ಚಿತ್ರದುರ್ಗ (ಮಧ್ಯ ಕರ್ನಾಟಕ ಲೈವ್): ಜಿಲ್ಲೆಯ ವಿಶೇಷ ಚೇತನರ ಓಡಾಟಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳು ಮಹತ್ವದ ಹೆಜ್ಜೆಯಿಟ್ಟಿವೆ. ವಿಶೇಷ ಚೇತನರಿಗೆ ಉಚಿತವಾಗಿ ಮೋಟಾರ್ ಚಾಲಿತ ತ್ರಿ-ಚಕ್ರ ವಾಹನಗಳ (Chitradurga News, Chitradurga District Administration, Free Tricycle scheme, Scheme for differently-abled, Karnataka News.) ವಿತರಣಾ ಬೃಹತ್ ಕಾರ್ಯಕ್ರಮವನ್ನು ಮಾರ್ಚ್ 02 ರಂದು ಹಮ್ಮಿಕೊಳ್ಳಲಾಗಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಸಾರಿಗೆ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ದಾವಣಗೆರೆ ಕಾರ್ಖಾನೆಗಳ ಹಾಗೂ ಬಾಯ್ಲರ್‍ಗಳ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಈ ಅರ್ಥಪೂರ್ಣ ಕಾರ್ಯಕ್ರಮ ಆಯೋಜನೆಗೊಂಡಿದೆ.
ಕಾರ್ಯಕ್ರಮದ ಸಂಪೂರ್ಣ ವಿವರ ಇಲ್ಲಿದೆ:
-
ದಿನಾಂಕ: ಮಾರ್ಚ್ 02
Read Also: ಮಾ.03 ರಂದು ಶ್ರೀ ಯೋಗಿನಾರೇಯಣ ಯತೀಂದ್ರರ ಜಯಂತಿ -
ಸಮಯ: ಬೆಳಿಗ್ಗೆ 10.30ಕ್ಕೆ
-
ಸ್ಥಳ: ಜಿಲ್ಲಾ ಪಂಚಾಯತ್ ಆವರಣ, ಚಿತ್ರದುರ್ಗ ನಗರ
ಉದ್ಘಾಟನೆ ಹಾಗೂ ಗಣ್ಯರ ಉಪಸ್ಥಿತಿ
ಕಾರ್ಯಕ್ರಮದ ಉದ್ಘಾಟನೆಯನ್ನು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರು ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಿತ್ರದುರ್ಗ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ವಹಿಸಲಿದ್ದಾರೆ.
ಕಾರ್ಮಿಕ ಸಚಿವ ಸಂತೋಷ್ ಲಾಡ್, ಚಳ್ಳಕೆರೆ ಶಾಸಕರು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ. ರಘುಮೂರ್ತಿ, ಹೊಸದುರ್ಗ ಶಾಸಕರು ಹಾಗೂ ಆಹಾರ ಮತ್ತು ನಾಗರೀಕ ಸರಬರಾಜು ನಿಗಮದ ಅಧ್ಯಕ್ಷ ಬಿ.ಜಿ. ಗೋವಿಂದಪ್ಪ, ಸಂಸದ ಗೋವಿಂದ ಎಂ. ಕಾರಜೋಳ ಅವರು ಘನ ಉಪಸ್ಥಿತರಿರುವರು.
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ಮುಖ್ಯ ಅತಿಥಿಗಳಾಗಿ ಯಾರೆಲ್ಲಾ ಭಾಗಿ?
-
ಡಾ. ಬಿ. ಯೋಗೇಶ್ ಬಾಬು (ಅಧ್ಯಕ್ಷರು, ಕರ್ನಾಟಕ ದ್ರಾಕ್ಷಾರಸ ಮಂಡಳಿ)
-
ಜಿ.ಎಸ್. ಮಂಜುನಾಥ್ (ಅಧ್ಯಕ್ಷರು, ಆದಿಜಾಂಬವ ಅಭಿವೃದ್ಧಿ ನಿಗಮ)
-
ಪಿ. ರಘು (ಅಧ್ಯಕ್ಷರು, ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗ)
-
ಹೆಚ್.ಪಿ. ಮಂಜಪ್ಪ (ಅಧ್ಯಕ್ಷರು, ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ)
-
ಎನ್.ವೈ. ಗೋಪಾಲಕೃಷ್ಣ (ಮೊಳಕಾಲ್ಮುರು ಶಾಸಕರು)
-
ಡಾ. ಎಂ. ಚಂದ್ರಪ್ಪ (ಹೊಳಲ್ಕೆರೆ ಶಾಸಕರು)
-
ಚಿದಾನಂದ ಎಂ. ಗೌಡ, ಕೆ.ಎಸ್. ನವೀನ್, ಡಿ.ಟಿ. ಶ್ರೀನಿವಾಸ್ (ವಿಧಾನ ಪರಿಷತ್ ಸದಸ್ಯರು)
-
ತಾಜ್‍ಪೀರ್ (ಅಧ್ಯಕ್ಷರು, ನಗರಾಭಿವೃದ್ಧಿ ಪ್ರಾಧಿಕಾರ)
-
ಆರ್. ಶಿವಣ್ಣ (ಅಧ್ಯಕ್ಷರು, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ)
ವಿಶೇಷ ಆಹ್ವಾನಿತ ಅಧಿಕಾರಿಗಳು:
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಮ್ಲಾನ್ ಆದಿತ್ಯ ಬಿಸ್ವಾಸ್, ಜಿಲ್ಲಾಧಿಕಾರಿ ಟಿ. ವೆಂಕಟೇಶ್, ಜಿ.ಪಂ ಸಿಇಒ ಡಾ. ಎಸ್. ಆಕಾಶ್, ಜಿಲ್ಲಾ ಪೊಲೀಸ್ ಅಧೀಕ್ಷಕ ರಂಜಿತ್ ಕುಮಾರ್ ಬಂಡಾರು, ಉಪ ಕಾರ್ಮಿಕ ಆಯುಕ್ತ ಡಾ. ವೆಂಕಟೇಶ್ ಶಿಂದಿಹಟ್ಟಿ, ಸಹಾಯಕ ಕಾರ್ಮಿಕ ಆಯುಕ್ತ ಡಾ. ಅವಿನಾಶ್ ನಾಯಕ್, ಕಾರ್ಖಾನೆಗಳ ಸಹಾಯಕ ನಿರ್ದೇಶಕ ಚಿನ್ಮಯಿ ತೋರಗಲ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ. ವೈಶಾಲಿ, ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ ಎಂ. ಕಾಳಿಸಿಂಗೆ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ತ್ರಿ-ಚಕ್ರ ವಾಹನ ಕೊಡುಗೆ ನೀಡಿದ ಕೈಗಾರಿಕೆಗಳು
ಸಾಮಾಜಿಕ ಹೊಣೆಗಾರಿಕೆಯಡಿ (CSR) ಜಿಲ್ಲೆಯ ಈ ಕೆಳಕಂಡ ಕೈಗಾರಿಕೆಗಳು ವಿಶೇಷ ಚೇತನರಿಗೆ ತ್ರಿ-ಚಕ್ರ ವಾಹನಗಳನ್ನು ಕೊಡುಗೆಯಾಗಿ ನೀಡಿವೆ ಎಂದು ಕಾರ್ಮಿಕ ಅಧಿಕಾರಿ ಅನಿಲ್ ಬಿ. ಬಗಟಿ ಮಾಹಿತಿ ನೀಡಿದ್ದಾರೆ:
-
ಎಂ/ಎಸ್ ಪ್ರಕಾಶ್ ಸ್ಪಾಂಜ್ ಐರನ್ ಅಂಡ್ ಪವರ್ ಪ್ರೈ.ಲಿ (ಹೆಗ್ಗೆರೆ, ಚಳ್ಳಕೆರೆ)
-
ಮೋರೇಶ್ವರ ಆಗ್ರೋ ಫೀಡ್ಸ್ ಪ್ರೈ.ಲಿ (ಚಿತ್ರದುರ್ಗ)
-
ಅರವಿಂದ್ ಲಿಮಿಟೆಡ್
-
ಸ್ನೇಹ ಫಾರ್ಮ್ಸ್ ಪ್ರೈ.ಲಿ (ಹಿರಿಯೂರು)
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
madhayakarnatakalive@gmail.com
