ಮ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಲಾಗುವುದು. ಜೀವಂತ ಸದಸ್ಯರ ದೃಢೀಕರಣ ಪತ್ರವನ್ನು ಪಡೆಯಲು ಸೈಬರ್‌ಕೆಫೆ ಇನ್ನಿತರ ಕೇಂದ್ರಗಳಿಗೆ ಅಲೆಯುವ ಅವಶ್ಯಕತೆ ಇಲ್ಲ. ನೀವು ಮನೆಯಲ್ಲಿ ಮೊಬೈಲ್‌ನಲ್ಲಿ ಅಫ್ ಲೋಡ್ ಮಾಡಿ ಪಡೆಯಬಹುದು. ಮತ್ತು ನಿಮ್ಮ ಸಮಸ್ಯೆಗಳನ್ನು ತಿಳಿಸುವಾಗ ಅರ್ಜಿಯಲ್ಲಿ ಇ-ಮೇಲ್ ವಿಳಾಸ, ಮೊಬೈಲ್ ನಂಬರ್‌ನ್ನು ಕಡ್ಡಾಯವಾಗಿ ನಮೂದಿಸಿದರೆ, ಇದರಿಂದ ನಿಮಗೆ ಮಾಹಿತಿ ನೀಡಲು ಅನುಕೂಲವಾಗುತ್ತದೆ ಎಂದರು.

ಪಿಂಚಣಿ ಅದಾಲತ್ ಎನ್ನುವುದು ನಿವೃತ್ತ ನೌಕರರು ಮತ್ತು ಪಿಂಚಣಿದಾರರ ದೀರ್ಘಕಾಲದ ಬಾಕಿ ಉಳಿದಿರುವ ಸಮಸ್ಯೆಗಳನ್ನು ಅಥವಾ ಕುಂದುಕೊರತೆಗಳನ್ನು ಪರಿಹರಿಸಲು ವಿಶೇಷ ವೇದಿಕೆಯಾಗಿದೆ. ಸ್ಥಳದಲ್ಲೇ ಅರ್ಜಿಗಳನ್ನು ಪರಿಶೀಲಿಸಿ, ಬ್ಯಾಂಕ್‌ ಅಧಿಕಾರಿಗಳ ಸಮ್ಮುಖದಲ್ಲಿ ತ್ವರಿತವಾಗಿ ಸಮಸ್ಯೆಗಳನ್ನು ಬಗೆಹರಿಸುವುದು ಇದರ ಮುಖ್ಯ ಉದ್ದೇಶವಾಗಿದೆ.

ಮಹಾಲೇಖಪಾಲರ ಕಚೇರಿಯ ಹಿರಿಯ ಲೆಕ್ಕಪರಿಶೋಧನಾ ಅಧಿಕಾರಿ ನಾಗಸೇನಾ.ಟಿ.ವಿ, ಮತ್ತು ಪದ್ಮವತಿ, ಜಿಲ್ಲಾ ಖಜಾನೆಯ ಉಪನಿರ್ದೇಶಕರಾದ ರಮೇಶ್ ಅರೆಮಲ್ಲಾಪುರ, ಸಹಾಯಕ ಲೆಕ್ಕಪರಿಶೋಧನಾ ಆಧಿಕಾರಿ ಚಂದನ್ ಮತ್ತು ಜಾಬ್‌ಲೀನೋ, ಉಪಸ್ಥಿತರಿದ್ದರು

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

📩 ಸುದ್ದಿ ಕಳುಹಿಸಿ

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More

Related News

Home
Web Stories
Instagram
WhatsApp