ದಾವಣಗೆರೆ: ಲೋಕಸಭಾ ಚುನಾವಣೆಯ ಪ್ರಚಾರದ ಕಾವು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಜೋರಾಗುತ್ತಿದ್ದು, ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಇಂದು ನಗರದ ಕರೂರು ಮತ್ತು ಯರಗುಂಟೆ ಭಾಗಗಳಲ್ಲಿ ಬಿರುಸಿನ ಮತಯಾಚನೆ ನಡೆಸಿದರು.
ವಾರ್ಡ್ ಸಂಖ್ಯೆ 45ರ ವ್ಯಾಪ್ತಿಯಲ್ಲಿ ಬರುವ ಕರೂರು ಮತ್ತು ಯರಗುಂಟೆ ಗ್ರಾಮಗಳಲ್ಲಿ ಇಂದು ಬೆಳಿಗ್ಗೆಯಿಂದಲೇ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಮನೆ ಮನೆಗೆ ಭೇಟಿ ನೀಡಿದ ಅವರು, ‘ಕೈ’ ಚಿಹ್ನೆಗೆ ಮತ ನೀಡುವಂತೆ ವಿನಂತಿಸಿದರು. ಈ ಸಂದರ್ಭದಲ್ಲಿ ಅವರಿಗೆ ಮಹಿಳೆಯರು ಆರತಿ ಬೆಳಗಿ, ಹೂಮಳೆ ಸುರಿಸಿ ಭವ್ಯವಾಗಿ ಸ್ವಾಗತಿಸಿದರು.
30 ವರ್ಷದ ಅಧಿಕಾರಕ್ಕೆ ಸಡ್ಡು:
ಪ್ರಚಾರದ ವೇಳೆ ಮಾತನಾಡಿದ ಕಾಂಗ್ರೆಸ್ ಮುಖಂಡರು, “ಕಳೆದ 30 ವರ್ಷಗಳಿಂದ ದಾವಣಗೆರೆಯಲ್ಲಿ ಅಧಿಕಾರ ನಡೆಸಿದ ಸಂಸದರು ಅಭಿವೃದ್ಧಿಯ ಬಗ್ಗೆ ಸೊಲ್ಲೆತ್ತಿಲ್ಲ. ಎಂಪಿ ಅನುದಾನದಿಂದ ಒಂದು ರೂಪಾಯಿಯ ಕೆಲಸವೂ ಇಲ್ಲಿ ನಡೆದಿಲ್ಲ” ಎಂದು ಟೀಕಿಸಿದರು. ಕಳೆದ 25 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಸಿಸಿ ರಸ್ತೆಗಳ ಕಾಮಗಾರಿಯನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಪೂರ್ಣಗೊಳಿಸಲಾಗಿದೆ ಎಂದು ನೆನಪಿಸಿದರು.
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ಐದೇ ದಿನ ಬಾಕಿ – ಕಾರ್ಯಕರ್ತರಿಗೆ ಕರೆ:
ಮತದಾನಕ್ಕೆ ಇನ್ನು ಕೇವಲ ಐದು ದಿನಗಳು ಬಾಕಿ ಇರುವುದರಿಂದ, ಪ್ರತಿ ಮನೆಗೂ ಭೇಟಿ ನೀಡಬೇಕು. ಊರಿನಲ್ಲಿ ಇಲ್ಲದವರನ್ನು ಅಥವಾ ಬೇರೆಡೆ ಇರುವ ಮತದಾರರನ್ನು ಸಂಪರ್ಕಿಸಿ ಅಂದು ಬೂತ್ಗೆ ಬಂದು ಮತದಾನ ಮಾಡುವಂತೆ ಪ್ರೇರೇಪಿಸಬೇಕು ಎಂದು ಡಾ. ಪ್ರಭಾ ಮಲ್ಲಿಕಾರ್ಜುನ್ ಕಾರ್ಯಕರ್ತರಿಗೆ ಹುರಿದುಂಬಿಸಿದರು. ಕರೂರು ಮತ್ತು ಯರಗುಂಟೆಯ ಐದು ಬೂತ್ಗಳಲ್ಲಿರುವ ಸುಮಾರು 4,000 ಮತಗಳು ಈ ಬಾರಿ ಕಾಂಗ್ರೆಸ್ಗೆ ನಿರ್ಣಾಯಕವಾಗಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಗ್ರಾಮಸ್ಥರ ಅಹವಾಲು ಸ್ವೀಕಾರ:
ಯರಗುಂಟೆ ಗ್ರಾಮದ ದೇವಸ್ಥಾನದ ಆವರಣದಲ್ಲಿ ನಡೆದ ಸಭೆಯಲ್ಲಿ ಗ್ರಾಮಸ್ಥರು ತಮ್ಮ ಸಮಸ್ಯೆಗಳನ್ನು ಹಂಚಿಕೊಂಡರು. ವಿಶೇಷವಾಗಿ ಮೂಲಭೂತ ಸೌಕರ್ಯ ಮತ್ತು ಕುಡಿಯುವ ನೀರಿನ ಸಮಸ್ಯೆಗಳ ಬಗ್ಗೆ ಚರ್ಚಿಸಲಾಯಿತು. ಇದಕ್ಕೆ ಸ್ಪಂದಿಸಿದ ಅಭ್ಯರ್ಥಿಯು, “ನಾನು ನಿಮ್ಮ ಮನೆ ಮಗಳಾಗಿ, ನಿಮ್ಮ ಧ್ವನಿಯಾಗಿ ದೆಹಲಿಯಲ್ಲಿ ಕೆಲಸ ಮಾಡುತ್ತೇನೆ” ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರು, ಪಾಲಿಕೆ ಸದಸ್ಯರು ಮತ್ತು ನೂರಾರು ಕಾರ್ಯಕರ್ತರು ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿದ್ದರು.
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
