ಬೆಂಗಳೂರು: ಚನ್ನಗಿರಿ ಕ್ಷೇತ್ರದ ಶಾಸಕ ಬಸವರಾಜ್ ಶಿವಗಂಗಾ ಅವರ ಮಾಜಿ ಆಪ್ತ ಸಹಾಯಕ (ಪಿಎ) ಬೆಂಗಳೂರಿನ ಲಾಡ್ಜ್‌ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಮೃತಪಟ್ಟವರನ್ನು ದಾವಣಗೆರೆ ಮೂಲದ ಶಿವಕುಮಾರ್ ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ, ಫೆಬ್ರವರಿ 16ರಂದು ಬೆಂಗಳೂರಿನ ಉಪ್ಪಾರಪೇಟೆ ಬಳಿಯ ಜಿ.ಟಿ. ರೆಸಿಡೆನ್ಸಿ ಎಂಬ ಲಾಡ್ಜ್‌ನಲ್ಲಿ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.
ಪತ್ನಿಗೆ ವಿಡಿಯೋ ಕಾಲ್: ಆತ್ಮಹತ್ಯೆಗೂ ಮುನ್ನ ಶಿವಕುಮಾರ್ ಅವರು ತಮ್ಮ ಪತ್ನಿಗೆ ವಿಡಿಯೋ ಕರೆ ಮಾಡಿ, “ನನಗೆ ಜೀವನ ಸಾಕಾಗಿದೆ” ಎಂದು ತಮ್ಮ ಅಳಲು ತೋಡಿಕೊಂಡು ಬಳಿಕ ಈ ಕಠಿಣ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ಕೆಲಸದಿಂದ ವಜಾಗೊಂಡಿದ್ದ ಶಿವಕುಮಾರ್: ಮೃತ ಶಿವಕುಮಾರ್ ಅವರು ಈ ಹಿಂದೆ ಶಾಸಕ ಬಸವರಾಜ್ ಶಿವಗಂಗಾ ಅವರ ಬಳಿ ಪಿಎ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಆದರೆ, ಅವರ ಮೇಲೆ ಕೆಲ ಅಕ್ರಮಗಳ ಆರೋಪಗಳು ಕೇಳಿಬಂದಿದ್ದವು. ಈ ಆರೋಪಗಳ ಹಿನ್ನೆಲೆಯಲ್ಲಿ ಆರು ತಿಂಗಳ ಹಿಂದೆಯಷ್ಟೇ ಅವರನ್ನು ಕೆಲಸದಿಂದ ತೆಗೆದುಹಾಕಲಾಗಿತ್ತು ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ. ಸದ್ಯ ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಬಗ್ಗೆ ಮುಂದಿನ ಪ್ರಕ್ರಿಯೆಗಳು ನಡೆಯುತ್ತಿವೆ.
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
