ದಾವಣಗೆರೆ: ರೈತರು ಸಾಂಪ್ರದಾಯಿಕ ಕೃಷಿ ಪದ್ಧತಿಯೊಂದಿಗೆ ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಂಡರೆ ಮಾತ್ರ ಕೃಷಿಯಲ್ಲಿ ಹೆಚ್ಚಿನ ಲಾಭ ಮತ್ತು ಪ್ರಗತಿ ಸಾಧಿಸಲು ಸಾಧ್ಯ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಗೆತ್ತಿಮಾದ ವಿಟ್ಟಲ್‌ರಾವ್ ತಿಳಿಸಿದರು.
ನಗರದ ಜಿಎಂ ವಿಶ್ವವಿದ್ಯಾಲಯದ ಸೆಂಟ್ರಲ್ ಲೈಬ್ರರಿಯಲ್ಲಿ ಆಯೋಜಿಸಲಾಗಿದ್ದ “ಉನ್ನತ್ ಭಾರತ್ ಅಭಿಯಾನ್” (UBA) ಓರಿಯೆಂಟೇಶನ್ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಈ ಕಾರ್ಯಕ್ರಮವನ್ನು ಜಿಎಂ ವಿವಿ ಹಾಗೂ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಪ್ರಾದೇಶಿಕ ಸಮನ್ವಯ ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿತ್ತು.
ತಂತ್ರಜ್ಞಾನದಿಂದ ಕೃಷಿ ಕ್ರಾಂತಿ
ಇಂದಿನ ದಿನಗಳಲ್ಲಿ ಡ್ರೋನ್ ತಂತ್ರಜ್ಞಾನವು ಕೃಷಿ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆ ತರುತ್ತಿದೆ. “ಈ ಹಿಂದೆ ಅಮೆರಿಕದಂತಹ ದೇಶಗಳಲ್ಲಿ ಮಾತ್ರ ಡ್ರೋನ್ ಮೂಲಕ ಕೀಟನಾಶಕ ಸಿಂಪಡಣೆ ಮಾಡುವುದನ್ನು ಕೇಳಿದ್ದೆವು. ಆದರೆ ಇಂದು ನಮ್ಮ ದಾವಣಗೆರೆ ಜಿಲ್ಲೆಯ ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳ ಮೂಲಕ ರೈತರಿಗೆ ಈ ಸೌಲಭ್ಯ ಸಿಗುತ್ತಿದೆ,” ಎಂದು ಅವರು ಹರ್ಷ ವ್ಯಕ್ತಪಡಿಸಿದರು. ಕೇವಲ ಸಿಂಪಡಣೆ ಮಾತ್ರವಲ್ಲದೆ, ಜಮೀನಿನ ನಿಖರವಾದ ಸರ್ವೆ ಕಾರ್ಯಕ್ಕೂ ಡ್ರೋನ್ ಬಳಸಲಾಗುತ್ತಿದೆ ಎಂದರು.
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ಗ್ರಾಮ ಸ್ವರಾಜ್ಯದ ಕನಸು
ಕೇಂದ್ರ ಸರ್ಕಾರದ ಉನ್ನತ್ ಭಾರತ್ ಅಭಿಯಾನ್ ಯೋಜನೆಯು ಮಹಾತ್ಮಾ ಗಾಂಧೀಜಿಯವರ ‘ಗ್ರಾಮ ಸ್ವರಾಜ್ಯ’ದ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಐಐಟಿ ಮತ್ತು ವಿವಿಧ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳು ಸಂಶೋಧಿಸಿದ ತಂತ್ರಜ್ಞಾನದಿಂದ ಇಂದು ಚರಂಡಿ ಸ್ವಚ್ಛಗೊಳಿಸುವ ಕೆಲಸ ಸುಲಭವಾಗಿದೆ. ಇದು ಕಾರ್ಮಿಕರ ಕಷ್ಟವನ್ನು ದೂರ ಮಾಡಿದೆ ಎಂದು ಅವರು ಉದಾಹರಿಸಿದರು.
ವಿದ್ಯಾರ್ಥಿಗಳಿಗೆ ಸಲಹೆ
ವಿದ್ಯಾರ್ಥಿಗಳು ಕೇವಲ ಪದವಿ ಪಡೆಯುವುದಕ್ಕೆ ಸೀಮಿತವಾಗದೆ, ಗ್ರಾಮೀಣ ಭಾಗದ ಅಭಿವೃದ್ಧಿಗೆ ಪೂರಕವಾದ ಹೊಸ ಸಂಶೋಧನೆಗಳನ್ನು ಕೈಗೊಳ್ಳಬೇಕು. ಅಡಿಕೆ ಸಿಪ್ಪೆಯಿಂದ ಉಪಯುಕ್ತ ಉತ್ಪನ್ನಗಳನ್ನು ತಯಾರಿಸುವಂತಹ ನವೀನ ಆಲೋಚನೆಗಳು ರೈತರ ಆದಾಯ ಹೆಚ್ಚಿಸಲು ಸಹಕಾರಿ ಎಂದು ಅವರು ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಜಿಎಂ ವಿಶ್ವವಿದ್ಯಾಲಯದ ಪದಾಧಿಕಾರಿಗಳಾದ ಡಾ. ಬಿ.ಎಸ್. ಸುನೀಲ್ ಕುಮಾರ್, ಜಿ. ಕೌಸರ್ ರೇಷ್ಮಾ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
