ದಾವಣಗೆರೆ: ಜಿಲ್ಲೆಯ ರಾಜಕೀಯದ ಕೇಂದ್ರಬಿಂದುವಾಗಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಈಗ ಸಂಚಲನ ಮೂಡಿಸಿದೆ. ಕಾಂಗ್ರೆಸ್ ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಕ್ಷೇತ್ರದಲ್ಲಿ ಬಂಡಾಯದ ಬಾವುಟ ಹಾರಿದ್ದು, ಹಸ್ತದ ಪಾಳಯಕ್ಕೆ ಭಾರಿ ಆಘಾತ ಎದುರಾಗಿದೆ.
ಟಿಕೆಟ್ ಹಂಚಿಕೆ ಬೆನ್ನಲ್ಲೇ ಸ್ಫೋಟಗೊಂಡ ಅಸಮಾಧಾನ
ದಿವಂಗತ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ನೀಡುತ್ತಿದ್ದಂತೆ, ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮುಖಂಡರು ಕೆರಳಿದ್ದಾರೆ. “ದಶಕಗಳಿಂದ ಕಾಂಗ್ರೆಸ್ ಬೆನ್ನೆಲುಬಾಗಿ ನಿಂತಿರುವ ನಮಗೆ ಈ ಬಾರಿ ಅನ್ಯಾಯವಾಗಿದೆ. ಅಲ್ಪಸಂಖ್ಯಾತ ಸಮುದಾಯಕ್ಕೆ ಟಿಕೆಟ್ ನೀಡಬೇಕೆಂಬ ನಮ್ಮ ನ್ಯಾಯಯುತ ಬೇಡಿಕೆಯನ್ನು ಪಕ್ಷ ಕಡೆಗಣಿಸಿದೆ” ಎಂಬುದು ಮುಖಂಡರ ನೇರ ಆರೋಪ.

ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಖಂಡರು
ಕಾಂಗ್ರೆಸ್ನ ಈ ನಡೆಯಿಂದ ಬೇಸತ್ತಿರುವ 20ಕ್ಕೂ ಹೆಚ್ಚು ಪ್ರಭಾವಿ ಮುಸ್ಲಿಂ ಮುಖಂಡರು ಹಾಗೂ ನೂರಾರು ಯುವ ಕಾರ್ಯಕರ್ತರು ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ ಕರಿಯಪ್ಪ ಅವರ ನೇತೃತ್ವದಲ್ಲಿ ಕೇಸರಿ ಶಾಲು ಧರಿಸಿ ಪಕ್ಷಕ್ಕೆ ಸೇರ್ಪಡೆಗೊಂಡರು.
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
“ಈ ಬಾರಿ ಕಾಂಗ್ರೆಸ್ಗೆ ತಕ್ಕ ಪಾಠ ಕಲಿಸುತ್ತೇವೆ. ಅಲ್ಪಸಂಖ್ಯಾತರನ್ನು ಕೇವಲ ಮತಬ್ಯಾಂಕ್ ಆಗಿ ಬಳಸಿಕೊಳ್ಳುವ ಕಾಲ ಮುಗಿದಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಜನರು ಬಿಜೆಪಿ ಸೇರಲಿದ್ದಾರೆ” ಎಂದು ವಲಸೆ ಬಂದ ಮುಖಂಡರು ಗುಡುಗಿದ್ದಾರೆ.
ಕ್ಷೇತ್ರದಲ್ಲಿ ಬದಲಾದ ಸಮೀಕರಣ
ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಮತಗಳು ಜಯಾಪಜಯವನ್ನು ನಿರ್ಧರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಈಗ ಮುಖಂಡರೇ ಕಾಂಗ್ರೆಸ್ ವಿರುದ್ಧ ತಿರುಗಿಬಿದ್ದಿರುವುದು ಬಿಜೆಪಿ ಅಭ್ಯರ್ಥಿಗೆ ಪ್ಲಸ್ ಪಾಯಿಂಟ್ ಆಗುವ ಸಾಧ್ಯತೆ ಇದೆ. ಅಷ್ಟೇ ಅಲ್ಲದೆ, ಅತೃಪ್ತ ಮುಖಂಡರು ಸಾಮೂಹಿಕವಾಗಿ ನಾಮಪತ್ರ ಸಲ್ಲಿಸಲು ಮುಂದಾಗಿರುವುದು ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಅವರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
