ದಾವಣಗೆರೆ ದಕ್ಷಿಣ ಉಪಚುನಾವಣೆ: ‘ಫುಡ್ ಕಿಟ್’ ಹಂಚಿಕೆ ಆರೋಪ; ಶಾಮನೂರು ಕುಟುಂಬದ ವಿರುದ್ಧ ಬಿಜೆಪಿ ಕೆಂಡಾಮಂಡಲ

ದಾವಣಗೆರೆ ಉಪಚುನಾವಣೆ ವೇಳೆ ಫುಡ್ ಕಿಟ್ ಹಂಚಿಕೆ ವಿರುದ್ಧ ಬಿಜೆಪಿ ನಾಯಕ ಯಶವಂತ್ ರಾವ್ ಜಾದವ್ ಆಕ್ರೋಶ
— ದಾವಣಗೆರೆಯಲ್ಲಿ ನೀತಿ ಸಂಹಿತೆ ಉಲ್ಲಂಘಿಸಿ ಫುಡ್ ಕಿಟ್ ಹಂಚಲಾಗುತ್ತಿದೆ ಎಂದು ಬಿಜೆಪಿ ಮುಖಂಡ ಯಶವಂತ್ ರಾವ್ ಜಾದವ್ ಆರೋಪ ಮಾಡಿದರು.

—Election Update—

ದಾವಣಗೆರೆ: ನಗರದ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿಂದ ದಿನಕ್ಕೆ ಕಾವು ಪಡೆದುಕೊಳ್ಳುತ್ತಿದ್ದು, ಇದೀಗ ‘ಕಿಟ್ ಪಾಲಿಟಿಕ್ಸ್’ ವಿವಾದಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಮತದಾರರಿಗೆ ಆಹಾರ ಸಾಮಗ್ರಿಗಳ ಕಿಟ್ ವಿತರಿಸುವ ಮೂಲಕ ಶಾಮನೂರು ಶಿವಶಂಕರಪ್ಪ ಅವರ ಕುಟುಂಬ ಚುನಾವಣಾ ನೀತಿ ಸಂಹಿತೆಯನ್ನು ಗಾಳಿಗೆ ತೂರಿದೆ ಎಂದು ಬಿಜೆಪಿ ಮುಖಂಡ ಯಶವಂತರಾವ್ ಜಾಧವ್ ಗಂಭೀರವಾಗಿ ಆರೋಪಿಸಿದ್ದಾರೆ.

ರಂಜಾನ್ ಹೆಸರಲ್ಲಿ ಆಮಿಷ?

​ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯಶವಂತರಾವ್ ಜಾಧವ್, “ಕಾಂಗ್ರೆಸ್ ನಾಯಕರು ವಾಮಮಾರ್ಗದ ಮೂಲಕ ಚುನಾವಣೆ ಗೆಲ್ಲಲು ಹೊರಟಿದ್ದಾರೆ. ರಂಜಾನ್ ಹಬ್ಬದ ನೆಪದಲ್ಲಿ ಅಲ್ಪಸಂಖ್ಯಾತ ಮತದಾರರಿಗೆ ಸಕ್ಕರೆ, ಶಾವಿಗೆ ಮತ್ತು ಇತರೆ ದಿನಸಿ ಪದಾರ್ಥಗಳನ್ನೊಳಗೊಂಡ ಕಿಟ್‌ಗಳನ್ನು ಹಂಚಲಾಗುತ್ತಿದೆ. ಕಳೆದ ವರ್ಷ ರಂಜಾನ್ ಅಥವಾ ಉಗಾದಿ ಸಮಯದಲ್ಲಿ ಈ ಉದಾರತೆ ಎಲ್ಲಿ ಹೋಗಿತ್ತು? ಕೇವಲ ಚುನಾವಣೆ ಬಂದಾಗ ಮಾತ್ರ ಇವರಿಗೆ ಬಡವರ ನೆನಪಾಗುತ್ತದೆಯೇ?” ಎಂದು ಪ್ರಶ್ನಿಸಿದರು.

ಅಧಿಕಾರಿಗಳ ವಿರುದ್ಧ ಪಕ್ಷಪಾತದ ದೂರು

​ಚುನಾವಣಾ ಅಧಿಕಾರಿಗಳು ಆಡಳಿತ ಪಕ್ಷದ ಪ್ರಭಾವಕ್ಕೆ ಮಣಿದು ಕೆಲಸ ಮಾಡುತ್ತಿದ್ದಾರೆ ಎಂದು ಅವರು ಆಕ್ರೋಶ ಹೊರಹಾಕಿದರು. “ನಾವು ನಾಮಪತ್ರ ಸಲ್ಲಿಸಲು ಹೋದಾಗ ನಮ್ಮ ವಾಹನಗಳನ್ನು 300 ಅಡಿ ದೂರದಲ್ಲೇ ತಡೆಯಲಾಗುತ್ತದೆ. ಆದರೆ ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಅವರ ವಾಹನಗಳು ನೇರವಾಗಿ ನಾಮಪತ್ರ ಸಲ್ಲಿಕೆ ಕಚೇರಿಯ ಬಾಗಿಲವರೆಗೆ ಹೋಗುತ್ತವೆ. ಒಬ್ಬರಿಗೊಂದು ನ್ಯಾಯ, ಮತ್ತೊಬ್ಬರಿಗೊಂದು ನ್ಯಾಯವೇ?” ಎಂದು ಅವರು ಕಿಡಿಕಾರಿದರು.

ಅಲ್ಪಸಂಖ್ಯಾತರಲ್ಲಿ ಒಡಕು ಮೂಡಿಸುವ ತಂತ್ರ

​ಶಾಮನೂರು ಕುಟುಂಬವು ಅಲ್ಪಸಂಖ್ಯಾತ ಸಮುದಾಯದವರಲ್ಲಿಯೇ ಜಗಳ ಹಚ್ಚುವ ಕೆಲಸ ಮಾಡುತ್ತಿದೆ. ಟಿಕೆಟ್ ಕೇಳಿದ ಸಮುದಾಯದ ನಾಯಕರನ್ನು ಕಡೆಗಣಿಸಿ, ಅವರಲ್ಲಿಯೇ ಎರಡು ಗುಂಪುಗಳನ್ನು ಮಾಡಿ ಹೊಡೆದಾಡುವಂತೆ ಮಾಡುತ್ತಿದ್ದಾರೆ. ಈ ಬಾರಿ ದಾವಣಗೆರೆಯ ಜನತೆ ಮತ್ತು ಅಲ್ಪಸಂಖ್ಯಾತ ಬಂಧುಗಳು ಇವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಯಶವಂತರಾವ್ ಜಾಧವ್ ಎಚ್ಚರಿಸಿದರು.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

📩 ಸುದ್ದಿ ಕಳುಹಿಸಿ

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More

Related News

Leave a Comment

Home
Web Stories
Instagram
WhatsApp