ಹೊಳಲ್ಕೆರೆ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷರಾಗಿದ್ದ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಆಯ್ಕೆ ಮಾಡಬೇಕು ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಅವರು ಮಹತ್ವದ ಪ್ರಸ್ತಾವನೆ ಮುಂದಿಟ್ಟಿದ್ದಾರೆ.
ಹೊಳಲ್ಕೆರೆಯಲ್ಲಿ ನಡೆದ 853ನೇ ಸಿದ್ದರಾಮೇಶ್ವರ ಜಯಂತಿ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ಬಗ್ಗೆ ಮಠಾಧೀಶರು ಹಾಗೂ ಸಮುದಾಯದ ಮುಖಂಡರಿಗೆ ಬಹಿರಂಗವಾಗಿ ಮನವಿ ಮಾಡಿದರು.
ರೇಣುಕಾಚಾರ್ಯ ಅವರ ಭಾಷಣದ ಮುಖ್ಯಾಂಶಗಳು:
ಬಿ.ಎಸ್. ಯಡಿಯೂರಪ್ಪಅಧ್ಯಕ್ಷರಾಗಲಿ
“ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರಾಗಿ ಸಮಾಜದ ಪರವಾಗಿ ಗಟ್ಟಿಯಾಗಿ ಧ್ವನಿ ಎತ್ತುತ್ತಿದ್ದ ಶಾಮನೂರು ಶಿವಶಂಕರಪ್ಪನವರ ಸ್ಥಾನ ಇಂದು ತೆರವಾಗಿದೆ. ಆ ಸ್ಥಾನಕ್ಕೆ ಸಮಾಜದ ಬಗ್ಗೆ ಅಪಾರ ಕಾಳಜಿ ಇರುವ ಮತ್ತು ಎಲ್ಲರನ್ನೂ ಒಗ್ಗೂಡಿಸಿ ಕರೆದೊಯ್ಯಬಲ್ಲ ಶಕ್ತಿ ಇರುವ ಸನ್ಮಾನ್ಯ ಬಿ.ಎಸ್. ಯಡಿಯೂರಪ್ಪನವರನ್ನು ಅಧ್ಯಕ್ಷರನ್ನಾಗಿ ಮಾಡಬೇಕು ಎಂದು ನಾನು ಎಲ್ಲಾ ಗುರುಗಳಲ್ಲಿ ಮತ್ತು ಸಮಾಜದ ಬಂಧುಗಳಲ್ಲಿ ಭಕ್ತಿಯಿಂದ ಪ್ರಾರ್ಥಿಸುತ್ತೇನೆ.”
ಒಳಪಂಗಡಗಳ ಒಗ್ಗಟ್ಟಿಗೆ ಕರೆ
ರೇಣುಕಾಚಾರ್ಯ ಅವರು ವೀರಶೈವ ಲಿಂಗಾಯತ ಸಮುದಾಯದ ಆಂತರಿಕ ಒಗ್ಗಟ್ಟಿನ ಬಗ್ಗೆ ತೀವ್ರ ಕಾಳಜಿ ವ್ಯಕ್ತಪಡಿಸಿದರು. “ನೊಳಂಬ, ಸಾಧು ಸದ್ಧರ್ಮ, ಪಂಚಮಸಾಲಿ ಹೀಗೆ ಯಾವುದೇ ಒಳಪಂಗಡಗಳಿರಲಿ, ನಾವೆಲ್ಲರೂ ಇಂದು ಒಟ್ಟಾಗಬೇಕು. ನಾವು ವಿಭಜನೆಯಾದರೆ ನಮ್ಮನ್ನು ವ್ಯವಸ್ಥಿತವಾಗಿ ತುಳಿಯುವ ಸಂಚು ನಡೆಯುತ್ತಿದೆ. ರಾಜಕಾರಣವನ್ನು ಮೀರಿ ಸಮಾಜದ ಏಳಿಗೆಗಾಗಿ ನಾವೆಲ್ಲರೂ ಒಂದೇ ಎಂಬ ಪ್ರತಿಜ್ಞೆ ಮಾಡಬೇಕಿದೆ” ಎಂದು ಕರೆ ನೀಡಿದರು.
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ಬಿ.ವೈ. ವಿಜಯೇಂದ್ರ ಭವಿಷ್ಯದ ನಾಯಕ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಉಪಸ್ಥಿತಿಯಲ್ಲೇ ಮಾತನಾಡಿದ ರೇಣುಕಾಚಾರ್ಯ, “ವಿಜಯೇಂದ್ರ ಅವರು ಈ ರಾಜ್ಯದ ಆಶಾ ಕಿರಣ ಮತ್ತು ಭವಿಷ್ಯದ ನಾಯಕ. ಸಮುದಾಯದ ಆಶೀರ್ವಾದ ಸದಾ ಅವರ ಮೇಲಿರಲಿ. ಯಡಿಯೂರಪ್ಪನವರು ಸಮಾಜದ ಅಭಿವೃದ್ಧಿಗೆ ಹೇಗೆ ಶ್ರಮಿಸಿದರೋ, ಅದೇ ಹಾದಿಯಲ್ಲಿ ವಿಜಯೇಂದ್ರ ಅವರೂ ಸಾಗುತ್ತಿದ್ದಾರೆ” ಎಂದು ಬಣ್ಣಿಸಿದರು.
ಸಿದ್ದರಾಮೇಶ್ವರರ ಕಾಯಕ ತತ್ವ
ಸಿದ್ದರಾಮೇಶ್ವರರ ಕುರಿತು ಮಾತನಾಡಿದ ಅವರು, “ಸಿದ್ದರಾಮೇಶ್ವರರು ಅಂದಿನ ಕಾಲದಲ್ಲೇ ಲಕ್ಷಾಂತರ ಜನರಿಗೆ ಅನುಕೂಲವಾಗುವಂತೆ ಕೆರೆಕಟ್ಟೆಗಳನ್ನು ನಿರ್ಮಿಸಿದ ಕಾಯಕ ಯೋಗಿ. ಅವರ ಜಯಂತಿಯನ್ನು ಕೇವಲ ಆಚರಣೆಗೆ ಸೀಮಿತಗೊಳಿಸದೆ, ಅವರ ತತ್ವಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ನಮ್ಮ ಸಮಾಜ ಶೈಕ್ಷಣಿಕವಾಗಿ ಮತ್ತು ರಾಜಕೀಯವಾಗಿ ಸಶಕ್ತವಾದಾಗ ಮಾತ್ರ ಇಂತಹ ಕಾರ್ಯಕ್ರಮಗಳಿಗೆ ಅರ್ಥ ಬರುತ್ತದೆ” ಎಂದರು.
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
madhayakarnatakalive@gmail.com
