ದಾವಣಗೆರೆ: ಜಿಲ್ಲೆಯ ಪ್ರತಿಷ್ಠಿತ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಖಾಡ ಈಗ ಅಧಿಕೃತವಾಗಿ ಕಳೆಗಟ್ಟಿದೆ. ಕಾಂಗ್ರೆಸ್ ಹೈಕಮಾಂಡ್ನಿಂದ ಅಭ್ಯರ್ಥಿಯ ಅಧಿಕೃತ ಪಟ್ಟಿ ಬಿಡುಗಡೆಯಾಗುವ ಮೊದಲೇ, ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಪುತ್ರ ಸಮರ್ಥ್ ಶಾಮನೂರು ಅವರು ಇಂದು ಚುನಾವಣಾ ಕಣಕ್ಕೆ ಧುಮುಕಿದ್ದಾರೆ.
ಶುಭ ಶುಕ್ರವಾರದಂದು ಉಮೇದುವಾರಿಕೆ:
ಬಿಜೆಪಿ ಈಗಾಗಲೇ ತನ್ನ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸ್ ಕರಿಯಪ್ಪ ಅವರನ್ನು ಘೋಷಣೆ ಮಾಡಿದ್ದು, ಕಾಂಗ್ರೆಸ್ ಪಾಳೆಯದಲ್ಲಿ ತೀವ್ರ ಕುತೂಹಲ ಮನೆಮಾಡಿತ್ತು. ಆದರೆ, ಇಂದು (ಶುಕ್ರವಾರ) ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಸಮರ್ಥ್ ಶಾಮನೂರು ಅವರು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಲು ನಿರ್ಧರಿಸುವ ಮೂಲಕ ಎಲ್ಲಾ ಚರ್ಚೆಗಳಿಗೆ ತೆರೆ ಎಳೆದಿದ್ದಾರೆ.

ದೈವದ ಮೊರೆ ಹೋದ ಸಮರ್ಥ್:

ಚುನಾವಣಾ ಕಣಕ್ಕಿಳಿಯುವ ಮುನ್ನ ಸಮರ್ಥ್ ಶಾಮನೂರು ಅವರು ಜಿಲ್ಲೆಯ ಪ್ರಮುಖ ದೇವಸ್ಥಾನಗಳಿಗೆ ಭೇಟಿ ನೀಡಿ ‘ಟೆಂಪಲ್ ರನ್’ ನಡೆಸಿದರು. ಬೆಳ್ಳಂಬೆಳಗ್ಗೆ 5:30ಕ್ಕೆ ತಮ್ಮ ಮನೆದೇವರಾದ ಹಿರೇಗಮ್ಮನಹಳ್ಳಿಯ ಕಲ್ಲೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ತದನಂತರ ದಾವಣಗೆರೆಯ ನಗರ ದೇವತೆ ದುಗ್ಗಮ್ಮ ದೇವಸ್ಥಾನಕ್ಕೆ ಆಗಮಿಸಿ, ದೇವಿಯ ಪಾದದ ಮುಂದೆ ನಾಮಪತ್ರದ ಫೈಲ್ ಇಟ್ಟು ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಹಾಗೂ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ದಂಪತಿ ಕೂಡ ಹಾಜರಿದ್ದು ಮಗನಿಗೆ ಸಾಥ್ ನೀಡಿದರು.
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ಹೈಕಮಾಂಡ್ನಿಂದ ಗ್ರೀನ್ ಸಿಗ್ನಲ್?
ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯದ ನಾಯಕರು ಟಿಕೆಟ್ಗಾಗಿ ತೀವ್ರ ಪೈಪೋಟಿ ನಡೆಸಿದ್ದರು. ಆದರೆ, ಮೂಲಗಳ ಪ್ರಕಾರ ಗುರುವಾರ ತಡರಾತ್ರಿ ಹೈಕಮಾಂಡ್ನಿಂದ ಮಲ್ಲಿಕಾರ್ಜುನ್ ಅವರಿಗೆ ದೂರವಾಣಿ ಕರೆ ಬಂದಿದ್ದು, ಸಮರ್ಥ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ತಿಳಿದುಬಂದಿದೆ. “ಕ್ಷೇತ್ರದ ಹಿಡಿತ ಸಾಧಿಸಲು ಶಾಮನೂರು ಕುಟುಂಬದವರೇ ಅಭ್ಯರ್ಥಿಯಾಗಬೇಕು” ಎಂಬ ಹಿರಿಯ ನಾಯಕರ ಸಲಹೆಗೆ ಹೈಕಮಾಂಡ್ ಮಣೆ ಹಾಕಿದೆ ಎನ್ನಲಾಗಿದೆ.

ಈ ಮೂಲಕ ದಾವಣಗೆರೆ ದಕ್ಷಿಣದಲ್ಲಿ ಶ್ರೀನಿವಾಸ್ ದಾಸ್ ಕರಿಯಪ್ಪ (ಬಿಜೆಪಿ) vs ಸಮರ್ಥ್ ಶಾಮನೂರು (ಕಾಂಗ್ರೆಸ್) ನಡುವೆ ನೇರ ಹಣಾಹಣಿ ಏರ್ಪಡುವುದು ಬಹುತೇಕ ಖಚಿತವಾಗಿದೆ.
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
