ಸುಳ್ಳು ಜಾತಿನಿಂದನೆ ಕೇಸ್‌ | ಬಿ.ಪಿ.ಹರೀಶ್‌ ಕಿಡಿ | ದಾವಣಗೆರೆಯಲ್ಲಿ ನಾಳೆ ಬೃಹತ್‌ ಪ್ರತಿಭಟನೆ

Author Picture
Published On: January 18, 2026

—Advertisement—

ದಾವಣಗೆರೆ: ಹರಿಹರ ಶಾಸಕ ಬಿ.ಪಿ.ಹರೀಶ್‌ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಅವರ ನಡುವಿನ ಜಗಳ ಸದ್ಯ ತಾರಕಕ್ಕೆ ಏರಿದೆ. 

ರಾಜಕೀಯ ಪ್ರೇರಿರತವಾಗಿ ನನ್ನ ಮೇಲೆ ಸುಳ್ಳು ಜಾತಿನಿಂದನೆ ಪ್ರಕರಣ ದಾಖಲಿಸಲಾಗಿದೆ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದ ಶಾಸಕ ಬಿ.ಪಿ. ಹರೀಶ್‌ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಮಣ್ಣು ಲೂಟಿ ಮತ್ತು ಶಾಸಕರ ವಿರುದ್ಧದ ರಾಜಕೀಯ ಪ್ರೇರಿತ ಮೊಕದ್ದಮೆಗಳನ್ನು ಖಂಡಿಸಿ ಬಿಜೆಪಿ ಸೋಮವಾರ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದೆ ಎಂದು ತಿಳಿಸಿದ್ದಾರೆ.

ಮಣ್ಣು ಲೂಟಿ ಆರೋಪ

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿ.ಪಿ. ಹರೀಶ್, “ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಬೆಂಬಲಿಗರು ಕೆರೆಗಳಿಂದ ಅಕ್ರಮವಾಗಿ ಮಣ್ಣು ಲೂಟಿ ಮಾಡುತ್ತಿದ್ದಾರೆ. ಕಳವು ಮಾಡಿದ ಮಣ್ಣನ್ನು ಮಲ್ಲಿಕಾರ್ಜುನ್ ಅವರ ಒಡೆತನದ ಬಾಪೂಜಿ ಇಂಜಿನಿಯರಿಂಗ್ ಕಾಲೇಜು ಮತ್ತು ರೈಸ್ ಮಿಲ್ ಜಾಗಗಳಿಗೆ ಸಾಗಿಸಲಾಗಿದೆ. ರೈತರನ್ನು ಬ್ಲ್ಯಾಕ್‌ಮೇಲ್ ಮಾಡಿ ಜಮೀನು ಕಬಳಿಸಿರುವ ಆರೋಪವೂ ಅವರ ಮೇಲಿದೆ,” ಎಂದು ಗಂಭೀರ ಆರೋಪ ಮಾಡಿದರು.

ಜಾತಿನಿಂದನೆ ಕೇಸ್ ವಿರುದ್ಧ ಆಕ್ರೋಶ

 ಕಾಡಜ್ಜಿ ಗ್ರಾಮದಲ್ಲಿ ಅಕ್ರಮವಾಗಿ ಮಣ್ಣು ಸಾಗಾಟ ಮಾಡುತ್ತಿದ್ದನ್ನು ತಡೆದಿದ್ದಕ್ಕಾಗಿ ನನ್ನ ವಿರುದ್ಧ ಜಾತಿನಿಂದನೆ (SC/ST Act) ಪ್ರಕರಣ ದಾಖಲಿಸಲಾಗಿದೆ ಎಂದು ಶಾಸಕ ಹರೀಶ್‌ ಅವರು ತೀವ್ರವಾಗಿ ಖಂಡಿಸಿದರು. “ನಾನು ಭ್ರಷ್ಟಾಚಾರವನ್ನು ಪ್ರಶ್ನಿಸಿದ್ದಕ್ಕೆ ನನ್ನ ಧ್ವನಿ ಅಡಗಿಸಲು ಈ ಸುಳ್ಳು ಕೇಸ್ ಹಾಕಲಾಗಿದೆ. ಪೊಲೀಸರು ಕೇವಲ ಸಚಿವರ ಆಜ್ಞಾಪಾಲಕರಂತೆ ವರ್ತಿಸಬಾರದು,” ಎಂದು ದೂರಿದರು

ನಾಳೆ ದಾವಣಗೆರೆಯಲ್ಲಿ ಬಿಜೆಪಿ ಪ್ರತಿಭಟನೆ 

  • ಸಮಯ: ಜನವರಿ 19 ಸೋಮವಾರ ಬೆಳಿಗ್ಗೆ 10:30 ಗಂಟೆಗೆ.

  • ಸ್ಥಳ: ಅಂಬೇಡ್ಕರ್ ಸರ್ಕಲ್‌ನಿಂದ ಪ್ರತಿಭಟನೆ ಆರಂಭ.

  • ಕಾರ್ಯಕ್ರಮ: ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಹದಡಿ ರಸ್ತೆಯಲ್ಲಿರುವ ರೂರಲ್ ಪೊಲೀಸ್ ಠಾಣೆಗೆ ಮೆರವಣಿಗೆ ಮೂಲಕ ತೆರಳಿ ದೂರು ನೀಡಲಾಗುವುದು.

ಈ ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾ ನಾಯಕರು, ಕಾರ್ಯಕರ್ತರು ಮತ್ತು ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಬಿ.ಪಿ. ಹರೀಶ್ ಮನವಿ ಮಾಡಿದ್ದಾರೆ.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

madhayakarnatakalive@gmail.com

"ಮಧ್ಯ ಕರ್ನಾಟಕ ಲೈವ್ (Madhyakarnataka.live) ಕರ್ನಾಟಕದ ಹೃದಯಭಾಗದ ನೈಜ, ನಿಖರ ಮತ್ತು ಕ್ಷಣ ಕ್ಷಣದ ಸುದ್ದಿಗಳಿಗಾಗಿ ಮೀಸಲಾದ ಡಿಜಿಟಲ್ ಸುದ್ದಿ ವೇದಿಕೆಯಾಗಿದೆ. ಚಿತ್ರದುರ್ಗ, ದಾವಣಗೆರೆ ಸೇರಿದಂತೆ ಮಧ್ಯ ಕರ್ನಾಟಕದ ಜಿಲ್ಲೆಗಳ ಸ್ಥಳೀಯ ಸಮಸ್ಯೆಗಳು, ರಾಜಕೀಯ, ಕೃಷಿ, ಶಿಕ್ಷಣ ಮತ್ತು ಸಾಂಸ್ಕೃತಿಕ ವಿದ್ಯಮಾನಗಳನ್ನು ಜಗತ್ತಿಗೆ ತಲುಪಿಸುವುದು ನಮ್ಮ ಗುರಿ. ನಾವು ಕೇವಲ ಸುದ್ದಿಯನ್ನಷ್ಟೇ ಅಲ್ಲ, ಜನರ ಧ್ವನಿಯಾಗಲು ಬಯಸುತ್ತೇವೆ."… Read More

Related News

Leave a Comment

Home
Web Stories
Instagram
WhatsApp