ದಾವಣಗೆರೆ: ಜಿಲ್ಲೆಯ ಚೆನ್ನಗಿರಿ ತಾಲ್ಲೂಕಿನ ADLR (ಸಹಾಯಕ ಭೂಮಾಪನ ನಿರ್ದೇಶಕರು) ಕಚೇರಿಯಲ್ಲಿ ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ರೈತನ ಜಮೀನು ಹದ್ದುಬಸ್ತು ಮಾಡಿಕೊಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಸರ್ವೇ ಸೂಪರ್ ವೈಸರ್ ಅಂಜಿನಪ್ಪ ಈಗ ಲೋಕಾಯುಕ್ತ ಅತಿಥಿಯಾಗಿದ್ದಾರೆ.
ಘಟನೆಯ ವಿವರ:
ಚೆನ್ನಗಿರಿ ADLR ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಂಜಿನಪ್ಪ, ರೈತರೊಬ್ಬರ ಜಮೀನಿನ ಹದ್ದುಬಸ್ತು ಪ್ರಕ್ರಿಯೆ ಪೂರ್ಣಗೊಳಿಸಲು ಒಂದು ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಸಂಬಂಧ ಮೊದಲ ಕಂತಿನ ರೂಪದಲ್ಲಿ 50,000 ರೂಪಾಯಿ ಹಣವನ್ನು ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ದಾಳಿ ನಡೆದ ಸ್ಥಳ:
ದಾವಣಗೆರೆ ನಗರದ ಹಳೆ ಬಸ್ ನಿಲ್ದಾಣದ ಬಳಿ ಇರುವ ದ್ವಾರಕಾ ಲಾಡ್ಜ್‌ನಲ್ಲಿ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ದಾಳಿ ಮಾಡಿದ್ದಾರೆ. ಅಂಜಿನಪ್ಪ ತನ್ನ ಸ್ನೇಹಿತ ಶ್ರೀಧರ್ ಎಂಬುವವರ ಮೂಲಕ ಹಣ ಸ್ವೀಕರಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಅಂಜಿನಪ್ಪ ಮತ್ತು ಅವರ ಸ್ನೇಹಿತ ಶ್ರೀಧರ್ ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ.
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
