ದಾವಣಗೆರೆ: ರಾಜ್ಯ ವಿಧಾನಸಭಾ ಚುನಾವಣೆಯ ಕಣ ರಂಗೇರುತ್ತಿದ್ದಂತೆ, ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ಇಂದು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ್ ಕರಿಯಪ್ಪ ಅವರು ಕ್ಷೇತ್ರದ ವಿವಿಧ ವಾರ್ಡ್‌ಗಳಲ್ಲಿ ಮಿಂಚಿನ ಸಂಚಾರ ನಡೆಸಿ ಮತಯಾಚನೆ ಮಾಡಿದರು.
ಅಭಿವೃದ್ಧಿ ಶೂನ್ಯ ಎಂದ ಬಿಜೆಪಿ ಅಭ್ಯರ್ಥಿ:
ಪ್ರಚಾರದ ವೇಳೆ ಮಾತನಾಡಿದ ಶ್ರೀನಿವಾಸ್ ದಾಸ್ ಕರಿಯಪ್ಪ, ಕಾಂಗ್ರೆಸ್ ಶಾಸಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. “ಇಂದು ನಾನು 13ನೇ ವಾರ್ಡ್‌ನಲ್ಲಿ ಪ್ರಚಾರ ಮಾಡುವಾಗ ಜನರ ನೋವನ್ನು ಹತ್ತಿರದಿಂದ ಕಂಡಿದ್ದೇನೆ. ಇಲ್ಲಿನ ರಸ್ತೆ ಮತ್ತು ಚರಂಡಿಗಳ ವ್ಯವಸ್ಥೆ ಅತ್ಯಂತ ಶೋಚನೀಯವಾಗಿದೆ. ಚರಂಡಿಗಳು ಪೂರ್ತಿ ಬ್ಲಾಕ್ ಆಗಿದ್ದು, ಹತ್ತಾರು ಬಾರಿ ಮನವಿ ನೀಡಿದರೂ ಯಾರೂ ಕಿವಿಗೊಟ್ಟಿಲ್ಲ ಎಂದು ಮತದಾರರು ಅಲವತ್ತುಕೊಂಡಿದ್ದಾರೆ. ಕಾಂಗ್ರೆಸ್ ಅವಧಿಯಲ್ಲಿ ಇಲ್ಲಿನ ಅಭಿವೃದ್ಧಿ ಶೂನ್ಯವಾಗಿದೆ” ಎಂದು ಆರೋಪಿಸಿದರು.
ತಾನು ಶಾಸಕನಾಗಿ ಆಯ್ಕೆಯಾದ ಮೊದಲ ದಿನವೇ ಈ ಎಲ್ಲ ಸಮಸ್ಯೆಗಳಿಗೆ ಮುಕ್ತಿ ಹಾಡುವುದಾಗಿ ಅವರು ಭರವಸೆ ನೀಡಿದರು.
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
23 ಅಲ್ಪಸಂಖ್ಯಾತ ಅಭ್ಯರ್ಥಿಗಳ ಸ್ಪರ್ಧೆ: ಬಿಜೆಪಿಗೆ ವರದಾನ?
ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಈ ಬಾರಿ 23 ಮುಸ್ಲಿಂ ಅಭ್ಯರ್ಥಿಗಳು ಕಣಕ್ಕಿಳಿದಿರುವುದು ರಾಜ್ಯದ ಗಮನ ಸೆಳೆದಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಶ್ರೀನಿವಾಸ್ ದಾಸ್, “ಅದು ಅವರ ಪಕ್ಷದ ಅಥವಾ ವೈಯಕ್ತಿಕ ವಿಚಾರ. ಆದರೆ ನಾನು ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿ ಪ್ರತಿಯೊಬ್ಬ ಮತದಾರನ ವಿಶ್ವಾಸ ಗಳಿಸಲು ಪ್ರಯತ್ನಿಸುತ್ತಿದ್ದೇನೆ. ಕ್ಷೇತ್ರದಲ್ಲಿರುವ 2,30,000 ಮತದಾರರೂ ನನಗೆ ಆಶೀರ್ವಾದ ಮಾಡುತ್ತಾರೆಂಬ ನಂಬಿಕೆ ನನಗಿದೆ” ಎಂದರು.
ಬಡವ ಮತ್ತು ಶ್ರೀಮಂತನ ನಡುವಿನ ಹೋರಾಟ:
ಕಾಂಗ್ರೆಸ್‌ನಲ್ಲಿನ ಬಂಡಾಯ ಮತ್ತು ಒಳಜಗಳದ ಕುರಿತು ಮಾತನಾಡಿದ ಅವರು, “ಬಿಜೆಪಿ ಒಬ್ಬ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ನೀಡಿದೆ. ಈ ಚುನಾವಣೆ ಕೇವಲ ಇಬ್ಬರು ವ್ಯಕ್ತಿಗಳ ನಡುವಿನದಲ್ಲ, ಇದು ಬಡವ ಮತ್ತು ಶ್ರೀಮಂತನ ನಡುವಿನ ಹೋರಾಟ. ಜನರು ಒಬ್ಬ ಬಡವನ ಮಗನನ್ನು ಗೆಲ್ಲಿಸಲು ತೀರ್ಮಾನಿಸಿದ್ದಾರೆ. ನನ್ನ ಗೆಲುವು ನಿಶ್ಚಿತ” ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು.
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
