ಚಿತ್ರದುರ್ಗದಲ್ಲಿ ಭೀಕರ ಕೃತ್ಯ: ಪತ್ನಿ, ಮಗಳು ಸೇರಿ ಐವರ ಮೇಲೆ ಆ್ಯಸಿಡ್ ದಾಳಿ ಮಾಡಿ ಪತಿ ಪರಾರಿ!

ಚಿತ್ರದುರ್ಗದ ಮಾಳಪ್ಪನಹಟ್ಟಿಯಲ್ಲಿ ಪತ್ನಿ ತಾಸಿನಾಬಾನು ಮತ್ತು ಐವರ ಮೇಲೆ ಪತಿ ಸುಹೇಲ್ ಆ್ಯಸಿಡ್ ದಾಳಿ
— ಚಿತ್ರದುರ್ಗದ ಮಾಳಪ್ಪನಹಟ್ಟಿಯಲ್ಲಿ ಪತ್ನಿ ಮತ್ತು ಮಗಳ ಮೇಲೆ ಆ್ಯಸಿಡ್ ದಾಳಿ

—Election Update—

ಚಿತ್ರದುರ್ಗ: ಕೋಟೆ ನಾಡಿನಲ್ಲಿ ಕೌಟುಂಬಿಕ ಕಲಹವೊಂದು ವಿಕೋಪಕ್ಕೆ ಹೋಗಿದ್ದು, ಪತ್ನಿಯ ಮೇಲೆ ಕೋಪಗೊಂಡ ಪತಿಯೊಬ್ಬ ಪತ್ನಿ, ಮಗಳು ಸೇರಿದಂತೆ ಐವರ ಮೇಲೆ ಆ್ಯಸಿಡ್ ದಾಳಿ ನಡೆಸಿರುವ ಘೋರ ಘಟನೆ ನಗರದ ಮಾಳಪ್ಪನಹಟ್ಟಿಯಲ್ಲಿ ನಡೆದಿದೆ.

ಏನಿದು ಘಟನೆ?

ನಗರದ ಮಾಳಪ್ಪನಹಟ್ಟಿ ನಿವಾಸಿ ಮೊಹಮ್ಮದ್ ಸುಹೇಲ್ (44) ಎಂಬಾತನೇ ಈ ಕೃತ್ಯ ಎಸಗಿದ ಆರೋಪಿ. ಸುಹೇಲ್ ಮತ್ತು ಆತನ ಪತ್ನಿ ತಾಸಿನಾಬಾನು ಪ್ರೀತಿಸಿ ವಿವಾಹವಾಗಿದ್ದರು. ಆದರೆ, ಸುಹೇಲ್ ನೀಡುತ್ತಿದ್ದ ಮಾನಸಿಕ ಹಾಗೂ ದೈಹಿಕ ಕಿರುಕುಳ ತಾಳಲಾರದೆ ತಾಸಿನಾ ಕಳೆದ ಎಂಟು ತಿಂಗಳಿನಿಂದ ಪತಿಯಿಂದ ದೂರವಿದ್ದು, ಬೆಂಗಳೂರಿನಲ್ಲಿ ವಾಸವಿದ್ದರು.

ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ತಾಸಿನಾ ಅವರು ಮಾಳಪ್ಪನಹಟ್ಟಿಯಲ್ಲಿರುವ ತಮ್ಮ ಸಹೋದರಿಯ ಮನೆಗೆ ಆಗಮಿಸಿದ್ದರು. ಈ ವಿಷಯ ತಿಳಿದ ಸುಹೇಲ್, ಗುರುವಾರ ಏಕಾಏಕಿ ಮನೆಗೆ ನುಗ್ಗಿ ಪತ್ನಿ, ಮಗಳು ಹಾಗೂ ಮನೆಯಲ್ಲಿದ್ದ ಇತರರ ಮೇಲೆ ಆ್ಯಸಿಡ್ ಎರಚಿದ್ದಾನೆ. ಅಷ್ಟೇ ಅಲ್ಲದೆ, ಲಾಂಗ್‌ನಿಂದ (ಮಚ್ಚು) ಪತ್ನಿಯ ಮೇಲೆ ಹಲ್ಲೆ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಗಾಯಾಳುಗಳ ಸ್ಥಿತಿ:

ದಾಳಿಯಲ್ಲಿ ತಾಸಿನಾಬಾನು ಹಾಗೂ ಮಗಳು ಸೇರಿದಂತೆ ಒಟ್ಟು ಐವರು ಗಾಯಗೊಂಡಿದ್ದಾರೆ. ಕೂಡಲೇ ಇವರನ್ನು ದಾವಣಗೆರೆಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಪೊಲೀಸ್ ಭೇಟಿ ಮತ್ತು ತನಿಖೆ:

ಘಟನಾ ಸ್ಥಳಕ್ಕೆ ಚಿತ್ರದುರ್ಗ ಎಸ್‌ಪಿ ರಂಜಿತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, “ಆರೋಪಿ ಸುಹೇಲ್ ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದು, ಕೌಟುಂಬಿಕ ದ್ವೇಷದಿಂದ ಈ ಕೃತ್ಯ ಎಸಗಿದ್ದಾನೆ. ಆರೋಪಿಯ ಬಂಧನಕ್ಕಾಗಿ ವಿಶೇಷ ತಂಡವನ್ನು ರಚಿಸಲಾಗಿದ್ದು, ಶೀಘ್ರವೇ ಆತನನ್ನು ಸೆರೆಹಿಡಿಯಲಾಗುವುದು,” ಎಂದು ತಿಳಿಸಿದ್ದಾರೆ. ಚಿತ್ರದುರ್ಗದ ಕೋಟೆ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

📩 ಸುದ್ದಿ ಕಳುಹಿಸಿ

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More

Related News

Leave a Comment

Home
Web Stories
Instagram
WhatsApp