ಚಿತ್ರದುರ್ಗದಲ್ಲಿ ಭೀಕರ ಸರಣಿ ಅಪಘಾತ: ಬೈಕ್ ಸವಾರರಿಬ್ಬರು ಸ್ಥಳದಲ್ಲೇ ದುರ್ಮರಣ!

ಚಿತ್ರದುರ್ಗದ ತಮಟಕಲ್ಲು ಬಳಿ ನಡೆದ ಲಾರಿ, ಕಾರು ಮತ್ತು ಬೈಕ್ ಸರಣಿ ಅಪಘಾತದ ಸ್ಥಳ

—Election Update—

ಚಿತ್ರದುರ್ಗ: ಜಿಲ್ಲೆಯ ತಮಟಕಲ್ಲು ಗ್ರಾಮದ ಬಳಿ ಭಾನುವಾರ ಮುಂಜಾನೆ ಕರುಳು ಹಿಂಡುವ ಘಟನೆಯೊಂದು ಸಂಭವಿಸಿದೆ. ಲಾರಿ, ಕಾರು ಹಾಗೂ ಬೈಕ್ ನಡುವೆ ನಡೆದ ಭೀಕರ ಸರಣಿ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಜೀವ ಕಳೆದುಕೊಂಡಿದ್ದಾರೆ.

ಘಟನೆಯ ವಿವರ:

ಆಲಘಟ್ಟ ಗ್ರಾಮದ ನಿವಾಸಿಗಳಾದ ಗೋವಿಂದಪ್ಪ ಮತ್ತು ಬಸವರಾಜಪ್ಪ ಮೃತಪಟ್ಟ ದುರ್ದೈವಿಗಳು. ಇವರಿಬ್ಬರು ತಮಟಕಲ್ಲು ಗ್ರಾಮದಿಂದ ತಮ್ಮ ಸ್ವಗ್ರಾಮವಾದ ಆಲಘಟ್ಟಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಇವರ ಬೈಕ್ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಚಿತ್ರದುರ್ಗ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸದ್ಯ ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

📩 ಸುದ್ದಿ ಕಳುಹಿಸಿ

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More

Related News

Home
Web Stories
Instagram
WhatsApp