ವಿಶೇಷ ಚೇತನರಿಗೆ ಮೋಟಾರ್ ಚಾಲಿತ ತ್ರಿ-ಚಕ್ರ ವಾಹನಗಳ ವಿತರಣೆ

—Advertisement—

ಚಿತ್ರದುರ್ಗ: ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಸೋಮವಾರ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರು ವಿಶೇಷ ಚೇತನರಿಗೆ ಮೋಟಾರ್ ಚಾಲಿತ ತ್ರಿ-ಚಕ್ರವಾಹನಗಳ ವಿತರಣೆ ಮಾಡಿದರು.

ಸಿಎಸ್‌ಆರ್‌ ನಿಧಿಯಲ್ಲಿ ವಿತರಣೆ

ಕಾರ್ಮಿಕ ಅಧಿಕಾರಿ ಅನಿಲ್ ಬಿ ಬಗಟಿ ಮಾಹಿತಿ ನೀಡಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಸಾರಿಗೆ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ದಾವಣಗೆರೆ ಕಾರ್ಖಾನೆಗಳ ಮತ್ತು ಬಾಯ್ಲರ್‌ಗಳ ಇಲಾಖೆ ಇವರುಗಳ ಸಹಯೋಗದಲ್ಲಿ ಸಿಎಸ್ಆರ್ ನಿಧಿಯಲ್ಲಿ ವಿಶೇಷ ಚೇತನರಿಗೆ ಮೋಟಾರ್ ಚಾಲಿತ ತ್ರಿ-ಚಕ್ರವಾಹನಗಳ ವಿತರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.
ಚಳ್ಳಕೆರೆ ಹೆಗ್ಗೆರೆ ಎಂ/ಎಸ್ ಪ್ರಕಾಶ್ ಸ್ಪಾಂಜ್ ಐರನ್ ಅಂಡ್ ಪವರ್ ಪ್ರೈ.ಲಿ ಅವರು 03 ತ್ರಿ-ಚಕ್ರ ವಾಹನಗಳು, ಚಿತ್ರದುರ್ಗ ಮೋರೇಶ್ವರ ಆಗ್ರೋ ಫೀಡ್ಸ್ ಪ್ರೈ.ಲಿ, ಅರವಿಂದ್ ಲಿಮಿಟೆಡ್, ಹಿರಿಯೂರು ಸ್ನೇಹ ಫಾಮ್ರ್ಸ್ ಪ್ರೈ.ಲಿ ಕೈಗಾರಿಕೆಗಳು ತಲಾ 1 ತ್ರಿ-ಚಕ್ರ ವಾಹನಗಳು ಸೇರಿದಂತೆ ಒಟ್ಟು 6 ತ್ರಿ-ಚಕ್ರ ವಾಹನಗಳನ್ನು ವಿಶೇಷ ಚೇತನರಿಗೆ ಕೊಡುಗೆ ನೀಡಿವೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಚಳ್ಳಕೆರೆ ಶಾಸಕರು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಅಧ್ಯಕ್ಷ ಟಿ.ರಘುಮೂರ್ತಿ, ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿ.ಪಂ ಸಿಇಒ ಡಾ.ಎಸ್.ಆಕಾಶ್, ಜಿಲ್ಲಾ ಪೊಲೀಸ್ ಅಧೀಕ್ಷಕ ರಂಜಿತ್ ಕುಮಾರ್ ಬಂಡಾರು, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ, ಕಾರ್ಮಿಕ ನಿರೀಕ್ಷಕ ಭೀಮೇಶ್, ಬಾಲಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕ ಪಿ.ಸತೀಶ್ ಕುಮಾರ್ ಇದ್ದರು.

ಹೆಚ್ಚಿನ ಮಾಹಿತಿಗಾಗಿ ಲಿಂಕ್‌ಗಳು:

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

madhayakarnatakalive@gmail.com

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More

Related News

Leave a Comment

Home
Web Stories
Instagram
WhatsApp