ಚಿತ್ರದುರ್ಗ: ಭಾನುವಾರ ರಾತ್ರಿ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ ಜಿಲ್ಲೆಯಲ್ಲಿ ಸರಾಸರಿ 6.1 ಮಿ.ಮೀ ಮಳೆಯಾಗಿದೆ. ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ 8.4 ಮಿ.ಮೀ, ಚಿತ್ರದುರ್ಗ ತಾಲ್ಲೂಕಿನಲ್ಲಿ 4.5 ಮಿ.ಮೀ, ಹಿರಿಯೂರು ತಾಲ್ಲೂಕು 4.9 ಮಿ.ಮೀ, ಹೊಳಲ್ಕೆರೆ ತಾಲ್ಲೂಕು 5.2 ಮಿ.ಮೀ, ಹೊಸದುರ್ಗ ತಾಲ್ಲೂಕಿನಲ್ಲಿ 8.9 ಮಿ.ಮೀ ಹಾಗೂ ಮೊಳಕಾಲ್ಮುರು ತಾಲ್ಲೂಕಿನಲ್ಲಿ 1.2 ಮಿ.ಮೀ ಮಳೆಯಾಗಿದೆ.
ಹೋಬಳಿವಾರು ಮಳೆ ವಿವರ:
ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆಯಲ್ಲಿ 12.7 ಮಿ.ಮೀ, ನಾಯಕನಹಟ್ಟಿ 4.4 ಮಿ.ಮೀ, ಪರಶುರಾಂಪುರ 8.8 ಮಿ.ಮೀ, ತಳಕು 8.8 ಮಿ.ಮೀ ಮಳೆಯಾಗಿದೆ.

ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗದಲ್ಲಿ 8.5 ಮಿ.ಮೀ, ಭರಮಸಾಗರ 0.2 ಮಿ.ಮೀ, ಹಿರೇಗುಂಟನೂರು 2.9 ಮಿ.ಮೀ, ತುರುವನೂರು 2.6 ಮಿ.ಮೀ ಮಳೆಯಾಗಿದೆ.
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ಹಿರಿಯೂರು ತಾಲ್ಲೂಕಿನ ಹಿರಿಯೂರಿನಲ್ಲಿ 4 ಮಿ.ಮೀ, ಐಮಂಗಲದಲ್ಲಿ 7.5 ಮಿ.ಮೀ, ಧರ್ಮಪುರದಲ್ಲಿ 7.6 ಮಿ.ಮೀ, ಜವನಗೊಂಡನಹಳ್ಳಿ 1.4 ಮಿ.ಮೀ ಮಳೆಯಾಗಿದೆ.

ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 4.9 ಮಿ.ಮೀ, ಬಿ.ದುರ್ಗ 0.8 ಮಿ.ಮೀ, ರಾಮಗಿರಿ 2.2 ಮಿ.ಮೀ, ತಾಳ್ಯ 8.6 ಮಿ.ಮೀ ಮಳೆಯಾಗಿದೆ.
ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 12 ಮಿ.ಮೀ, ಮಾಡದಕೆರೆ 7.7 ಮಿ.ಮೀ, ಮತ್ತೋಡು 6.5 ಮಿ.ಮೀ, ಶ್ರೀರಾಂಪುರ 5.6 ಮಿ.ಮೀ ಮಳೆಯಾಗಿದೆ.
ಮೊಳಕಾಲ್ಮುರು ತಾಲ್ಲೂಕಿನ ಮೊಳಕಾಲ್ಮೂರಿನಲ್ಲಿ 2.3 ಮಿ.ಮೀ ಹಾಗೂ ದೇವಸಮುದ್ರದಲ್ಲಿ 1.1 ಮಿ.ಮೀ ಮಳೆಯಾಗಿದೆ.
10 ಮನೆಗಳಿಗೆ ಭಾಗಶಃ ಹಾನಿ: ಮಳೆಯಿಂದಾಗಿ ಜಿಲ್ಲೆಯಾದ್ಯಂತ 10 ಮನೆಗಳು ಭಾಗಶಃ ಹಾನಿಯಾಗಿದೆ.
ಚಳ್ಳಕೆರೆ ತಾಲ್ಲೂಕಿನಲ್ಲಿ 3 ಮನೆ ಭಾಗಶಃ ಹಾನಿ, ಹಿರಿಯೂರು ತಾಲ್ಲೂಕಿನಲ್ಲಿ 5 ಮನೆ ಭಾಗಶಃ ಹಾನಿ, ಹೊಸದುರ್ಗ ತಾಲ್ಲೂಕಿನಲ್ಲಿ 1 ಮನೆ ಭಾಗಶಃ ಹಾನಿ ಹಾಗೂ ಮೊಳಕಾಲ್ಮುರು ತಾಲ್ಲೂಕಿನಲ್ಲಿ 1 ಮನೆ ಭಾಗಶಃ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
