Chitradurga: ಮೆಟ್ರಿಕ್ ಪೂರ್ವ, ನಂತರದ ವಿಕಲಚೇತನ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

ssp-disabled-students-scholarship

—Election Update—

ಚಿತ್ರದುರ್ಗ: ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ (ಎಸ್‍ಎಸ್‍ಪಿ ಫೋರ್ಟಲ್) 2026–27ನೇ ಸಾಲಿನ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

2026ರ ಜೂನ್ 10 ರಿಂದಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಅರ್ಹ ವಿಕಲಚೇತನ ವಿದ್ಯಾರ್ಥಿಗಳು ತಾವು ಓದುತ್ತಿರುವ ಕಾಲೇಜು, ಶಿಕ್ಷಣ ಸಂಸ್ಥೆಗಳ ಮುಖಾಂತರ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ವೆಬ್‍ಸೈಟ್‍ಗಳಾದ https://ssp.postmatric.karnataka.gov.in/ ಅಥವಾ https://ssp.postmatric.karnataka.gov.in/post_sa_2627/login ಮೂಲಕ ಲಾಗಿನ್ ಆಗಿ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿದ ನಂತರ, ಅದರ ಒಂದು ಪ್ರತಿಯನ್ನು ಆಯಾ ತಾಲ್ಲೂಕು ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು ಅಥವಾ ಗ್ರಾಮ ಪಂಚಾಯಿತಿಯ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ ಸಲ್ಲಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಕೋರಲಾಗಿದೆ.

ಹೆಚ್ಚಿನ ಮಾಹಿತಿ ಹಾಗೂ ನೆರವಿಗಾಗಿ ಚಿತ್ರದುರ್ಗ-9880821934), ಚಳ್ಳಕೆರೆ-9611266930, ಹಿರಿಯೂರು-9902888901, 9902898901, ಹೊಳಲ್ಕೆರೆ-9740030227, ಹೊಸದುರ್ಗ -9741829990 ಹಾಗೂ ಮೊಳಕಾಲ್ಮೂರು -9742725576 ತಾಲ್ಲೂಕಿನ ಫುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸಬಹುದಾಗಿದೆ. ಅಥವಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಬಾಲಭವನ ಆವರಣ, ಒನಕೆ ಓಬವ್ವ ಸ್ಟೇಡಿಯಂ ಹತ್ತಿರ, ಚಿತ್ರದುರ್ಗ ಇಲ್ಲಿಗೆ ಭೇಟಿ ನೀಡಬಹುದು. ಕಚೇರಿ ದೂರವಾಣಿ ಸಂಖ್ಯೆ: 01894–235284 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

📩 ಸುದ್ದಿ ಕಳುಹಿಸಿ

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More

Related News

Home
Web Stories
Instagram
WhatsApp