ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ಈಗ ಕೇವಲ ಪಕ್ಷಗಳ ನಡುವಿನ ಹೋರಾಟವಾಗಿ ಉಳಿದಿಲ್ಲ; ಇದು ಕಾಂಗ್ರೆಸ್ನೊಳಗಿನ ‘ಅಧಿಕಾರ ಯಾರಪ್ಪನ ಸೊತ್ತು?’ ಎಂಬ ಜಿದ್ದಾಜಿದ್ದಿಗೆ ಸಾಕ್ಷಿಯಾಗಿದೆ. ಟಿಕೆಟ್ ಹಂಚಿಕೆ ವಿಚಾರದಲ್ಲಿ ಶಾಮನೂರು ಶಿವಶಂಕರಪ್ಪ (SS) ಕುಟುಂಬ ಮತ್ತು ಎಂ.ಎಲ್.ಸಿ ಅಬ್ದುಲ್ ಜಬ್ಬಾರ್ ಬೆಂಬಲಿಗರ ನಡುವಿನ ಸಂಘರ್ಷ ಈಗ ಬೀದಿಗೆ ಬಂದಿದೆ.
ಸಭೆಯಲ್ಲೇ ನಡೆದ ಹೈವೋಲ್ಟೇಜ್ ಡ್ರಾಮಾ
ಇತ್ತೀಚೆಗೆ ನಡೆದ ಕಾಂಗ್ರೆಸ್ ಉಸ್ತುವಾರಿ ಸಮಿತಿ ಸಭೆಯಲ್ಲಿ ಅಬ್ದುಲ್ ಜಬ್ಬಾರ್ ಬೆಂಬಲಿಗರು ಮತ್ತು ಅಲ್ಪಸಂಖ್ಯಾತ ಮುಖಂಡರು ಬಹಿರಂಗವಾಗಿಯೇ ಬಂಡಾಯ ಎದ್ದಿದ್ದಾರೆ. ಶಾಮನೂರು ಮಲ್ಲಿಕಾರ್ಜುನ ಅವರ ಪುತ್ರ ಸಮರ್ಥ್ ಮಲ್ಲಿಕಾರ್ಜುನ ಅವರಿಗೆ ಟಿಕೆಟ್ ನೀಡುವುದನ್ನು ವಿರೋಧಿಸಿರುವ ಕಾರ್ಯಕರ್ತರು, ಕಾಂಗ್ರೆಸ್ ಕಚೇರಿ ಮುಂಭಾಗದಲ್ಲೇ ತೊಡೆ ತಟ್ಟಿ, ಮೀಸೆ ತಿರುವಿ ಸವಾಲು ಹಾಕಿದ್ದಾರೆ. “ಒಂದು ವೇಳೆ ಸಮರ್ಥ್ ಅವರಿಗೆ ಟಿಕೆಟ್ ನೀಡಿದರೆ 50 ಸಾವಿರ ಮತಗಳ ಅಂತರದಿಂದ ಸೋಲಿಸುತ್ತೇವೆ” ಎಂದು ಹೈಕಮಾಂಡ್ ಪ್ರತಿನಿಧಿಗಳ ಮುಂದೆಯೇ ಗುಡುಗಿದ್ದಾರೆ.

ಮಲ್ಲಿಕಾರ್ಜುನ ಅವರ ಪ್ರತಿ ಸವಾಲು!
ಈ ಬೆಳವಣಿಗೆಯಿಂದ ಕೆರಳಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರು ಸಭೆಯಲ್ಲೇ ಕಡಕ್ ವಾರ್ನಿಂಗ್ ನೀಡಿದ್ದಾರೆ. “ಪಕ್ಷಕ್ಕಾಗಿ ದುಡಿದ ಕಟ್ಟಕಡೆಯ ಕಾರ್ಯಕರ್ತನಿಗೆ ಟಿಕೆಟ್ ನೀಡಿ, ನಾನು ಗೆಲ್ಲಿಸಿಕೊಂಡು ಬರುತ್ತೇನೆ. ಆದರೆ, ದೆಹಲಿಯಲ್ಲಿ ಲಾಬಿ ಮಾಡುವವರಿಗೆ (ಅಬ್ದುಲ್ ಜಬ್ಬಾರ್ ಟೀಮ್) ಟಿಕೆಟ್ ನೀಡಿದರೆ ನಾನು ಚುನಾವಣೆಯ ಯಾವುದೇ ಉಸ್ತುವಾರಿ ವಹಿಸಿಕೊಳ್ಳುವುದಿಲ್ಲ” ಎಂದು ನೇರವಾಗಿಯೇ ನುಡಿದಿದ್ದಾರೆ. ಇದು ದಕ್ಷಿಣ ಕ್ಷೇತ್ರದಲ್ಲಿ ‘ಕೈ’ ನಾಯಕರ ನಡುವಿನ ಬಿರುಕು ಎಷ್ಟು ಆಳವಾಗಿದೆ ಎಂಬುದನ್ನು ತೋರಿಸುತ್ತಿದೆ.
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ಬಿಜೆಪಿಗೆ ಲಾಭವಾಗುವ ಸಾಧ್ಯತೆ?
ದಾವಣಗೆರೆ ದಕ್ಷಿಣ ಕ್ಷೇತ್ರವು ದಶಕಗಳಿಂದ ಶಾಮನೂರು ಕುಟುಂಬದ ಭದ್ರಕೋಟೆಯಾಗಿದೆ. ಆದರೆ, ಈಗ ಅಲ್ಪಸಂಖ್ಯಾತ ನಾಯಕರು ಮತ್ತು ಶಾಮನೂರು ಕುಟುಂಬದ ನಡುವೆ ಏರ್ಪಟ್ಟಿರುವ ಈ ‘ಟಿಕೆಟ್ ವಾರ್’ ಬಿಜೆಪಿಗೆ ಪ್ಲಸ್ ಪಾಯಿಂಟ್ ಆಗುವ ಸಾಧ್ಯತೆ ದಟ್ಟವಾಗಿದೆ. ಒಳಜಗಳ ಶಮನವಾಗದಿದ್ದರೆ ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ಗೆ ಭಾರಿ ಹಿನ್ನಡೆಯಾಗಬಹುದು ಎಂಬ ವಿಶ್ಲೇಷಣೆಗಳು ಕೇಳಿಬರುತ್ತಿವೆ.

ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
