ಚಿತ್ರದುರ್ಗಕ್ಕೆ ರಾಜ್ಯಮಟ್ಟದ ಗೌರವ: ಅಪರ ಡಿಸಿ ಕುಮಾರಸ್ವಾಮಿ, ಶಿಕ್ಷಕಿ ಅಂಬಿಕಾಗೆ ಪ್ರತಿಷ್ಠಿತ ಪ್ರಶಸ್ತಿ

Author Picture
Published On: January 24, 2026
Chitradurga Additional Deputy Commissioner BT Kumaraswamy and BLO N Ambika selected for State Level Best Electoral Practice Award

—Advertisement—

ಚಿತ್ರದುರ್ಗ, ಜ.24: ಚುನಾವಣಾ ಪ್ರಕ್ರಿಯೆಯಲ್ಲಿನ ಅತ್ಯುತ್ತಮ ಕಾರ್ಯಕ್ಷಮತೆಗಾಗಿ ನೀಡಲಾಗುವ 2025-26ನೇ ಸಾಲಿನ ರಾಜ್ಯ ಮಟ್ಟದ ಅತ್ಯುತ್ತಮ ಚುನಾವಣಾ ಅಭ್ಯಾಸ ಪ್ರಶಸ್ತಿ’ಗೆ ಜಿಲ್ಲೆಯ ಇಬ್ಬರು ಅಧಿಕಾರಿಗಳು ಭಾಜನರಾಗಿದ್ದಾರೆ.

ಅಪರ ಜಿಲ್ಲಾಧಿಕಾರಿಗೆ ಪ್ರಶಸ್ತಿ ಗರಿ: ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಗಳ ವಿಭಾಗದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಚುನಾವಣಾ ಆಯೋಗವು ಕೈಗೊಂಡಿದ್ದ ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಚುನಾವಣಾ ಆಯೋಗ ವಹಿಸಿದ ವಿವಿಧ ಕಾರ್ಯಕ್ರಮಗಳ ಅನುಷ್ಠಾನಗೊಳಿಸುವಲ್ಲಿ ಉತ್ತಮ ಕಾರ್ಯ ನಿರ್ವಹಿಸಿದಕ್ಕಾಗಿ ಆಯೋಗವು ಈ ಪ್ರಶಸ್ತಿಗಾಗಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರನ್ನು ಆಯ್ಕೆ ಮಾಡಿದೆ.

ಬಿಎಲ್‍ಒ (BLO) ವಿಭಾಗದಲ್ಲಿ ಶಿಕ್ಷಕಿ ಆಯ್ಕೆ: ಬಿಎಲ್‍ಒ ವಿಭಾಗದಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಉಪ್ಪಾರಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪದವೀಧರ ಪ್ರಾಥಮಿಕ ಶಿಕ್ಷಕಿ ಎನ್. ಅಂಬಿಕಾ ಅವರೂ ಈ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ವಿವಿಧ ಕಾರ್ಯಕ್ರಮಗಳ ಉತ್ತಮ ನಿರ್ವಹಣೆಗಾಗಿ ಬಿಎಲ್‍ಒ ಆಗಿ ಕಾರ್ಯ ನಿರ್ವಹಿಸಿರುವ ಅಂಬಿಕಾ ಅವರು ಆಯೋಗದ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ: ಇದೇ ಜನವರಿ 25ರಂದು ಬೆಳಿಗ್ಗೆ 9.30ಕ್ಕೆ ಬೆಂಗಳೂರಿನ ಸರ್ ಪುಟ್ಟಣ್ಣ ಚೆಟ್ಟಿ ಟೌನ್ ಹಾಲ್‍ನಲ್ಲಿ ಆಯೋಜಿಸಿರುವ 16ನೇ ರಾಷ್ಟ್ರೀಯ ಮತದಾರರ ದಿನಾಚರಣೆಯ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

madhayakarnatakalive@gmail.com

"ಮಧ್ಯ ಕರ್ನಾಟಕ ಲೈವ್ (Madhyakarnataka.live) ಕರ್ನಾಟಕದ ಹೃದಯಭಾಗದ ನೈಜ, ನಿಖರ ಮತ್ತು ಕ್ಷಣ ಕ್ಷಣದ ಸುದ್ದಿಗಳಿಗಾಗಿ ಮೀಸಲಾದ ಡಿಜಿಟಲ್ ಸುದ್ದಿ ವೇದಿಕೆಯಾಗಿದೆ. ಚಿತ್ರದುರ್ಗ, ದಾವಣಗೆರೆ ಸೇರಿದಂತೆ ಮಧ್ಯ ಕರ್ನಾಟಕದ ಜಿಲ್ಲೆಗಳ ಸ್ಥಳೀಯ ಸಮಸ್ಯೆಗಳು, ರಾಜಕೀಯ, ಕೃಷಿ, ಶಿಕ್ಷಣ ಮತ್ತು ಸಾಂಸ್ಕೃತಿಕ ವಿದ್ಯಮಾನಗಳನ್ನು ಜಗತ್ತಿಗೆ ತಲುಪಿಸುವುದು ನಮ್ಮ ಗುರಿ. ನಾವು ಕೇವಲ ಸುದ್ದಿಯನ್ನಷ್ಟೇ ಅಲ್ಲ, ಜನರ ಧ್ವನಿಯಾಗಲು ಬಯಸುತ್ತೇವೆ."… Read More

Related News

Leave a Comment

Home
Web Stories
Instagram
WhatsApp