ದಾವಣಗೆರೆ: ಭದ್ರಾ ನಾಲೆಯಲ್ಲಿ ಈಜಲು ಹೋಗಿ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ನೀರುಪಾಲು

ದಾವಣಗೆರೆಯ ಭದ್ರಾ ಬಲದಂಡೆ ನಾಲೆಯಲ್ಲಿ ಮುಳುಗಿ ಕಾಲೇಜು ವಿದ್ಯಾರ್ಥಿಗಳ ಸಾವು

—Election Update—

ದಾವಣಗೆರೆ : ಪ್ರವಾಸಕ್ಕೆಂದು ತೆರಳಿದ್ದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಭದ್ರಾ ನಾಲೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಭೀಕರ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಮರಬನಹಳ್ಳಿ ಗ್ರಾಮದ ಬಳಿ ನಡೆದಿದೆ.

ಘಟನೆಯ ವಿವರ:

ಮೃತ ವಿದ್ಯಾರ್ಥಿಗಳನ್ನು ದಾವಣಗೆರೆಯ ಪ್ರತಿಷ್ಠಿತ ಬಿ.ಐ.ಇ.ಟಿ (BIET) ಕಾಲೇಜಿನ ವಿವೇಕ್ ಮತ್ತು ಮಾನಸ ಎಂದು ಗುರುತಿಸಲಾಗಿದೆ. ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ಇವರು ತಮ್ಮ ಸ್ನೇಹಿತರ ತಂಡದೊಂದಿಗೆ ಮರಬನಹಳ್ಳಿ ವ್ಯಾಪ್ತಿಯ ಭದ್ರಾ ಬಲದಂಡೆ ನಾಲೆಯ ಬಳಿ ವಿಹಾರಕ್ಕೆಂದು ತೆರಳಿದ್ದರು ಎನ್ನಲಾಗಿದೆ.

ಬಿಸಿಲಿನ ಬೇಗೆ ತಣಿಸಿಕೊಳ್ಳಲು ವಿದ್ಯಾರ್ಥಿಗಳು ವಿವೇಕ್ ಮತ್ತು ಮಾನಸ ನಾಲೆಯಲ್ಲಿ ಈಜಲು ಇಳಿದಿದ್ದಾರೆ. ಈ ವೇಳೆ ನೀರಿನ ಹರಿವು ಮತ್ತು ಆಳವನ್ನು ಸರಿಯಾಗಿ ಅಂದಾಜಿಸದ ಕಾರಣ, ಇಬ್ಬರೂ ನೀರಿನ ಸೆಳೆತಕ್ಕೆ ಸಿಲುಕಿ ಮುಳುಗಿ ಸಾವನ್ನಪ್ಪಿದ್ದಾರೆ.

ಕುಟುಂಬಸ್ಥರ ಆಕ್ರಂದನ:

ಓದಿ ಇಂಜಿನಿಯರ್ ಆಗಿ ಮನೆಗೆ ಆಸರೆಯಾಗಬೇಕಿದ್ದ ಮಕ್ಕಳು ಶವವಾಗಿರುವುದನ್ನು ಕಂಡು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಕಾಲೇಜು ಆವರಣದಲ್ಲೂ ಸಹಪಾಠಿಗಳ ಸಾವಿನ ಸುದ್ದಿ ಕೇಳಿ ವಿಷಾದ ವ್ಯಕ್ತವಾಗಿದೆ. ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

📩 ಸುದ್ದಿ ಕಳುಹಿಸಿ

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More

Related News

Home
Web Stories
Instagram
WhatsApp