ಪರಿಶಿಷ್ಟ ಜಾತಿ ಅಲೆಮಾರಿ ಸಮುದಾಯದವರಿಂದ ವಸತಿ ಯೋಜನೆಗೆ ಅರ್ಜಿ ಆಹ್ವಾನ

sc-nomadic-housing-scheme-2026

—Election Update—

ಚಿತ್ರದುರ್ಗ : ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ ಜಿಲ್ಲೆಯ ಪರಿಶಿಷ್ಟ ಜಾತಿಯ ಅಲೆಮಾರಿ ಸಮುದಾಯದ ಜನರಿಗೆ ವಸತಿ ಯೋಜನೆಯಡಿ ಮನೆ ನಿರ್ಮಿಸಿಕೊಡಲು ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿ ಅಲೆಮಾರಿ ಸಮುದಾಯದವರಿಗೆ ಸ್ವಂತ ನಿವೇಶನ ಹೊಂದಿದ್ದು, ವಸತಿ ರಹಿತರಾಗಿರುವ ಟೆಂಟ್ ಅಥವಾ ಗುಡಿಸಲುಗಳಲ್ಲಿ ವಾಸಿಸುತ್ತಿರುವ ಅಲೆಮಾರಿ ಕುಟುಂಬಗಳು ಈ ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ.
ಚಿತ್ರದುರ್ಗ ಜಿಲ್ಲೆಗೆ ಪರಿಶಿಷ್ಟ ಜಾತಿಯ ಸಮುದಾಯದವರಿಗೆ ಒಟ್ಟು 100 ಮನೆಗಳ ನಿರ್ಮಾಣದ ಗುರಿ ನಿಗದಿಪಡಿಸಲಾಗಿದೆ. ಜಿಲ್ಲೆಯ ವ್ಯಾಪ್ತಿಗೆ ಬರುವ ಎಲ್ಲಾ ತಾಲ್ಲೂಕುಗಳ ಅರ್ಹ ಫಲಾನುಭವಿಗಳು ಅಗತ್ಯ ದಾಖಲೆಗಳೊಂದಿಗೆ ತಮ್ಮ ಆಯಾ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಕಚೇರಿಯನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.
ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಫಲಾನುಭವಿಗಳು ಸ್ವಂತ ನಿವೇಶನ ಹೊಂದಿರುವುದಕ್ಕೆ ಸಂಬಂಧಿಸಿದ ಹಕ್ಕುಪತ್ರ ಅಥವಾ ಪೂರಕ ದಾಖಲಾತಿ ಪ್ರತಿ, 2 ಪಾಸ್ಫೋರ್ಟ್ ಅಳತೆಯ ಇತ್ತೀಚಿನ ಭಾವಚಿತ್ರಗಳು, ಆರ್.ಡಿ ಸಂಖ್ಯೆ ಹೊಂದಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ ಹಾಗೂ ಬ್ಯಾಂಕ್ ಖಾತೆಯ ಪಾಸ್ಬುಕ್ ನಕಲು ಪ್ರತಿಯನ್ನು ಒದಗಿಸಬೇಕಿರುತ್ತದೆ. ಅರ್ಹ ಫಲಾನುಭವಿಗಳು ಅಗತ್ಯ ದಾಖಲೆಗಳ ಸಮೇತ ಆಯಾ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಕಚೇರಿ ಸಂಪರ್ಕಿಸಿ ಯೋಜನೆಯ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

📩 ಸುದ್ದಿ ಕಳುಹಿಸಿ

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More

Related News

Home
Web Stories
Instagram
WhatsApp