ಚಿತ್ರದುರ್ಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ಇವರುಗಳ ಸಂಯುಕ್ತಾಶ್ರಯದಲ್ಲಿ “ಶ್ರೀ ಯೋಗಿ ನಾರೇಯಣ ಯತೀಂದ್ರರ (ಕೈವಾರ ತಾತಯ್ಯ) ಜಯಂತಿ” ಆಚರಣೆ ಸಮಾರಂಭ ಮಾರ್ಚ್ 03 ರಂದು ಬೆಳಿಗ್ಗೆ 11ಕ್ಕೆ ನಗರದ ಮಹರ್ಷಿ ವಾಲ್ಮೀಕಿ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಡಿ.ಸುಧಾಕರ್ ಉದ್ಘಾಟನೆ
ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಉದ್ಘಾಟನೆ ನೆರವೇರಿಸುವರು. ಚಳ್ಳಕೆರೆ ಶಾಸಕರು ಹಾಗೂ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಅಧ್ಯಕ್ಷ ಟಿ. ರಘುಮೂರ್ತಿ, ಹೊಸದುರ್ಗ ಶಾಸಕರು ಹಾಗೂ ಆಹಾರ ಮತ್ತು ನಾಗರೀಕ ಸರಬರಾಜು ನಿಗಮದ ಅಧ್ಯಕ್ಷ ಬಿ.ಜಿ. ಗೋವಿಂದಪ್ಪ, ಸಂಸದ ಗೋವಿಂದ ಎಂ ಕಾರಜೋಳ ಘನ ಉಪಸ್ಥಿತಿ ವಹಿಸುವರು. ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು.
ಗೌರವಾನ್ವಿತ ಅತಿಥಿಗಳಾಗಿ ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ. ಯೋಗೇಶ್ ಬಾಬು, ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್. ಮಂಜುನಾಥ್, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗ ಅಧ್ಯಕ್ಷ ಪಿ.ರಘು, ಬಯಲುಸೀಮೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹೆಚ್.ಬಿ.ಮಂಜಪ್ಪ, ಮೊಳಕಾಲ್ಮೂರು ಶಾಸಕ ಎನ್.ವೈ. ಗೋಪಾಲಕೃಷ್ಣ, ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಿ.ಟಿ. ಶ್ರೀನಿವಾಸ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್ಪೀರ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಆರ್.ಶಿವಣ್ಣ ಗಂಜಿಗಟ್ಟೆ, ಜಿಲ್ಲಾ ಯೋಗೀನಾರೇಯಣ ಯತೀಂದ್ರ ಬಲಿಜ ಸಂಘದ ಅಧ್ಯಕ್ಷ ಎಂ.ಎ. ಸೇತುರಾಮ್, ಕಾರ್ಯದರ್ಶಿ ಎಂ. ಗಂಗಣ್ಣ, ಯೋಗೀನಾರೇಯಣ ಯತೀಂದ್ರ ವಿದ್ಯಾಸಂಸ್ಥೆ ಅಧ್ಯಕ್ಷ ಜಿ.ಎಸ್. ಸೋಮಶೇಖರ್, ಯೋಗೀನಾರೇಯಣ ಯತೀಂದ್ರ ಬಲಿಜ ಸಂಘ, ಬೊಮ್ಮೇನಹಳ್ಳಿ ಅಧ್ಯಕ್ಷ ವಿರುಪಾಕ್ಷಪ್ಪ, ಸೇರಿದಂತೆ ಜಿಲ್ಲೆಯ ಎಲ್ಲಾ ಚುನಾಯಿತ ಜನಪ್ರತಿನಿಧಿಗಳು, ನಗರಸಭೆ ಸದಸ್ಯರು ಹಾಗೂ ವಿವಿಧ ಸಮಾಜದ ಮುಖಂಡರುಗಳು ಭಾಗವಹಿಸುವರು.
ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಹುರುಳಿ ಎಂ. ಬಸವರಾಜ ಉಪನ್ಯಾಸ ನೀಡುವರು. ಚಿತ್ರದುರ್ಗದ ಹರೀಶ್ ಮತ್ತು ತಂಡದವರು ಗೀತಗಾಯನ ನಡೆಸಿಕೊಡುವರು. ಜಯಂತಿ ಅಂಗವಾಗಿ ಅಂದು ಬೆಳಿಗ್ಗೆ 09 ಗಂಟೆಗೆ ಭವ್ಯ ಮೆರವಣಿಗೆಯು ನಗರದ ನೀಲಕಂಠೇಶ್ವರ ದೇವಸ್ಥಾನದಿಂದ ಮಹರ್ಷಿ ವಾಲ್ಮೀಕಿ ಭವನದವರೆಗೆ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಬಿ.ಎಂ.ಗುರುನಾಥ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಲಿಂಕ್ಗಳು:
ಇನ್ನಷ್ಟು ಆರೋಗ್ಯ ಮತ್ತು ದೈನಂದಿನ ಸುದ್ದಿಗಳಿಗಾಗಿ:ಮಧ್ಯ ಕರ್ನಾಟಕ ಲೈವ್ ಗೆ ಭೇಟಿ ನೀಡಿ.
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ. ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್
ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More