ದಾವಣಗೆರೆ: 27ರ ಹರೆಯದಲ್ಲೇ ಶಾಸಕರಾದ ಸಮರ್ಥ್ ಶಾಮನೂರು; ಅಪ್ಪನ ದಾಖಲೆ ಉಡೀಸ್!

samarth-shamanur-win-davangere-south-election

—Election Update—

ದಾವಣಗೆರೆ: ಜಿಲ್ಲೆಯ ರಾಜಕೀಯದ ಭೀಷ್ಮ ಎಂದೇ ಕರೆಯಲ್ಪಡುವ ದಿವಂಗತ ಶಾಮನೂರು ಶಿವಶಂಕರಪ್ಪ ಅವರ ಉತ್ತರಾಧಿಕಾರಿಯಾಗಿ ಮೊಮ್ಮಗ ಸಮರ್ಥ್ ಶಾಮನೂರು ದಾವಣಗೆರೆ ದಕ್ಷಿಣದ ಮೈದಾನದಲ್ಲಿ ವಿಜಯಪತಾಕೆ ಹಾರಿಸಿದ್ದಾರೆ. ಈ ಗೆಲುವಿನ ಮೂಲಕ ಶಾಮನೂರು ಕುಟುಂಬದ ಮೂರನೇ ತಲೆಮಾರು ಅಧಿಕೃತವಾಗಿ ವಿಧಾನಸಭೆ ಪ್ರವೇಶಿಸಿದಂತಾಗಿದೆ.

ಅಬ್ಬರದ ಜಯ, ಹೊಸ ದಾಖಲೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರು ಬಿಜೆಪಿಯ ಶ್ರೀನಿವಾಸ್ ದಾಸಕರಿಯಪ್ಪ ಅವರ ವಿರುದ್ಧ 5,708 ಮತಗಳ ಅಂತರದಿಂದ ಭರ್ಜರಿ ಜಯ ದಾಖಲಿಸಿದ್ದಾರೆ. ಅಜ್ಜ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಈ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಸಮರ್ಥ್ ಯಶಸ್ವಿಯಾಗಿದ್ದಾರೆ.

ಅಪ್ಪನನ್ನೂ ಮೀರಿದ ಮಗ!

ಈ ಚುನಾವಣಾ ಫಲಿತಾಂಶದಲ್ಲಿ ವಿಶೇಷವೆಂದರೆ ಸಮರ್ಥ್ ಅವರು ತಮ್ಮ ತಂದೆ, ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರ ದಾಖಲೆಯನ್ನೇ ಅಳಿಸಿ ಹಾಕಿದ್ದಾರೆ. ಮಲ್ಲಿಕಾರ್ಜುನ ಅವರು 28ನೇ ವಯಸ್ಸಿಗೆ ಶಾಸಕರಾಗಿ ಆಯ್ಕೆಯಾಗಿದ್ದರೆ, ಸಮರ್ಥ್ ಕೇವಲ 27ನೇ ವಯಸ್ಸಿಗೆ ಶಾಸಕರಾಗಿ ಆಯ್ಕೆಯಾಗುವ ಮೂಲಕ ಅತೀ ಕಿರಿಯ ವಯಸ್ಸಿನ ಜನಪ್ರತಿನಿಧಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

📩 ಸುದ್ದಿ ಕಳುಹಿಸಿ

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More

Related News

Home
Web Stories
Instagram
WhatsApp