ವಿದ್ಯಾರ್ಥಿಗಳ ಗಮನಕ್ಕೆ: ‘ಅರಿವು’ ಶೈಕ್ಷಣಿಕ ಸಾಲಕ್ಕೆ ಅರ್ಜಿ ಆಹ್ವಾನ; ಮೇ 30 ಕೊನೆಯ ದಿನ

Arivu Education Loan 2026 Karnataka Minority Development Corporation Application Details

—Election Update—

ಮಧ್ಯ ಕರ್ನಾಟಕ ಸುದ್ದಿ ಜಾಲ: ರಾಜ್ಯದ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಕನಸನ್ನು ನನಸು ಮಾಡಿಕೊಳ್ಳಲು ಕರ್ನಾಟಕ ಸರ್ಕಾರ ಸುವರ್ಣಾವಕಾಶ ನೀಡಿದೆ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು (KMDC) 2026-27ನೇ ಸಾಲಿಗೆ ‘ಅರಿವು’ (Arivu) ಯೋಜನೆಯಡಿ ವೃತ್ತಿಪರ ಕೋರ್ಸ್‌ಗಳ ವ್ಯಾಸಂಗಕ್ಕಾಗಿ ಶೈಕ್ಷಣಿಕ ಸಾಲ ನೀಡಲು ಅರ್ಜಿ ಆಹ್ವಾನಿಸಿದೆ.

ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ 30, 2026 ಕೊನೆಯ ದಿನಾಂಕವಾಗಿದೆ.

ಯಾವೆಲ್ಲಾ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು?

ಮುಸ್ಲಿಂ, ಜೈನ್, ಬೌದ್ಧ, ಸಿಖ್, ಪಾರ್ಸಿ ಹಾಗೂ ಕ್ರೈಸ್ತ ಸಮುದಾಯದ ವಿದ್ಯಾರ್ಥಿಗಳು ಈ ಯೋಜನೆಯ ಪ್ರಯೋಜನ ಪಡೆಯಬಹುದು. ಪ್ರಮುಖವಾಗಿ ಕೆಇಎ (KEA), ಸಿಇಟಿ (CET) ಅಥವಾ ನೀಟ್ (NEET) ಮೂಲಕ ಈ ಕೆಳಗಿನ ಕೋರ್ಸ್‌ಗಳಿಗೆ ಪ್ರವೇಶ ಪಡೆದವರಿಗೆ ಆದ್ಯತೆ ನೀಡಲಾಗುತ್ತದೆ:

  • ವೈದ್ಯಕೀಯ: ಎಂಬಿಬಿಎಸ್ (MBBS), ಬಿಡಿಎಸ್ (BDS), ಬಿ.ಆಯುಷ್ (B.Ayush).

  • ತಾಂತ್ರಿಕ: ಬಿ.ಇ / ಬಿ.ಟೆಕ್ (BE/B.Tech), ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್.

  • ಇತರೆ: ಫಾರ್ಮಸಿ, ಕೃಷಿ ವಿಜ್ಞಾನ ಮತ್ತು ಪಶು ವೈದ್ಯಕೀಯ ವಿಜ್ಞಾನ.

ಅರ್ಜಿ ಸಲ್ಲಿಸುವ ವಿಧಾನ:

ವಿದ್ಯಾರ್ಥಿಗಳು ಯಾವುದೇ ಮಧ್ಯವರ್ತಿಗಳ ಮೊರೆ ಹೋಗದೆ ನೇರವಾಗಿ ನಿಗಮದ ಅಧಿಕೃತ ವೆಬ್‌ಸೈಟ್ ಮೂಲಕ ನೋಂದಾಯಿಸಿಕೊಳ್ಳಬಹುದು.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

📩 ಸುದ್ದಿ ಕಳುಹಿಸಿ

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More

Related News

Home
Web Stories
Instagram
WhatsApp