ದಾವಣಗೆರೆ ದಕ್ಷಿಣ ಉಪಚುನಾವಣೆ: ಕೈ ಟಿಕೆಟ್ ಫೈನಲ್? ಶಾಮನೂರು ಕುಟುಂಬದ ಮೂರನೇ ತಲೆಮಾರು ಅಖಾಡಕ್ಕೆ!

Samarth Shamanur Davanagere South Congress candidate for by-election 2026.
— ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್‌ನ ಸಂಭವನೀಯ ಅಭ್ಯರ್ಥಿ ಸಮರ್ಥ್ ಶಾಮನೂರು.

—Advertisement—

📍 ದಾವಣಗೆರೆ ದಕ್ಷಿಣ

ಉಪಸಮರ - 2026

ಮಹಾ ಕದನ: ಯಾರಿಗೆ ಒಲಿಯಲಿದೆ ಟಿಕೆಟ್?

Samarth Jabbar Vinay Ajay Yashwanth
ಕ್ಷಣ ಕ್ಷಣದ ಲೈವ್ ಅಪ್ಡೇಟ್ಸ್ ➔

ದಾವಣಗೆರೆ: ಜಿಲ್ಲೆಯ ರಾಜಕೀಯದ ದಿಕ್ಸೂಚಿ ಎಂದೇ ಕರೆಸಿಕೊಳ್ಳುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. ಏಪ್ರಿಲ್ 9 ರಂದು ಮತದಾನ ನಡೆಯಲಿದ್ದು, ಕಾಂಗ್ರೆಸ್ ಪಾಳಯದಲ್ಲಿ ಟಿಕೆಟ್ ಯಾರಿಗೆ ಎನ್ನುವ ಕುತೂಹಲಕ್ಕೆ ಈಗ ತೆರೆಬಿದ್ದಂತಿದೆ. ಹೈಕಮಾಂಡ್ ಈ ಬಾರಿಯೂ ಶಾಮನೂರು ಕುಟುಂಬಕ್ಕೆ ಮಣೆ ಹಾಕಿದೆ ಎನ್ನಲಾಗಿದ್ದು, ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಶಾಮನೂರು ಅಖಾಡಕ್ಕಿಳಿಯುವುದು ಬಹುತೇಕ ಖಚಿತವಾಗಿದೆ ಎನ್ನಲಾಗಿದೆ.

ಮೂರನೇ ತಲೆಮಾರಿನ ರಾಜಕೀಯ ಎಂಟ್ರಿ

ದಾವಣಗೆರೆ ರಾಜಕಾರಣದ ಧ್ರುವತಾರೆ ಶಾಮನೂರು ಶಿವಶಂಕರಪ್ಪ ಹಾಗೂ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಉತ್ತರಾಧಿಕಾರಿಯಾಗಿ ಈಗ ಸಮರ್ಥ್ ಶಾಮನೂರು ಅಧಿಕೃತವಾಗಿ ಚುನಾವಣಾ ರಾಜಕೀಯಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ತಾತನ ಕ್ಷೇತ್ರಕ್ಕೆ ಮೊಮ್ಮಗನೇ ವಾರಸುದಾರ ಎಂಬ ಮಾತುಗಳು ಕೇಳಿಬರುತ್ತಿದ್ದು, ಕೇವಲ ಹೈಕಮಾಂಡ್‌ನ ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ ಎನ್ನಲಾಗಿದೆ.

ಅನುಕಂಪ ವರ್ಸಸ್ ಅಲ್ಪಸಂಖ್ಯಾತರ ಫೈಟ್!

ದಕ್ಷಿಣ ಕ್ಷೇತ್ರದಲ್ಲಿ ಈ ಬಾರಿ ಅಲ್ಪಸಂಖ್ಯಾತ ಮುಖಂಡರಿಗೆ ಟಿಕೆಟ್ ನೀಡಬೇಕು ಎಂಬ ಬಲವಾದ ಒತ್ತಾಯ ಕೇಳಿಬಂದಿತ್ತು. ವಿಶೇಷವಾಗಿ ಮುಖಂಡ ಜಬ್ಬಾರ್ ಅವರು ಟಿಕೆಟ್‌ಗಾಗಿ ತೀವ್ರ ಪೈಪೋಟಿ ನಡೆಸಿದ್ದರು. ಆದರೆ, ಶಾಮನೂರು ಕುಟುಂಬದ ವರ್ಚಸ್ಸು ಮತ್ತು ಕ್ಷೇತ್ರದಲ್ಲಿರುವ ಹಿಡಿತವನ್ನು ಗಮನಿಸಿದ ಕಾಂಗ್ರೆಸ್ ಹೈಕಮಾಂಡ್, ‘ಅನುಕಂಪ’ದ ಆಧಾರದ ಮೇಲೆ ಕುಟುಂಬದ ಸದಸ್ಯರಿಗೇ ಆದ್ಯತೆ ನೀಡಲು ನಿರ್ಧರಿಸಿದೆ ಎನ್ನಲಾಗಿದೆ. ಇದು ಅಲ್ಪಸಂಖ್ಯಾತ ಆಕಾಂಕ್ಷಿಗಳಲ್ಲಿ ಸ್ವಲ್ಪ ಮಟ್ಟಿನ ಅಸಮಾಧಾನ ಮೂಡಿಸಿದ್ದು, ಅವರನ್ನು ಸಮಾಧಾನಪಡಿಸುವ ಜವಾಬ್ದಾರಿಯನ್ನು ರಾಜ್ಯ ನಾಯಕರು ಹೊತ್ತುಕೊಂಡಿದ್ದಾರೆ ಎನ್ನಲಾಗಿದೆ.

ಜಬ್ಬಾರ್ ಮನವೊಲಿಕೆಗೆ ಹೈಕಮಾಂಡ್ ಕಸರತ್ತು

ಟಿಕೆಟ್ ತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಎಂಎಲ್‌ಸಿ ಜಬ್ಬಾರ್ ಅವರನ್ನು ಹೈಕಮಾಂಡ್ ದೆಹಲಿಗೆ ಕರೆಸಿಕೊಂಡಿದೆ ಎನ್ನಲಾಗಿದ್ದು, ಅವರಿಗೆ ಮುಂದಿನ ದಿನಗಳಲ್ಲಿ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ಅಥವಾ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹುದ್ದೆ ನೀಡುವ ಭರವಸೆಯೊಂದಿಗೆ ರಾಜಿ ಸೂತ್ರ ಸಿದ್ಧಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಪಕ್ಷಕ್ಕೆ ಯಾವುದೇ ಡ್ಯಾಮೇಜ್ ಆಗದಂತೆ ನೋಡಿಕೊಳ್ಳಲು ಕೈ ನಾಯಕರು ಹರಸಾಹಸ ಪಡುತ್ತಿದ್ದಾರೆ.

ಬಿಜೆಪಿ ಪಾಳಯದಲ್ಲಿ ಯಾರಿದ್ದಾರೆ?

ಕಾಂಗ್ರೆಸ್ ಅಭ್ಯರ್ಥಿ ಬಹುತೇಕ ಫೈನಲ್ ಆಗಿದ್ದರೆ, ಬಿಜೆಪಿಯಲ್ಲಿ ಯಶವಂತರಾವ್ ಜಾಧವ್, ಅಜಯ್ ಕುಮಾರ್ ಮತ್ತು ಶ್ರೀನಿವಾಸ್ ದಾಸ್ಕರಿಯಪ್ಪ ಅವರ ಹೆಸರುಗಳು ಕೇಳಿಬರುತ್ತಿವೆ. ಇವರಲ್ಲಿ ಒಬ್ಬರಿಗೆ ಟಿಕೆಟ್ ಸಿಗುತ್ತದೆಯೇ ಅಥವಾ ಬಿಜೆಪಿ ಯಾವುದಾದರೂ ‘ಅಚ್ಚರಿಯ ಅಭ್ಯರ್ಥಿ’ಯನ್ನು ಕಣಕ್ಕಿಳಿಸುತ್ತದೆಯೇ ಎಂಬುದು ಇನ್ನು ಕೆಲವು ದಿನಗಳಲ್ಲಿ ಸ್ಪಷ್ಟವಾಗಲಿದೆ.

ಮುಖ್ಯ ಮಾಹಿತಿಗಳು:

  • ಮತದಾನದ ದಿನಾಂಕ: ಏಪ್ರಿಲ್ 9, 2026

  • ಫಲಿತಾಂಶ: ಮೇ 4, 2026

  • ಪ್ರಮುಖ ಅಭ್ಯರ್ಥಿ (ಕಾಂಗ್ರೆಸ್): ಸಮರ್ಥ್ ಶಾಮನೂರು (ಸಂಭವನೀಯ)

ನಾಳೆ ದಾವಣಗೆರೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಹಾಗೂ ಉಸ್ತುವಾರಿಗಳ ಸಭೆ ನಡೆಯಲಿದ್ದು, ಚುನಾವಣಾ ಪ್ರಚಾರದ ರೂಪುರೇಷೆಗಳು ಸಿದ್ಧವಾಗಲಿವೆ ಎನ್ನಲಾಗಿದೆ.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

📩 ಸುದ್ದಿ ಕಳುಹಿಸಿ

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More

Related News

Leave a Comment

Home
Web Stories
Instagram
WhatsApp