ದಾವಣಗೆರೆ: ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಅಭ್ಯರ್ಥಿಗಳು ತಮ್ಮ ಗೆಲುವಿಗಾಗಿ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ಮೊರೆ ಹೋಗುತ್ತಿದ್ದಾರೆ. ಅಂತೆಯೇ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಅವರು ಇಂದು ತಮ್ಮ ಕುಟುಂಬದ ಆರಾಧ್ಯ ದೈವವಾದ ಉಚ್ಚಂಗಿ ದುರ್ಗಾದೇವಿಯ ದರ್ಶನ ಪಡೆದರು.
ದಾವಣಗೆರೆ ದಕ್ಷಿಣ ಚುನಾವಣಾ ಅಖಾಡದಲ್ಲಿ ಬಿರುಸಿನ ಪ್ರಚಾರ ನಡೆಸುತ್ತಿರುವ ದಾಸಕರಿಯಪ್ಪ ಅವರು, ಇಂದು ಬೆಳಿಗ್ಗೆ ಐತಿಹಾಸಿಕ ಉಚ್ಚಂಗಿ ಬೆಟ್ಟಕ್ಕೆ ಭೇಟಿ ನೀಡಿದರು. ದೇವಸ್ಥಾನದ ಮೆಟ್ಟಿಲುಗಳನ್ನು ಹತ್ತಿ ಸನ್ನಿಧಿಗೆ ಆಗಮಿಸಿದ ಅವರಿಗೆ ಅರ್ಚಕರು ಪೂರ್ಣಕುಂಭ ಸ್ವಾಗತ ಕೋರಿದರು.

ದೇವಿಗೆ ವಿಶೇಷ ನಮನ
ದೇವಸ್ಥಾನದ ಗರ್ಭಗುಡಿಯಲ್ಲಿ ಉಚ್ಚಂಗಿ ದುರ್ಗಾದೇವಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಶ್ರೀನಿವಾಸ್ ದಾಸಕರಿಯಪ್ಪ ಅವರು ದೇವಿಗೆ ವಿಶೇಷ ಪೂಜೆ ಹಾಗೂ ಮಂಗಳಾರತಿ ಸಲ್ಲಿಸಿ, ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಅರ್ಚಕರು ಮಂತ್ರಘೋಷಗಳೊಂದಿಗೆ ಅವರಿಗೆ ರಕ್ಷಾ ಸೂತ್ರವನ್ನು ಕಟ್ಟಿ, ದೇವಿಯ ಪ್ರಸಾದ ನೀಡಿ ಹರಸಿದರು.
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ಗೆಲುವಿಗಾಗಿ ಪ್ರಾರ್ಥನೆ
ಪೂಜೆಯ ನಂತರ ಮಾತನಾಡಿದ ಅವರು, “ನಮ್ಮ ಮನೆ ದೇವರಾದ ಉಚ್ಚಂಗಿ ದುರ್ಗಾದೇವಿಯ ಆಶೀರ್ವಾದ ಪಡೆಯಲು ಇಲ್ಲಿಗೆ ಬಂದಿದ್ದೇನೆ. ಕ್ಷೇತ್ರದ ಜನರ ಏಳಿಗೆಗಾಗಿ ಹಾಗೂ ಚುನಾವಣೆಯಲ್ಲಿ ನಮಗೆ ಜಯ ಸಿಗಲಿ ಎಂದು ದೇವಿಯಲ್ಲಿ ಪ್ರಾರ್ಥಿಸಿದ್ದೇನೆ” ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಅವರ ಕುಟುಂಬದ ಸದಸ್ಯರು ಹಾಗೂ ನೂರಾರು ಬೆಂಬಲಿಗರು ಉಪಸ್ಥಿತರಿದ್ದರು

ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
