ದಾವಣಗೆರೆ: ಜಿಲ್ಲೆಯಲ್ಲಿ 2025-26ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ (MSP) ಯೋಜನೆಯಡಿ ರಾಗಿ ಖರೀದಿ ಪ್ರಕ್ರಿಯೆಯು ಮುಕ್ತಾಯದ ಹಂತ ತಲುಪಿದೆ. ಈ ಯೋಜನೆಯಡಿ ನೋಂದಾಯಿಸಿಕೊಂಡು ಇನ್ನೂ ರಾಗಿ ಮಾರಾಟ ಮಾಡದ ಬಾಕಿ ಇರುವ ರೈತರಿಗೆ ಮೇ 5, 2026 ರವರೆಗೆ ಜಿಲ್ಲಾಡಳಿತವು ಅಂತಿಮ ಅವಕಾಶ ನೀಡಿದೆ.
ಶೇ. 96 ರಷ್ಟು ಖರೀದಿ ಪೂರ್ಣ
ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಮೂಲಕ ಜಿಲ್ಲೆಯ ದಾವಣಗೆರೆ, ಹರಿಹರ, ಚನ್ನಗಿರಿ, ಜಗಳೂರು ಹಾಗೂ ಹೊನ್ನಾಳಿ ತಾಲ್ಲೂಕುಗಳಲ್ಲಿ ಖರೀದಿ ಪ್ರಕ್ರಿಯೆ ಬಿರುಸಿನಿಂದ ಸಾಗಿದೆ. ಜಿಲ್ಲೆಯಲ್ಲಿ ಒಟ್ಟು 4,954 ರೈತರು 1.38 ಲಕ್ಷ ಕ್ವಿಂಟಾಲ್ ರಾಗಿ ಮಾರಾಟಕ್ಕೆ ನೋಂದಾಯಿಸಿಕೊಂಡಿದ್ದರು. ಮೇ 1ರ ಅಂತ್ಯಕ್ಕೆ ಈಗಾಗಲೇ 4,779 ರೈತರಿಂದ ಸುಮಾರು 1,33,002 ಕ್ವಿಂಟಾಲ್ ರಾಗಿಯನ್ನು ಖರೀದಿಸಲಾಗಿದ್ದು, ಒಟ್ಟು ಗುರಿಯ ಶೇ. 96.33 ರಷ್ಟು ಪ್ರಗತಿ ಸಾಧಿಸಲಾಗಿದೆ.
ಮೇ 5 ರ ನಂತರ ಕೇಂದ್ರಗಳು ಬಂದ್
ಪ್ರಸ್ತುತ ಮಾರುಕಟ್ಟೆಗೆ ಬರುವ ರೈತರ ಸಂಖ್ಯೆ ಇಳಿಮುಖವಾಗಿರುವುದರಿಂದ ಮತ್ತು ಜಿಲ್ಲೆಯ ಬಹುತೇಕ ರೈತರ ಬಳಿ ದಾಸ್ತಾನು ಇಲ್ಲದಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಅಲ್ಲದೆ, ಮೇ ಮತ್ತು ಜೂನ್ ತಿಂಗಳ ಪಡಿತರ ವಿತರಣೆಗಾಗಿ ಸರ್ಕಾರವು ಈ ರಾಗಿಯನ್ನು ಬಳಸಿಕೊಳ್ಳಲು ಉದ್ದೇಶಿಸಿದೆ.
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ಇನ್ನುಳಿದ 175 ನೋಂದಾಯಿತ ರೈತರು ಮೇ 5ರ ಒಳಗಾಗಿ ತಮ್ಮ ರಾಗಿ ದಾಸ್ತಾನನ್ನು ಹತ್ತಿರದ ಖರೀದಿ ಕೇಂದ್ರಕ್ಕೆ ತಂದು ಮಾರಾಟ ಮಾಡಬೇಕು. ಈ ದಿನಾಂಕದ ನಂತರ ಜಿಲ್ಲೆಯ ಎಲ್ಲಾ ಖರೀದಿ ಕೇಂದ್ರಗಳನ್ನು ಅಧಿಕೃತವಾಗಿ ಸ್ಥಗಿತಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಟಾಸ್ಕ್‌ಫೋರ್ಸ್ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
