ಸಚಿವ ಡಿ. ಸುಧಾಕರ್ ಅವರ ನಿಧನಕ್ಕೆ ಭಾವಪೂರ್ಣ ಶ್ರದ್ಧಾಂಜಲಿ. ಅವರ ಗೌರವಾರ್ಥವಾಗಿ ಇಂದು ನಮ್ಮ ವೆಬ್‌ಸೈಟ್ ಕಪ್ಪು-ಬಿಳುಪಿನಲ್ಲಿ ಪ್ರಕಟವಾಗುತ್ತಿದೆ.
D Sudhakar
ಭಾವಪೂರ್ಣ ಶ್ರದ್ಧಾಂಜಲಿ
ಸಚಿವ ಡಿ. ಸುಧಾಕರ್
ರಾಜಕೀಯ ಹೆಜ್ಜೆಗುರುತು ಡಿ. ಸುಧಾಕರ್ ಅವರು ತಮ್ಮ ಜನಪರ ಕಾರ್ಯಗಳಿಂದ ‘ಸೋಲಿಲ್ಲದ ಸರದಾರ’ ಎಂದೇ ಖ್ಯಾತರಾಗಿದ್ದ ಅನುಭವಿ ರಾಜಕಾರಣಿ.
2004
ಮೊದಲ ಬಾರಿಗೆ ಆಯ್ಕೆ ಮೊದಲ ಬಾರಿಗೆ ಚಳ್ಳಕೆರೆ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕರಾಗಿ ಆಯ್ಕೆ.
2008
ಪಕ್ಷೇತರ ಗೆಲುವು & ಸಚಿವ ಸ್ಥಾನ ಹಿರಿಯೂರು ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಭರ್ಜರಿ ಗೆಲುವು. ಬಳಿಕ ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡಿ ಸಮಾಜ ಕಲ್ಯಾಣ ಸಚಿವರಾಗಿ (2008-2009) ಹಾಗೂ ಯುವಜನ ವ್ಯವಹಾರ ಸಚಿವರಾಗಿ ಸೇವೆ.
2013
ಕಾಂಗ್ರೆಸ್ ಮರಳುವಿಕೆ ಕಾಂಗ್ರೆಸ್ ಪಕ್ಷಕ್ಕೆ ಮರಳಿ, ಹಿರಿಯೂರು ಕ್ಷೇತ್ರದಿಂದ ಜೆಡಿಎಸ್‌ನ ಎ. ಕೃಷ್ಣಪ್ಪ ವಿರುದ್ಧ ಗೆಲುವು ಸಾಧಿಸಿದ್ದರು.
2018
ಚುನಾವಣಾ ಹಿನ್ನಡೆ ಹಿರಿಯೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪೂರ್ಣಿಮಾ ಶ್ರೀನಿವಾಸ್ ವಿರುದ್ಧ ಸೋಲು.
2023
ಮತ್ತೆ ಜಯಭೇರಿ ಮತ್ತೆ ಹಿರಿಯೂರು ಕ್ಷೇತ್ರದಿಂದ ಸ್ಪರ್ಧಿಸಿ ಭರ್ಜರಿ ಜಯಭೇರಿ. ಸಿಎಂ ಸಿದ್ದರಾಮಯ್ಯ ಸಂಪುಟದಲ್ಲಿ ಯೋಜನೆ ಮತ್ತು ಸಾಂಖ್ಯಿಕ ಸಚಿವರಾಗಿ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿ ಸೇವೆ. ಚಿತ್ರದುರ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಣೆ.
ಚಿತ್ರದುರ್ಗಕ್ಕೆ ತುಂಬಲಾರದ ನಷ್ಟ ಸಚಿವರ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿದ್ದು, ಇಡೀ ಚಿತ್ರದುರ್ಗ ಜಿಲ್ಲೆ ಓರ್ವ ಜನಪ್ರಿಯ ನಾಯಕನನ್ನು ಕಳೆದುಕೊಂಡಂತಾಗಿದೆ.

ಡಿ.ಸುಧಾಕರ್ ವ್ಯಕ್ತಿ ಪರಿಚಯ ಹಾಗೂ ರಾಜಕೀಯ ಪಯಣ

D Sudhakar
ಜನನ ಡಿ ಸುಧಾಕರ್ ಅವರು 28.03.1961 ರಲ್ಲಿ ಜನಿಸಿದರು.
D Sudhakar
ರಾಜಕೀಯ ಪ್ರವೇಶ (2004) ಪ್ರಥಮ ಬಾರಿಗೆ ಚಳ್ಳಕೆರೆಯಿಂದ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾದರು.
D Sudhakar
ಪಕ್ಷೇತರ ಜಯ (2008) ಹಿರಿಯೂರು ಕ್ಷೇತ್ರದಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದರು.
D Sudhakar
ಸಚಿವ ಸ್ಥಾನ ಯಡಿಯೂರಪ್ಪ ಸರ್ಕಾರಕ್ಕೆ ಬೆಂಬಲ ನೀಡಿ ಸಮಾಜ ಕಲ್ಯಾಣ ಸಚಿವರಾಗಿ ಸೇವೆ ಸಲ್ಲಿಸಿದರು.
D Sudhakar
ಮರು ಆಯ್ಕೆ (2023) ಕಾಂಗ್ರೆಸ್ ನಿಂದ ಆಯ್ಕೆಯಾಗಿ ಸಾಂಖಿಕ ಮತ್ತು ಯೋಜನಾ ಸಚಿವರಾಗಿದ್ದರು.
ಸಹಕಾರ ಕ್ಷೇತ್ರದ ಧೀಮಂತ ಕಳೆದ 20 ವರ್ಷಗಳಿಂದ ಚಿತ್ರದುರ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಅಪಾರ ಸೇವೆ ಸಲ್ಲಿಸಿದ್ದರು.
ಬಡವರ ಬಂಧು ಅಧಿಕಾರ ಇದ್ದಾಗ, ಇಲ್ಲದಿದ್ದಾಗ ಅಪಾರ ಜನರಿಗೆ ಸಹಾಯಾಸ್ತ ಚಾಚಿದ್ದ ಅವರು 'ಬಡವರ ಬಂಧು' ಎಂದೇ ಪ್ರಸಿದ್ಧರು.

ಚಿತ್ರದುರ್ಗದಲ್ಲಿ ‘ಅಭಿಮಾನೋತ್ಸವ’ದ ಅಬ್ಬರ: ಬಿಎಸ್​ವೈ 50 ವರ್ಷಗಳ ರಾಜಕೀಯ ಪಯಣಕ್ಕೆ ಕೇಸರಿ ನಮನ!

BS Yediyurappa Abhimanotsava event in Chitradurga featuring Amit Shah and BY Vijayendra.

—Election Update—

ಚಿತ್ರದುರ್ಗ (ಮೇ 9, 2026): ಕರ್ನಾಟಕ ರಾಜಕಾರಣದ ಧ್ರುವತಾರೆ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅರ್ಧಶತಮಾನದ ರಾಜಕೀಯ ಸೇವೆಯನ್ನು ಸಂಭ್ರಮಿಸುವ ‘ಅಭಿಮಾನೋತ್ಸವ’ ಕಾರ್ಯಕ್ರಮಕ್ಕೆ ಕೋಟೆನಾಡು ಚಿತ್ರದುರ್ಗ ಸಾಕ್ಷಿಯಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಉಪಸ್ಥಿತಿಯಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮವು ಬಿಜೆಪಿ ಪಾಳೆಯದಲ್ಲಿ ಹೊಸ ಉತ್ಸಾಹ ತುಂಬಿದೆ.

ಕೇಸರಿ ಮಯವಾದ ಚಿತ್ರದುರ್ಗ

ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಆಯೋಜಿಸಲಾಗಿರುವ ಈ ಸಮಾವೇಶಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಸುಮಾರು 10 ಲಕ್ಷಕ್ಕೂ ಹೆಚ್ಚು ಅಭಿಮಾನಿಗಳು ಹರಿದು ಬಂದಿದ್ದಾರೆ. ನಿನ್ನೆಯಷ್ಟೇ ಬಿಎಸ್​ವೈ ಅವರ ಭವ್ಯ ‘ಪುರಪ್ರವೇಶ’ ನಡೆದಿದ್ದು, ಇಂದು ಚಿತ್ರದುರ್ಗದಾದ್ಯಂತ ಜನಸಾಗರವೇ ನೆರೆದಿದೆ.

ಸಾಧನೆಗಳ ಸಿಂಹಾವಲೋಕನ

ಕಾರ್ಯಕ್ರಮದಲ್ಲಿ ಅಮಿತ್ ಶಾ ಅವರು ಯಡಿಯೂರಪ್ಪ ಅವರ 50 ವರ್ಷಗಳ ಸಾರ್ವಜನಿಕ ಜೀವನದ ಕುರಿತಾದ ಪುಸ್ತಕಗಳನ್ನು ಬಿಡುಗಡೆ ಮಾಡಲಿದ್ದಾರೆ. ವೇದಿಕೆಯ ಮೇಲೆ ರೈತ ನಾಯಕನ ಪ್ರಮುಖ ಸಾಧನೆಗಳನ್ನು ಸ್ಮರಿಸಲಾಗುತ್ತಿದೆ:

ಕೃಷಿ ಬಜೆಟ್: ರೈತರಿಗಾಗಿ ಪ್ರತ್ಯೇಕ ಬಜೆಟ್ ಮಂಡಿಸಿದ ಮೊದಲ ಭಾರತೀಯ ನಾಯಕ.

ಜನಪರ ಯೋಜನೆಗಳು: ಭಾಗ್ಯಲಕ್ಷ್ಮಿ, ಉಚಿತ ಸೈಕಲ್ ವಿತರಣೆ ಮತ್ತು ಸ್ತ್ರೀ ಶಕ್ತಿ ಸಂಘಗಳಿಗೆ ನೆರವು.

ಪಕ್ಷ ಸಂಘಟನೆ: ಶೂನ್ಯದಿಂದ ಆರಂಭಿಸಿ ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದ ಶ್ರೇಯಸ್ಸು.

ರಾಜಕೀಯ ದಿಕ್ಸೂಚಿ

ಈ ಅಭಿಮಾನೋತ್ಸವವು ಕೇವಲ ವ್ಯಕ್ತಿಯೊಬ್ಬರ ಸನ್ಮಾನ ಸಮಾರಂಭವಲ್ಲದೆ, 2028ರ ವಿಧಾನಸಭಾ ಚುನಾವಣೆಗೆ ಬಿಜೆಪಿಯ ಶಕ್ತಿ ಪ್ರದರ್ಶನವೂ ಆಗಿದೆ. ಪಕ್ಷದ ಹಿರಿಯ ಮತ್ತು ಕಿರಿಯ ನಾಯಕರೆಲ್ಲರೂ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳುವ ಮೂಲಕ ಆಂತರಿಕ ಒಗ್ಗಟ್ಟಿನ ಸಂದೇಶ ರವಾನಿಸಿದ್ದಾರೆ.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

📩 ಸುದ್ದಿ ಕಳುಹಿಸಿ

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More

Related News

Home
Web Stories
Instagram
WhatsApp