ದಾವಣಗೆರೆ: ಶಂಕರ್ ಲೇಔಟ್‌ನಲ್ಲಿ ಜಲಾವೃತಗೊಂಡ ಮನೆಗಳು; ನಿವಾಸಿಗಳು ಕಂಗಾಲು!

Rain water enters houses in Shankar Layout Davanagere due to heavy rainfall.

—Election Update—

ದಾವಣಗೆರೆ: ನಗರದಲ್ಲಿ ಮುಂಜಾನೆ ಸುರಿದ ಧಾರಾಕಾರ ಮಳೆಗೆ ಶಂಕರ್ ಲೇಔಟ್ ಸಂಪೂರ್ಣ ಜಲಾವೃತಗೊಂಡಿದ್ದು, ಸಾರ್ವಜನಿಕರ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಬೆಳ್ಳಂಬೆಳಗ್ಗೆ ದಿಢೀರನೆ ಅಬ್ಬರಿಸಿದ ಮಳೆಯಿಂದಾಗಿ ರಸ್ತೆಗಳು ಹೊಳೆಯಂತಾಗಿದ್ದು, ಚರಂಡಿ ನೀರು ರಸ್ತೆ ದಾಟಿ ನೇರವಾಗಿ ಜನರ ಮನೆಗಳಿಗೆ ನುಗ್ಗಿದೆ. ನಿದ್ರೆಯಿಂದ ಎದ್ದೇಳುವಷ್ಟರಲ್ಲೇ ಮನೆಗಳು ಜಲಾವೃತಗೊಂಡಿದ್ದರಿಂದ ನಿವಾಸಿಗಳು ತೀವ್ರ ಆತಂಕಕ್ಕೆ ಒಳಗಾದರು.

ಸಾಮಗ್ರಿಗಳಿಗೆ ಹಾನಿ, ವೃದ್ಧರು-ಮಕ್ಕಳ ಪರದಾಟ

ಮನೆಗಳೊಳಗೆ ಒಳಚರಂಡಿ ಮತ್ತು ಮಳೆ ನೀರು ಮಿಶ್ರಿತ ಕೊಳಕು ನೀರು ನುಗ್ಗಿದ ಪರಿಣಾಮ ಧಾನ್ಯಗಳು, ಪೀಠೋಪಕರಣಗಳು ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳು ನೀರು ಪಾಲಾಗಿವೆ. ದಿಢೀರ್ ಪ್ರವಾಹದ ಪರಿಸ್ಥಿತಿಯಿಂದಾಗಿ ಮನೆಯಲ್ಲಿದ್ದ ವೃದ್ಧರು ಹಾಗೂ ಪುಟ್ಟ ಮಕ್ಕಳು ತೀವ್ರ ತೊಂದರೆ ಅನುಭವಿಸಿದರು. ನಿವಾಸಿಗಳು ಮನೆಯಲ್ಲಿದ್ದ ನೀರನ್ನು ಹೊರಹಾಕಲು ಹರಸಾಹಸ ಪಡಬೇಕಾಯಿತು.

ಅಧಿಕಾರಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ

“ಪ್ರತಿ ಬಾರಿ ಮಳೆ ಬಂದಾಗಲೂ ನಮ್ಮ ಬಡಾವಣೆಯ ಸ್ಥಿತಿ ಹೀಗೆಯೇ ಇರುತ್ತದೆ. ಸಮರ್ಪಕ ರಾಜಕಾಲುವೆ ಹಾಗೂ ಚರಂಡಿ ವ್ಯವಸ್ಥೆ ಇಲ್ಲದಿರುವುದೇ ಇದಕ್ಕೆ ಮುಖ್ಯ ಕಾರಣ,” ಎಂದು ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಪಟ್ಟ ಪಾಲಿಕೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ನೀರು ಸರಾಗವಾಗಿ ಹರಿದು ಹೋಗಲು ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಶಂಕರ್ ಲೇಔಟ್ ನಿವಾಸಿಗಳು ತೀವ್ರವಾಗಿ ಆಗ್ರಹಿಸಿದ್ದಾರೆ.

 

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

📩 ಸುದ್ದಿ ಕಳುಹಿಸಿ

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More

Related News

Home
Web Stories
Instagram
WhatsApp