ಚಳ್ಳಕೆರೆ: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನೇರಲಗುಂಟೆ ಗ್ರಾಮದ ಬಳಿ ಶುಕ್ರವಾರ ಸಂಜೆ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ನಾಯಕನಹಟ್ಟಿಯ ಪ್ರಸಿದ್ಧ ಶ್ರೀ ಗುರು ತಿಪ್ಪೇರುದ್ರಸ್ವಾಮಿ ರಥೋತ್ಸವದ ಸಂಭ್ರಮ ಮುಗಿಸಿ, ಭಕ್ತಿಯಿಂದ ದೇವಸ್ಥಾನದಲ್ಲಿ ದರ್ಶನ ಪಡೆದು ಬೈಕ್‌ನಲ್ಲಿ ಮನೆಗೆ ಮರಳುತ್ತಿದ್ದರು. ಈ ವೇಳೆ ನೇರಲಗುಂಟೆ ಬಳಿ ಎದುರಿನಿಂದ ಅತೀ ವೇಗವಾಗಿ ಬಂದ ಕೆಎಸ್‌ಆರ್‌ಟಿಸಿ ಬಸ್ ಇವರು ಸಂಚರಿಸುತ್ತಿದ್ದ ಬೈಕ್‌ಗೆ ಬಲವಾಗಿ ಡಿಕ್ಕಿ ಹೊಡೆದಿದೆ.
ಅಪಘಾತದ ರಭಸಕ್ಕೆ ಬೈಕ್‌ನಲ್ಲಿದ್ದ ಇಬ್ಬರೂ ಯುವಕರು ರಸ್ತೆಗೆ ಎಸೆಯಲ್ಪಟ್ಟು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಚಾಲಕನ ಅತಿಯಾದ ವೇಗ ಮತ್ತು ಅಜಾಗರೂಕತೆಯೇ ಈ ದುರಂತಕ್ಕೆ ಕಾರಣ ಎಂದು ಪ್ರಾಥಮಿಕವಾಗಿ ಅಂದಾಜಿಸಲಾಗಿದೆ.
ರಥೋತ್ಸವದ ಹಿನ್ನೆಲೆಯಲ್ಲಿ ಮನೆಗಳಲ್ಲಿ ಹಬ್ಬದ ಸಂಭ್ರಮವಿತ್ತು. ಆದರೆ, ದರ್ಶನ ಮುಗಿಸಿ ಬರುವ ಮಗನಿಗಾಗಿ ಕಾಯುತ್ತಿದ್ದ ಪೋಷಕರಿಗೆ ಇವರ ಸಾವಿನ ಸುದ್ದಿ ಬರಸಿಡಿಲಿನಂತೆ ಎರಗಿದೆ. ಘಟನೆಗೆ ಸಂಬಂಧಿಸಿದಂತೆ ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
