ಚಿತ್ರದುರ್ಗ: ಮೇ 18 ರಂದು ‘ಶ್ರೀಮನಗಂದು ಗ್ರಂಥಾಲಯ ಅನುಷ್ಠಾನ’ ಸಮಾರಂಭ – ಸಾಹಿತ್ಯಾಸಕ್ತರಿಗೆ ಆಮಂತ್ರಣ

ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ಮತ್ತು ಚಿತ್ರದುರ್ಗ ಜಿಲ್ಲಾ ಜಾಗೃತ ಸಮಿತಿ ವತಿಯಿಂದ ಗ್ರಂಥಾಲಯ ಅನುಷ್ಠಾನ ಸಮಾರಂಭದ ಆಮಂತ್ರಣ.

—Election Update—

ಚಿತ್ರದುರ್ಗ: ಕೋಟೆ ನಾಡು ಚಿತ್ರದುರ್ಗದಲ್ಲಿ ಸಾಹಿತ್ಯ ಮತ್ತು ಸಂಸ್ಕೃತಿಯ ಕಂಪನ್ನು ಪಸರಿಸುವ ಉದ್ದೇಶದಿಂದ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ವಿಶೇಷ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿದೆ.

ಕಾರ್ಯಕ್ರಮದ ವಿವರ:

ಬರುವ ಸೋಮವಾರ, ಮೇ 18, 2026 ರಂದು ಸಂಜೆ 4.30 ಕ್ಕೆ, ನಗರದ ಜೆ.ಎಂ.ಐ.ಟಿ ಸರ್ವಿಸ್ ರಸ್ತೆಯಲ್ಲಿರುವ ಡಾ. ನಟರಾಜ ರವರ ನಿವಾಸ ‘ಗೌರಿ’ಯಲ್ಲಿ “ಶ್ರೀಮನಗಂದು ಗ್ರಂಥಾಲಯ ಅನುಷ್ಠಾನ” ಸಮಾರಂಭವು ಜರುಗಲಿದೆ.

ಉದ್ಘಾಟನೆ ಮತ್ತು ಅಧ್ಯಕ್ಷತೆ:

ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಮಾನಸ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಅಪರಾಧಶಾಸ್ತ್ರದ ವಿಶ್ರಾಂತ ಪ್ರಾಧ್ಯಾಪಕರಾದ ಡಾ. ನಟರಾಜ್ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

ವಿಷಯ ಮಂಡನೆ:

ನಿವೃತ್ತ ಪ್ರಾಂಶುಪಾಲರು ಹಾಗೂ ಇತಿಹಾಸ ಸಂಶೋಧಕರಾದ ಡಾ. ಬಿ. ರಾಜಶೇಖರಪ್ಪ ಅವರು “ಗ್ರಂಥಾಲಯಗಳ ಮಹತ್ವ” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಜಿಲ್ಲಾ ಜಾಗೃತ ಸಮಿತಿಯ ಸಂಚಾಲಕ ಶ್ರೀ ನಿರಂಜನ ದೇವರಮನೆ ಅವರು ಆಶಯ ನುಡಿಗಳನ್ನಾಡಲಿದ್ದಾರೆ.

ಮುಖ್ಯ ಅತಿಥಿಗಳು:

ಕಾರ್ಯಕ್ರಮದಲ್ಲಿ ಗಣಿತಶಾಸ್ತ್ರದ ವಿಶ್ರಾಂತ ಪ್ರಾಧ್ಯಾಪಕಿ ಡಾ. ಮಂಗಳ ಗೌರಿ, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಿ.ಎಸ್. ವಿನಾಯಕ ತೊಡರನಾಳ್, ಮಾಧ್ಯಮ ಅಕಾಡೆಮಿ ಸದಸ್ಯ ಎಂ.ಎನ್. ಅಹೋಬಲಪತಿ ಹಾಗೂ ಕಸಾಪ ಮಾಜಿ ಜಿಲ್ಲಾಧ್ಯಕ್ಷ ಆರ್. ಮಲ್ಲಿಕಾರ್ಜುನಯ್ಯ ಉಪಸ್ಥಿತರಿರಲಿದ್ದಾರೆ.

ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ಹಾಗೂ ಜಿಲ್ಲಾ ಜಾಗೃತ ಸಮಿತಿಯ ಎಲ್ಲಾ ಸದಸ್ಯರು ಈ ಸಾಹಿತ್ಯಿಕ ಕಾರ್ಯಕ್ರಮಕ್ಕೆ ಆತ್ಮೀಯ ಸ್ವಾಗತ ಕೋರಿದ್ದಾರೆ.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

📩 ಸುದ್ದಿ ಕಳುಹಿಸಿ

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More

Related News

Home
Web Stories
Instagram
WhatsApp