ದಾವಣಗೆರೆ ದಕ್ಷಿಣ ಬೈಎಲೆಕ್ಷನ್: ಬಿಜೆಪಿ ಟಿಕೆಟ್‌ಗೆ ಡಾ. ನಸೀರ್ ಅಹಮದ್ ಪ್ರಬಲ ಪೈಪೋಟಿ

ದಾವಣಗೆರೆ ದಕ್ಷಿಣ ಬೈಎಲೆಕ್ಷನ್ ಬಿಜೆಪಿ ಟಿಕೆಟ್ ಆಕಾಂಕ್ಷಿ ಡಾ. ನಸೀರ್ ಅಹಮದ್.
— ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಟಿಕೆಟ್ ಕೋರಿ ಪತ್ರಿಕಾಗೋಷ್ಠಿ ನಡೆಸಿದ ಡಾ. ನಸೀರ್ ಅಹಮದ್.

—Advertisement—

📍 ದಾವಣಗೆರೆ ದಕ್ಷಿಣ

ಉಪಸಮರ - 2026

ಮಹಾ ಕದನ: ಯಾರಿಗೆ ಒಲಿಯಲಿದೆ ಟಿಕೆಟ್?

Samarth Jabbar Vinay Ajay Yashwanth
ಕ್ಷಣ ಕ್ಷಣದ ಲೈವ್ ಅಪ್ಡೇಟ್ಸ್ ➔

ದಾವಣಗೆರೆ: ಮುಂಬರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದ್ದು, ಬಿಜೆಪಿ ಟಿಕೆಟ್‌ಗಾಗಿ ರಾಜ್ಯ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಉಪಾಧ್ಯಕ್ಷ ಡಾ. ನಸೀರ್ ಅಹಮದ್ ಪ್ರಬಲ ಬೇಡಿಕೆ ಇಟ್ಟಿದ್ದಾರೆ.

​ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ನಾನು ಕಳೆದ ಐದು ವರ್ಷಗಳಿಂದ ಭಾರತೀಯ ಜನತಾ ಪಕ್ಷದ ಪ್ರಾಮಾಣಿಕ ಕಾರ್ಯಕರ್ತನಾಗಿ ದುಡಿಯುತ್ತಿದ್ದೇನೆ. ಪ್ರಧಾನಿ ನರೇಂದ್ರ ಮೋದಿಯವರ ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ತತ್ವದಡಿ ಈ ಬಾರಿ ಅಲ್ಪಸಂಖ್ಯಾತ ಸಮುದಾಯದ ನನಗೆ ಟಿಕೆಟ್ ನೀಡಬೇಕು” ಎಂದು ಪಕ್ಷದ ವರಿಷ್ಠರಲ್ಲಿ ಮನವಿ ಮಾಡಿದ್ದಾರೆ.

ಸೇವೆ ಮತ್ತು ಅನುಭವದ ಆಧಾರದ ಮೇಲೆ ಟಿಕೆಟ್ ನಿರೀಕ್ಷೆ:

ಕಳೆದ 30-35 ವರ್ಷಗಳಿಂದ ದಾವಣಗೆರೆಯಲ್ಲಿ ಹಲವಾರು ಸಂಘ-ಸಂಸ್ಥೆಗಳ ಮೂಲಕ ಸಮಾಜ ಸೇವೆ ಮಾಡಿಕೊಂಡು ಬಂದಿರುವ ಅವರು, ಹಿಂದಿನ ಬಿ.ಎಸ್. ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯ ಯೋಜನಾ ಆಯೋಗದ ಸದಸ್ಯರಾಗಿ ಕೆಲಸ ಮಾಡಿದ್ದಾರೆ. ಜೊತೆಗೆ, ಕೆನರಾ ಬ್ಯಾಂಕ್ ಸಿಂಡಿಕೇಟ್ ನಿರ್ದೇಶಕರಾಗಿ ಹಾಗೂ ಮುಸ್ಲಿಂ ಹಾಸ್ಟೆಲ್ ಸಮಿತಿಯ ಖಜಾಂಚಿಯಾಗಿ ಸೇವೆ ಸಲ್ಲಿಸಿದ ಅಪಾರ ಅನುಭವವನ್ನು ಹೊಂದಿದ್ದಾರೆ.

ಗೆಲುವಿನ ಲೆಕ್ಕಾಚಾರ ಬಿಚ್ಚಿಟ್ಟ ಆಕಾಂಕ್ಷಿ:

ಕ್ಷೇತ್ರದ ಮತದಾರರ ಅಂಕಿ-ಅಂಶಗಳನ್ನು ಮುಂದಿಟ್ಟ ಡಾ. ನಸೀರ್ ಅಹಮದ್, “ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಒಟ್ಟು 2 ಲಕ್ಷದ 33 ಸಾವಿರ (2.33 ಲಕ್ಷ) ಮತದಾರರಿದ್ದಾರೆ. ಈ ಪೈಕಿ ಅಂದಾಜು 75 ಸಾವಿರಕ್ಕೂ ಹೆಚ್ಚು ಮುಸ್ಲಿಂ ಮತಗಳಿವೆ. ಪಕ್ಷವು ನನ್ನ ಸೇವೆಯನ್ನು ಗುರುತಿಸಿ ಟಿಕೆಟ್ ನೀಡಿದರೆ, ಈ ಬಾರಿ ಬಹುಮತದಿಂದ ಗೆದ್ದು ಬರುವ ಸಂಪೂರ್ಣ ವಿಶ್ವಾಸ ನನಗಿದೆ” ಎಂದು ಹೇಳಿದ್ದಾರೆ.

​ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷರು, ಜಿಲ್ಲಾ ನಾಯಕರು ಹಾಗೂ ಪಕ್ಷದ ಹೈಕಮಾಂಡ್‌ಗೆ ಭೇಟಿಯಾಗಿ ಅಧಿಕೃತವಾಗಿ ಮನವಿ ಸಲ್ಲಿಸಿರುವ ಅವರು, ಟಿಕೆಟ್ ಒಲಿಯುವ ವಿಶ್ವಾಸದಲ್ಲಿದ್ದಾರೆ.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

📩 ಸುದ್ದಿ ಕಳುಹಿಸಿ

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More

Related News

Leave a Comment

Home
Web Stories
Instagram
WhatsApp