ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ ಭೂದಾಖಲೆಗಳ ಉಪನಿರ್ದೇಶಕರಾಗಿ (DDLR) ಸುದೀರ್ಘ ಹಾಗೂ ಯಶಸ್ವಿ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದಿರುವ ಬಿ.ರಾಮಾಂಜನೇಯ ಅವರಿಗೆ ಜೂನ್ 01 ರಂದು ಜಿಲ್ಲಾಡಳಿತ ಹಾಗೂ ಇಲಾಖೆಯ ವತಿಯಿಂದ ಗೌರವಪೂರ್ವಕ ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.
ಜೂನ್ 01ರ ಸೋಮವಾರ ಸಂಜೆ 5.30ಕ್ಕೆ ಚಿತ್ರದುರ್ಗ ನಗರದ ರಾಷ್ಟ್ರೀಯ ಹೆದ್ದಾರಿ-48ರ (NH-48) ಸರ್ವೀಸ್ ರಸ್ತೆಯಲ್ಲಿರುವ ಕೆಇಬಿ ಸಮುದಾಯ ಭವನದಲ್ಲಿ ಈ ಬಿಳ್ಕೊಡುಗೆ ಕಾರ್ಯಕ್ರಮ ನಡೆಯಲಿದೆ.

ಗಣ್ಯರ ಉಪಸ್ಥಿತಿ:
ಈ ಅರ್ಥಪೂರ್ಣ ಸಮಾರಂಭಕ್ಕೆ ಭೂ ಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯ ಆಯುಕ್ತರಾದ ವೆಂಕಟರಾಜ, ಚಿತ್ರದುರ್ಗ ಜಿಲ್ಲಾಧಿಕಾರಿಗಳಾದ ಟಿ.ವೆಂಕಟೇಶ್ ಹಾಗೂ ಭೂ ದಾಖಲೆಗಳ ಹೆಚ್ಚುವರಿ ನಿರ್ದೇಶಕರಾದ ಕೆ.ಜಯಪ್ರಕಾಶ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ಅಲ್ಲದೆ, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮತ್ತು ಬೆಂಗಳೂರು ವಿಭಾಗದ ಪ್ರಾದೇಶಿಕ ಭೂ ದಾಖಲೆಗಳ ಜಂಟಿ ನಿರ್ದೇಶಕರಾದ ಎಸ್.ನಿಸಾರ್ ಅಹ್ಮದ್ ಅವರು ಉಪಸ್ಥಿತರಿರಲಿದ್ದಾರೆ. ಚಿತ್ರದುರ್ಗ ಭೂ ದಾಖಲೆಗಳ ಸಹಾಯಕ ನಿರ್ದೇಶಕರಾದ ಏಕನಾಥ್ ವಿ.ಆರ್.ಎಮ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
