ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿಂದ ದಿನಕ್ಕೆ ಕಾವು ಪಡೆದುಕೊಳ್ಳುತ್ತಿದೆ. ಅಭಿವೃದ್ಧಿಯ ಮಂತ್ರದೊಂದಿಗೆ ಮತದಾರರ ವಿಶ್ವಾಸ ಗೆಲ್ಲಲು ಮುಂದಾಗಿರುವ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಪರವಾಗಿ ಅವರ ಪತ್ನಿ ಮತ್ತು ಕುಟುಂಬದ ಸದಸ್ಯರು ಇಂದು ಬಿರುಸಿನ ಪ್ರಚಾರ ನಡೆಸಿದರು.
ಅಲ್ಪಸಂಖ್ಯಾತ ಮಹಿಳೆಯರ ಬೆಂಬಲ:
ಕ್ಷೇತ್ರದ ವಿವಿಧ ವಾರ್ಡ್‌ಗಳಲ್ಲಿ ಮನೆ ಮನೆಗೆ ಭೇಟಿ ನೀಡಿದ ಅಭ್ಯರ್ಥಿಯ ಪತ್ನಿಗೆ ಅಲ್ಪಸಂಖ್ಯಾತ ಸಮುದಾಯದ ಮಹಿಳೆಯರು ಸಾಂಪ್ರದಾಯಿಕವಾಗಿ ಉಡಿ ತುಂಬುವ ಮೂಲಕ ಆತ್ಮೀಯವಾಗಿ ಬರಮಾಡಿಕೊಂಡರು. ಈ ದೃಶ್ಯವು ಕ್ಷೇತ್ರದಲ್ಲಿ ಬಿಜೆಪಿ ಪರವಾಗಿ ಸಮುದಾಯಗಳ ಭೇದವಿಲ್ಲದೆ ಬೆಂಬಲ ವ್ಯಕ್ತವಾಗುತ್ತಿರುವುದಕ್ಕೆ ಸಾಕ್ಷಿಯಾಯಿತು.

ಅಭಿವೃದ್ಧಿಯೇ ಮೂಲ ಮಂತ್ರ:
ಪ್ರಚಾರದ ವೇಳೆ ಮತದಾರರೊಂದಿಗೆ ಸಂವಾದ ನಡೆಸಿದ ಶ್ರೀನಿವಾಸ್ ಅವರ ಪತ್ನಿ, “ಶ್ರೀನಿವಾಸ್ ನಿಮ್ಮ ಮನೆ ಮಗ. ಕ್ಷೇತ್ರದ ಚರಂಡಿ ವ್ಯವಸ್ಥೆ, ವಸತಿ ಸೌಲಭ್ಯ ಮತ್ತು ಆಸ್ಪತ್ರೆಗಳ ಸುಧಾರಣೆಗೆ ಅವರಿಗೆ ಅಧಿಕಾರ ನೀಡಿ. ಒಂದು ಬಾರಿ ಕೆಲಸ ಮಾಡಲು ಅವಕಾಶ ಕೊಡಿ” ಎಂದು ಮನವಿ ಮಾಡಿದರು. ಈ ಹಿಂದೆ ಆಗದ ಕೆಲಸಗಳನ್ನು ನಾವು ಮಾಡಿ ತೋರಿಸುತ್ತೇವೆ, ನಮಗೆ ನಿಮ್ಮ ಸಹಕಾರ ಮುಖ್ಯ ಎಂದು ಅವರು ತಿಳಿಸಿದರು.
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ಬದಲಾವಣೆಯ ಗಾಳಿ:
ಕ್ಷೇತ್ರದ ಮತದಾರರು ಕೂಡ ಈ ಬಾರಿ ಬದಲಾವಣೆಯ ನಿರೀಕ್ಷೆಯಲ್ಲಿದ್ದಾರೆ. “ನಮಗೆ ಕೆಲಸ ಮಾಡುವ ವ್ಯಕ್ತಿ ಮುಖ್ಯ. ಈ ಬಾರಿ ಪಕ್ಷಕ್ಕಿಂತ ಹೆಚ್ಚಾಗಿ ಅಭಿವೃದ್ಧಿಗೆ ನಾವು ವೋಟ್ ಹಾಕುತ್ತೇವೆ” ಎಂದು ಸ್ಥಳೀಯರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಅನೇಕ ಮತದಾರರು ಈಗಾಗಲೇ ಬಿಜೆಪಿ ಅಭ್ಯರ್ಥಿಗೆ ಬೆಂಬಲ ನೀಡಲು ನಿರ್ಧರಿಸಿರುವುದು ಪ್ರಚಾರದ ವೇಳೆ ಕಂಡುಬಂದಿದೆ.

ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
