ದಾವಣಗೆರೆ: ಮಳೆಯ ಮುನ್ಸೂಚನೆಯಾಗಿ ಬಂದ ಗುಡುಗು ಮತ್ತು ಸಿಡಿಲಿನ ಭಯಾನಕ ಶಬ್ದಕ್ಕೆ ಬೆಚ್ಚಿಬಿದ್ದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರೊಬ್ಬರು ಹೃದಯಾಘಾತದಿಂದ ಸ್ಥಳದಲ್ಲೇ ಸಾವನ್ನಪ್ಪಿರುವ ಆಘಾತಕಾರಿ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಮೃತಪಟ್ಟ ಶಿಕ್ಷಕರನ್ನು 56 ವರ್ಷದ ನಾಗರಾಜಪ್ಪ ಎಂದು ಗುರುತಿಸಲಾಗಿದೆ. ಭಾನುವಾರ ರಾತ್ರಿ ತಮ್ಮ ಮನೆಯ ಮುಂದೆ ನಿಂತಿದ್ದಾಗ ಈ ದುರಂತ ಸಂಭವಿಸಿದೆ. ಏಕಾಏಕಿ ಭಾರಿ ಶಬ್ದದೊಂದಿಗೆ ಸಿಡಿಲು ಬಡಿದಿದ್ದು, ಈ ಅನಿರೀಕ್ಷಿತ ಆರ್ಭಟಕ್ಕೆ ತೀವ್ರವಾಗಿ ಬೆಚ್ಚಿಬಿದ್ದ ನಾಗರಾಜಪ್ಪನವರಿಗೆ ತಕ್ಷಣವೇ ಹೃದಯಾಘಾತವಾಗಿದೆ. ಪರಿಣಾಮವಾಗಿ ಅವರು ಸ್ಥಳದಲ್ಲೇ ಕುಸಿದುಬಿದ್ದು ಪ್ರಾಣ ಬಿಟ್ಟಿದ್ದಾರೆ.

ಮನೆಯ ಮುಂದೆಯೇ ನಡೆದ ಈ ಅನಿರೀಕ್ಷಿತ ದುರಂತದಿಂದ ಕುಟುಂಬಸ್ಥರು ಕಣ್ಣೀರಿನಲ್ಲಿ ಮುಳುಗಿದ್ದಾರೆ.
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
