ದಾವಣಗೆರೆ ನಗರದಲ್ಲಿ ನಾಳೆ ವಿದ್ಯುತ್ ವ್ಯತ್ಯಯ: ಈ ಪ್ರದೇಶಗಳಲ್ಲಿ 9 ಗಂಟೆಯಿಂದ ಕರೆಂಟ್ ಇರಲ್ಲ!

Davanagere BESCOM official power cut notification letter

—Election Update—

ದಾವಣಗೆರೆ: ನಗರದ 66/11 ಕೆ.ವಿ. ದಾವಣಗೆರೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಮೇ 23ರ ಶನಿವಾರದಂದು ನಗರದ ಪ್ರಮುಖ ಪ್ರದೇಶಗಳಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಣೆ ತಿಳಿಸಿದೆ.


ವಿದ್ಯುತ್ ಕಡಿತವಾಗುವ ಸಮಯ

  • ದಿನಾಂಕ: 23.05.2026 (ಶನಿವಾರ)
  • ಸಮಯ: ಬೆಳಗ್ಗೆ 09:00 ಗಂಟೆಯಿಂದ ಸಂಜೆ 05:00 ಗಂಟೆಯವರೆಗೆ

ಬಾಧಿತವಾಗುವ ಪ್ರಮುಖ ಪ್ರದೇಶಗಳು

1. ಎಫ್-6 ಡಿ.ಸಿ.ಎಂ. ಫೀಡರ್ ವ್ಯಾಪ್ತಿಯ ಪ್ರದೇಶಗಳು:

ಶ್ರೀರಾಮ ಬಡಾವಣೆ, ಡಿ.ಸಿ.ಎಂ. ಟೌನ್‌ಶಿಪ್, ಶಕ್ತಿನಗರ, ಅಂಬಿಕಾ ನಗರ, ಕೊಟ್ಟೂರೇಶ್ವರ ಬಡಾವಣೆ, ಜಯನಗರ, ತೋಟದಪ್ಪ ಗೋಡೌನ್, ಬನಶಂಕರಿ ದೇವಸ್ಥಾನ, ರೆಡ್ಡಿ ಬಿಲ್ಡಿಂಗ್, ಕೆಸಾಂ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

2. ಎಫ್-5 ಮೌನೇಶ್ವರ ಫೀಡರ್ ವ್ಯಾಪ್ತಿಯ ಪ್ರದೇಶಗಳು:

ಎಚ್.ಕೆ. ಆರ್. ಸರ್ಕಲ್, ಕೆ.ಐ.ಬಿ ಕಾಲೋನಿ, ನಿಟ್ಟುವಳ್ಳಿ ಹೊಸಬಡಾವಣೆ, ಮೌನೇಶ್ವರ ಬಡಾವಣೆ, ಐ.ಎಸ್.ಎ . ಆಸ್ಪತ್ರೆ, ಕೆ.ಟಿ.ಜೆ ನಗರ ಪೊಲೀಸ್ ಠಾಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.


ಸೂಚನೆ: ನಿಗದಿತ ಸಮಯಕ್ಕಿಂತ ಮುಂಚಿತವಾಗಿಯೇ ನಿರ್ವಹಣಾ ಕಾಮಗಾರಿಗಳು ಪೂರ್ಣಗೊಂಡಲ್ಲಿ, ವಿದ್ಯುತ್ ಸಂಪರ್ಕವನ್ನು ಅವಧಿಗೂ ಮುನ್ನವೇ ಮರುಸ್ಥಾಪಿಸಲಾಗುವುದು ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ವಿ), ನಗರ ಉಪ ವಿಭಾಗ-1, ಬೆಸ್ಕಾಂ, ದಾವಣಗೆರೆ ಇವರು ತಿಳಿಸಿದ್ದಾರೆ. ಸಾರ್ವಜನಿಕರು ಸಹಕರಿಸಲು ಕೋರಲಾಗಿದೆ. 

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

📩 ಸುದ್ದಿ ಕಳುಹಿಸಿ

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More

Related News

Home
Web Stories
Instagram
WhatsApp