ದಾವಣಗೆರೆ: ಆಕಸ್ಮಿಕ ಅಗ್ನಿ ಅವಘಡ, ಲಕ್ಷಾಂತರ ರೂಪಾಯಿ ಮೌಲ್ಯದ ಮೆಕ್ಕೆಜೋಳ ಭಸ್ಮ!

Maize crop fire accident in Eraganal village, Nyamathi Taluk, Davanagere district
— ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಎರಗನಾಳ ಗ್ರಾಮದಲ್ಲಿ ಬೆಂಕಿಗೆ ಆಹುತಿಯಾದ ಮೆಕ್ಕೆಜೋಳದ ರಾಶಿ.

—Advertisement—

📍 ದಾವಣಗೆರೆ ದಕ್ಷಿಣ

ಉಪಸಮರ - 2026

ಮಹಾ ಕದನ: ಯಾರಿಗೆ ಒಲಿಯಲಿದೆ ಟಿಕೆಟ್?

Samarth Jabbar Vinay Ajay Yashwanth
ಕ್ಷಣ ಕ್ಷಣದ ಲೈವ್ ಅಪ್ಡೇಟ್ಸ್ ➔

ದಾವಣಗೆರೆ: ರೈತರು ಬೆವರು ಸುರಿಸಿ ಬೆಳೆದಿದ್ದ ಚಿನ್ನದಂತಹ ಬೆಳೆ ಕಣ್ಣೆದುರೇ ಸುಟ್ಟು ಕರುಕಲಾದ ಮನಕಲಕುವ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಎರಗನಾಳ ಗ್ರಾಮದಲ್ಲಿ ಆಕಸ್ಮಿಕವಾಗಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಮೆಕ್ಕೆಜೋಳ ಬೆಂಕಿಗೆ ಆಹುತಿಯಾಗಿದೆ.

ಘಟನೆಯ ವಿವರ:

​ಎರಗನಾಳ ಗ್ರಾಮದ ರೈತ ವೈರಬಸಪ್ಪ ಅವರು ತಮ್ಮ ಎರಡು ಎಕರೆ ಜಮೀನಿನಲ್ಲಿ ಬೆಳೆದಿದ್ದ ಸುಮಾರು 70 ಕ್ವಿಂಟಲ್ ಮೆಕ್ಕೆಜೋಳವನ್ನು ರಾಶಿ ಮಾಡಿ ಸಂಗ್ರಹಿಸಿಟ್ಟಿದ್ದರು. ಆದರೆ ವಿಧಿಯಾಟ ಎನ್ನುವಂತೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ಸಂಪೂರ್ಣ ಮೆಕ್ಕೆಜೋಳ ಸುಟ್ಟು ಭಸ್ಮವಾಗಿದೆ. ಇದರಿಂದ ರೈತನಿಗೆ ಅಂದಾಜು 1.25 ಲಕ್ಷ ರೂಪಾಯಿ ನಷ್ಟ ಸಂಭವಿಸಿದೆ.

​ಅದೇ ರೀತಿ, ಇದೇ ಗ್ರಾಮದ ಮತ್ತೊಬ್ಬ ರೈತ ಬಸಪ್ಪ ಅವರು ತಮ್ಮ ಎಂಟು ಎಕರೆ ಜಮೀನಿನಲ್ಲಿ ಬೆಳೆದಿದ್ದ ಸುಮಾರು 250 ಕ್ವಿಂಟಲ್ ಮೆಕ್ಕೆಜೋಳಕ್ಕೂ ಬೆಂಕಿ ವ್ಯಾಪಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ ಮೆಕ್ಕೆಜೋಳ ಕಪ್ಪು ಕರುಕಲಾಗಿದ್ದು, ಸುಮಾರು 3.50 ಲಕ್ಷ ರೂಪಾಯಿ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ.

ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ:

​ಬೆಳೆ ಉರಿಯುತ್ತಿರುವುದನ್ನು ಕಂಡು ಆತಂಕಕ್ಕೊಳಗಾದ ಗ್ರಾಮಸ್ಥರು ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಸತತ ಪ್ರಯತ್ನ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಆದರೂ ಅಷ್ಟರಲ್ಲಾಗಲೇ ರಾಶಿ ಹಾಕಿದ್ದ ಬಹುತೇಕ ಮೆಕ್ಕೆಜೋಳ ಬೆಂಕಿಗೆ ಆಹುತಿಯಾಗಿತ್ತು. ವರ್ಷವಿಡೀ ಕಷ್ಟಪಟ್ಟು ಬೆಳೆದ ಬೆಳೆ ಕೈಗೆ ಬರುವ ಸಮಯದಲ್ಲಿ ಹೀಗೆ ಸುಟ್ಟು ಹೋಗಿರುವುದು ರೈತ ಕುಟುಂಬಗಳನ್ನು ಸಂಕಷ್ಟಕ್ಕೆ ದೂಡಿದೆ.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

📩 ಸುದ್ದಿ ಕಳುಹಿಸಿ

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More

Related News

Leave a Comment

Home
Web Stories
Instagram
WhatsApp