ದಾವಣಗೆರೆ: ದಾವಣಗೆರೆ ನಗರದಲ್ಲಿ ಇಂದು ಒಳಮೀಸಲಾತಿಯನ್ನು ಜಾರಿಗೆ ತರಬೇಕೆಂದು ಒತ್ತಾಯಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆಯ ವೇಳೆ ಆಕ್ರೋಶಗೊಂಡ ಪ್ರತಿಭಟನಾಕಾರರು ರಸ್ತೆಯ ಮಧ್ಯೆ ಟಯರ್ಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ನಗರದ ಪ್ರಮುಖ ರಸ್ತೆಗಳಲ್ಲಿ ಬೈಕ್ ರ್ಯಾಲಿ ನಡೆಸಿದ ಪ್ರತಿಭಟನಾಕಾರರು, ನೀಲಿ ಬಾವುಟಗಳನ್ನು ಹಿಡಿದು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿದರು. ಪ್ರತಿಭಟನೆಯ ಹಿನ್ನೆಲೆಯಲ್ಲಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಬಸ್ ನಿಲ್ದಾಣ ಮತ್ತು ಪ್ರಮುಖ ವೃತ್ತಗಳಲ್ಲಿ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿದ್ದರು. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಸ್ತೆಯಲ್ಲಿ ಹಚ್ಚಿದ್ದ ಬೆಂಕಿಯನ್ನು ನಂದಿಸಿದರು. ಒಟ್ಟಾರೆಯಾಗಿ ದಾವಣಗೆರೆಯಲ್ಲಿ ಒಳಮೀಸಲಾತಿ ಕಿಚ್ಚು ಜೋರಾಗಿದ್ದು, ಪ್ರತಿಭಟನೆ ಶಾಂತಿಯುತವಾಗಿ ನಡೆಸಲಾಗುತ್ತಿದೆ.
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ಮುಖ್ಯಾಂಶಗಳು:
-
ಒಳಮೀಸಲಾತಿ ಜಾರಿಗೆ ಆಗ್ರಹಿಸಿ ದಾವಣಗೆರೆಯಲ್ಲಿ ಬೃಹತ್ ಪ್ರತಿಭಟನೆ.
-
ನಡುರಸ್ತೆಯಲ್ಲಿ ಟಯರ್ಗೆ ಬೆಂಕಿ ಹಚ್ಚಿ ಪ್ರತಿಭಟನಾಕಾರರಿಂದ ಆಕ್ರೋಶ.
-
ನಗರದ ಪ್ರಮುಖ ರಸ್ತೆಗಳಲ್ಲಿ ಬೈಕ್ ರ್ಯಾಲಿ ಮತ್ತು ಘೋಷಣೆ.
-
ಅಹಿತಕರ ಘಟನೆ ತಡೆಯಲು ಜಿಲ್ಲಾ ಪೊಲೀಸ್ ಇಲಾಖೆಯಿಂದ ಬಿಗಿ ಬಂದೋಬಸ್ತ್.
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
madhayakarnatakalive@gmail.com
