ಚಳ್ಳಕೆರೆ: ಒಂದು ಕಡೆ ಮಧ್ಯಪ್ರಾಚ್ಯ ರಾಷ್ಟ್ರಗಳ ಯುದ್ಧದ ಭೀತಿಯಿಂದ ಅಡುಗೆ ಅನಿಲದ ಅಭಾವ ಸೃಷ್ಟಿಯಾಗಬಹುದು ಎಂಬ ಆತಂಕ, ಇನ್ನೊಂದೆಡೆ ತಾಂತ್ರಿಕ ಸಮಸ್ಯೆಯಿಂದಾಗಿ ಬುಕ್ಕಿಂಗ್ ಆಗದೆ ಪರದಾಡುತ್ತಿರುವ ಸಾರ್ವಜನಿಕರು. ಇದು ಚಳ್ಳಕೆರೆ ನಗರದ ಗ್ಯಾಸ್ ಏಜೆನ್ಸಿಗಳ ಮುಂದೆ ಇಂದು ಕಂಡುಬಂದ ದೃಶ್ಯ.
ಜಿಲ್ಲಾಧಿಕಾರಿಗಳ ಭರವಸೆ ನಡುವೆಯೂ ಆತಂಕ
ಚಿತ್ರದುರ್ಗ ಜಿಲ್ಲೆಯಲ್ಲಿ ಅಡುಗೆ ಅನಿಲದ ದಾಸ್ತಾನು ಸಾಕಷ್ಟು ಪ್ರಮಾಣದಲ್ಲಿದೆ. ಯುದ್ಧದ ಹಿನ್ನೆಲೆಯಲ್ಲಿ ಸರಬರಾಜಿನಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಆದರೆ, ವಾಸ್ತವದಲ್ಲಿ ಚಳ್ಳಕೆರೆಯ ಗ್ರಾಹಕರು ಮಾತ್ರ ಸಿಲಿಂಡರ್ ಪಡೆಯಲು ಹರಸಾಹಸ ಪಡುತ್ತಿದ್ದಾರೆ.
ಕೈಲಾಸ್ ಗ್ಯಾಸ್ ಏಜೆನ್ಸಿ ಮುಂದೆ ಮುಗಿಬಿದ್ದ ಜನ
ನಗರದ ಕೈಲಾಸ್ ಗ್ಯಾಸ್ ವಿತರಣೆ ಕೇಂದ್ರದ ಮುಂದೆ ಇಂದು ನೂರಾರು ಗ್ರಾಹಕರು ಜಮಾಯಿಸಿದ್ದರು. ಕಳೆದ ಮೂರು ದಿನಗಳಿಂದ ಗ್ಯಾಸ್ ಬುಕ್ ಮಾಡಲು ಪ್ರಯತ್ನಿಸಿದರೂ ಸರ್ವರ್ ಸಮಸ್ಯೆಯಿಂದಾಗಿ ಬುಕ್ಕಿಂಗ್ ಸಾಧ್ಯವಾಗುತ್ತಿಲ್ಲ. “ಬುಕ್ಕಿಂಗ್ ಮಾಡದೆ ಸಿಲಿಂಡರ್ ನೀಡುವುದಿಲ್ಲ” ಎಂಬ ಏಜೆನ್ಸಿಯ ನಿಯಮವು ಜನರನ್ನು ಮತ್ತಷ್ಟು ಸಂಕಷ್ಟಕ್ಕೆ ಈಡುಮಾಡಿದೆ.
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
“ಮೂರು ದಿನದಿಂದ ಫೋನ್ ಮಾಡಿದರೆ ಯಾರೂ ರಿಸೀವ್ ಮಾಡುತ್ತಿಲ್ಲ” “ನಾವಿರುವುದು ಬಾಡಿಗೆ ಮನೆಯಲ್ಲಿ. ಅಲ್ಲಿ ಕಟ್ಟಿಗೆ ಒಲೆ ಹಚ್ಚಲು ಅವಕಾಶವಿಲ್ಲ. ಗ್ಯಾಸ್ ಇಲ್ಲದೆ ಅಡುಗೆ ಮಾಡುವುದು ಹೇಗೆ? ಮೂರು ದಿನದಿಂದ ಬುಕ್ಕಿಂಗ್ ಆಗುತ್ತಿಲ್ಲ, ಇಲ್ಲಿಗೆ ಬಂದರೆ ಸರಿಯಾದ ಉತ್ತರ ಸಿಗುತ್ತಿಲ್ಲ” ಎಂದು ಗ್ರಾಹಕ ತಿಪ್ಪೇಸ್ವಾಮಿ ತಮ್ಮ ಅಳಲು ತೋಡಿಕೊಂಡಿದ್ದಾರೆ.
ಗ್ರಾಹಕರ ಆಗ್ರಹವೇನು?
ತಾಂತ್ರಿಕ ಸಮಸ್ಯೆ ಇದ್ದಲ್ಲಿ ಪರ್ಯಾಯ ವ್ಯವಸ್ಥೆಯ ಮೂಲಕ ಸಿಲಿಂಡರ್ ವಿತರಿಸಬೇಕು. ತುರ್ತು ಸಂದರ್ಭದಲ್ಲಿ ಸರ್ವರ್ ನೆಪ ಹೇಳಿ ಜನರನ್ನು ಸತಾಯಿಸಬಾರದು ಎಂಬುದು ಚಳ್ಳಕೆರೆ ಸಾರ್ವಜನಿಕರ ಒತ್ತಾಯವಾಗಿದೆ.
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
