ದಾವಣಗೆರೆ: ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಸಹೋದ್ಯೋಗಿ ಸಚಿವ ಜಮೀರ್ ಅಹಮದ್ ಖಾನ್ ಅವರ ವಿರುದ್ಧ ಏಕವಚನ ಬಳಸುವ ಮೂಲಕ ಇಡೀ ಅಲ್ಪಸಂಖ್ಯಾತ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ ಎಂದು ಮುಖಂಡ ಸಿರಾಜ್ ಅಹಮದ್ ಕಿಡಿಕಾರಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಕೂಡಲೇ ಸಚಿವ ಜಮೀರ್ ಅಹಮದ್ ಅವರಲ್ಲಿ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.
ಜಮೀರ್ ಕೇವಲ ಒಂದು ಕ್ಷೇತ್ರಕ್ಕೆ ಸೀಮಿತವಲ್ಲ
ಸಚಿವ ಜಮೀರ್ ಅಹಮದ್ ಖಾನ್ ಅವರು ಒಂದು ಜಿಲ್ಲೆ ಅಥವಾ ಕ್ಷೇತ್ರಕ್ಕೆ ಸೀಮಿತವಾದ ನಾಯಕರಲ್ಲ. ಅವರು ರಾಜ್ಯದ ‘ಮಾಸ್ ಲೀಡರ್’ ಹಾಗೂ ಕಾಂಗ್ರೆಸ್ ಪಕ್ಷದ ‘ಸ್ಟಾರ್ ಕ್ಯಾಂಪೇನರ್’. ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ 140ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಸಂಚರಿಸಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಶ್ರಮಿಸಿದ್ದಾರೆ. ಇಂತಹ ಹಿರಿಯ ನಾಯಕರನ್ನು ‘ಅವನ್ಯಾರು’ ಎಂದು ಹಗುರವಾಗಿ ಮಾತನಾಡಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಟಿಕೆಟ್ ಕೇಳುವುದು ಸಮುದಾಯದ ಹಕ್ಕು
ಅಲ್ಪಸಂಖ್ಯಾತ ಸಮುದಾಯಕ್ಕೆ ಟಿಕೆಟ್ ನೀಡುವಂತೆ ಜಮೀರ್ ಅಹಮದ್ ಅವರು ಬೇಡಿಕೆ ಇಟ್ಟಿರುವುದರಲ್ಲಿ ತಪ್ಪೇನಿದೆ? ಸಮುದಾಯದ ಹಿತದೃಷ್ಟಿಯಿಂದ ಅವರು ಧ್ವನಿ ಎತ್ತಿದ್ದಾರೆ. ದಾವಣಗೆರೆ ಜಿಲ್ಲೆಯಲ್ಲೂ ಅಲ್ಪಸಂಖ್ಯಾತ ಮತದಾರರ ಸಂಖ್ಯೆ ಹೆಚ್ಚಿದೆ. ಕೇವಲ ಚುನಾವಣೆ ಸಮಯದಲ್ಲಿ ಬಳಸಿಕೊಂಡು, ಅಧಿಕಾರ ಮತ್ತು ಹಕ್ಕಿನ ಬಗ್ಗೆ ಮಾತನಾಡಿದಾಗ ಏಕವಚನದಲ್ಲಿ ನಿಂದಿಸುವುದು ಅಹಿಂದ ಸಮಾಜಕ್ಕೆ ಮಾಡುವ ದ್ರೋಹವಾಗಿದೆ ಎಂದರು.
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ಹೈಕಮಾಂಡ್ ಹಸ್ತಕ್ಷೇಪಕ್ಕೆ ಮನವಿ
ಒಂದೇ ಪಕ್ಷದಲ್ಲಿದ್ದುಕೊಂಡು ಅಣ್ಣ-ತಮ್ಮಂದಿರಂತೆ ಇರಬೇಕಾದ ವಾತಾವರಣದಲ್ಲಿ ಇಂತಹ ಹೇಳಿಕೆಗಳು ಪಕ್ಷದ ವರ್ಚಸ್ಸಿಗೆ ಧಕ್ಕೆ ತರುತ್ತವೆ. ಈ ಕೂಡಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ವಿಚಾರದಲ್ಲಿ ಮಧ್ಯಪ್ರವೇಶಿಸಿ ಸರಿಪಡಿಸಬೇಕು ಎಂದು ಅವರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದ ಹಲವು ಪ್ರಮುಖರು ಉಪಸ್ಥಿತರಿದ್ದು, ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ನಡೆಯನ್ನು ಖಂಡಿಸಿದರು.
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
