ಮೊಟ್ಟ ಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ

—Advertisement—

CM Siddaramaiah
🔴 LIVE UPDATES

ಸಿದ್ಧು ಬಜೆಟ್ 2026

ಮಧ್ಯ ಕರ್ನಾಟಕದ ನಿರೀಕ್ಷೆಗಳು ಮತ್ತು ಲೈವ್ ಮುಖ್ಯಾಂಶಗಳು

ಲೈವ್ ವೀಕ್ಷಿಸಿ
ಚಿತ್ರದುರ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 6ರಂದು (ಶುಕ್ರವಾರ) ವಿಧಾನಸೌಧದಲ್ಲಿ ಮಂಡಿಸಲಿರುವ 2026–27ನೇ ಸಾಲಿನ ರಾಜ್ಯದ ಆಯವ್ಯಯದ ಬಜೆಟ್ ಭಾಷಣವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ರಾಜ್ಯದ ಆಯ್ದ ಬಸ್ ನಿಲ್ದಾಣಗಳಲ್ಲಿರುವ ಎಲ್ ಇಡಿ ಮತ್ತು ಟಿವಿ ಪರದೆಗಳ ಮೂಲಕ ಮೊತ್ತ ಮೊದಲ ಬಾರಿಗೆ ನೇರ ಪ್ರಸಾರ ಮಾಡುತ್ತಿದೆ.

17ನೇ ಬಾರಿ ಬಜೆಟ್‌ ಮಂಡನೆ

ಆರ್ಥಿಕ ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 17ನೇ ಬಾರಿ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆ ಸೃಷ್ಟಿಸುತ್ತಿದ್ದಾರೆ. ಈ ಮಹತ್ವದ ಬಜೆಟ್ ಮಂಡನೆಯ ನೇರ ಪ್ರಸಾರವನ್ನು ರಾಜ್ಯದ ಜನತೆಗೆ ತಲುಪಿಸಲು ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ. ನಿಂಬಾಳ್ಕರ್, ಐಪಿಎಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಅಳವಡಿಕೆ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ (ಡಿಐಪಿಆರ್)ಯು ಬೆಂಗಳೂರು ಮೂಲದ ವೃತ್ತಿ ಮೀಡಿಯಾ ಸಲ್ಯೂಷನ್ಸ್ ಸಂಸ್ಥೆಯ ಸಹಭಾಗಿತ್ವದಲ್ಲಿ ರಾಜ್ಯದಾದ್ಯಂತ ಇರುವ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಅಳವಡಿಸಿರುವ ಡಿಜಿಟಲ್ ಡಿಸ್ಪ್ಲೇ (ಎಲ್ಇಡಿ) ಮತ್ತು ಟಿವಿ ಪರದೆಗಳ ಮೂಲಕ ಬಜೆಟ್ ಮಂಡನೆಯ ನೇರ ಪ್ರಸಾರವನ್ನು ಮಾರ್ಚ್ 6 ರಂದು ಬೆಳಿಗ್ಗೆ 10.15 ಗಂಟೆಯಿಂದ ಪ್ರಸಾರ ಮಾಡಲಿದೆ ಎಂದು ಆಯುಕ್ತರು ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ನಡೆಯುವ ಬಜೆಟ್ ಮಂಡನೆ ಹಾಗೂ ನಂತರ ನಡೆಯಲಿರುವ ಮುಖ್ಯಮಂತ್ರಿಗಳ ಪತ್ರಿಕಾಗೋಷ್ಠಿಯನ್ನೂ ಇದೇ ಪರದೆಗಳ ಮೂಲಕ ರಾಜ್ಯದ ವಿವಿಧ ಬಸ್ ನಿಲ್ದಾಣಗಳಲ್ಲಿ ನೇರವಾಗಿ ಪ್ರಸಾರ ಮಾಡಲಾಗುತ್ತದೆ. ಇದರ ಮೂಲಕ ಸಾರ್ವಜನಿಕರು ಬಸ್ ನಿಲ್ದಾಣಗಳಲ್ಲಿಯೇ ಈ ಮಹತ್ವದ ಕಾರ್ಯಕ್ರಮವನ್ನು ವೀಕ್ಷಿಸುವ ಅವಕಾಶವನ್ನು ಪಡೆಯಲಿದ್ದಾರೆ.
ರಾಜ್ಯದಲ್ಲಿಯೇ ಮೊದಲ ಬಾರಿಗೆ ಬಸ್ ನಿಲ್ದಾಣಗಳ ಮೂಲಕ ಜನಸಾಮಾನ್ಯರಿಗೆ ಬಜೆಟ್ ಮಂಡನೆಯ ನೇರ ಪ್ರಸಾರವನ್ನು ತಲುಪಿಸುವ ಪ್ರಯತ್ನವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕೈಗೊಂಡಿದೆ. ಸಾರ್ವಜನಿಕರು ಈ ನೇರ ಪ್ರಸಾರದ ಸದುಪಯೋಗವನ್ನು ಪಡೆದುಕೊಳ್ಳುವಂತೆ ಆಯುಕ್ತರು ಮನವಿ ಮಾಡಿದ್ದಾರೆ.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

madhayakarnatakalive@gmail.com

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More

Related News

Leave a Comment

ಸಿದ್ಧು ಬಜೆಟ್ 2026
Home
Web Stories
Instagram
WhatsApp