ದಾವಣಗೆರೆ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ನಗರದ ಐತಿಹಾಸಿಕ ಗಡಿಯಾರ ಕಂಬದ ಆವರಣದಲ್ಲಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (AIMSS) ವತಿಯಿಂದ ಮಹಿಳೆಯರ ಮೇಲಿನ ದೌರ್ಜನ್ಯದ ವಿರುದ್ಧ ಬೃಹತ್ ಸಹಿ ಸಂಗ್ರಹ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು.
ಅಭಿಯಾನದ ಉದ್ದಕ್ಕೂ ದಾರಿಹೋಕರು ಮತ್ತು ಸಾರ್ವಜನಿಕರು ಉತ್ಸಾಹದಿಂದ ಭಾಗವಹಿಸಿ, ದೌರ್ಜನ್ಯ ಮುಕ್ತ ಸಮಾಜದ ಆಶಯಕ್ಕೆ ಸಹಿ ಹಾಕುವ ಮೂಲಕ ಬೆಂಬಲ ಸೂಚಿಸಿದರು. ಕಾರ್ಯಕ್ರಮದಲ್ಲಿ ಸಂಘಟನೆಯ ಪ್ರಮುಖರಾದ ಮಮತಾ, ಕವಿತಾ, ಸರಸ್ವತಿ, ನಾಗಜ್ಯೋತಿ, ರಶ್ಮಿ ನಿಟ್ಟುವಳ್ಳಿ ಸೇರಿದಂತೆ ದಾವಣಗೆರೆ ಜಿಲ್ಲಾ ಘಟಕದ ಹಲವು ಸದಸ್ಯರು ಉಪಸ್ಥಿತರಿದ್ದರು.
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
