ಬೆಂಗಳೂರು: ಇನ್ನೇನು ಸ್ವಲ್ಪ ಹೊತ್ತಿನಲ್ಲೇ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪದಗ್ರಹಣ ಮಾಡಲಿದ್ದಾರೆ. ಲೋಕಭವನದ ಗಾಜಿನಮನೆಯಲ್ಲಿ ಪದಗ್ರಹಣ ಸಮಾರಂಭ ನಡೆಯುತ್ತಿರುವುದು ಗೊತ್ತೇ ಇದೆ.
ಈ ಸಮಾರಂಭಕ್ಕೆ 10,000ಕ್ಕೂ ಹೆಚ್ಚು VVIP ಆಸನಗಳ ವ್ಯವಸ್ಥೆ ಮಾಡಲಾಗಿದ್ದು, ಕಾಂಗ್ರೆಸ್ ನಾಯಕ ಗಾಂಧಿ, ರಾಹುಲ್ ಗಾಂಧಿ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಂಜೆ 4:05ಕ್ಕೆ ಸರಿಯಾಗಿ ಪದಗ್ರಹಣ ನೆರವೇರಲಿದೆ.

230 ಬಸ್ ನಿಲ್ದಾಣಗಳಲ್ಲಿ ಡಿಕೆಶಿ ಪ್ರಮಾಣವಚನ ನೇರಪ್ರಸಾರ
ರಾಜ್ಯದ ನೂತನ CM ಆಗಿ ಡಿ.ಕೆ. ಶಿವಕುಮಾರ್ ಇಂದು ಸಂಜೆ 4:05ಕ್ಕೆ ಲೋಕಭವನದ ಗಾಜಿನಮನೆಯಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಐತಿಹಾಸಿಕ ಕ್ಷಣವನ್ನು ಸಾರ್ವಜನಿಕರು ವೀಕ್ಷಿಸಲು ವಾರ್ತಾ ಇಲಾಖೆಯು ‘ವೃತ್ತಿ ಸೊಲ್ಯೂಷನ್ಸ್’ ಸಹಯೋಗದಲ್ಲಿ ರಾಜ್ಯದ ಆಯ್ದ 230 ಸರ್ಕಾರಿ ಬಸ್ ನಿಲ್ದಾಣಗಳ ಡಿಜಿಟಲ್ ಪರದೆಗಳಲ್ಲಿ ನೇರ ಪ್ರಸಾರದ ವ್ಯವಸ್ಥೆ ಮಾಡಿದೆ. ಇದರಿಂದಾಗಿ ಪ್ರಯಾಣಿಕರು ಹಾಗೂ ಸಾಮಾನ್ಯ ಜನರು ಕೂಡ ಬಸ್ ನಿಲ್ದಾಣಗಳಲ್ಲೇ ಉಚಿತವಾಗಿ ಈ ಕಾರ್ಯಕ್ರಮ ಕಣ್ತುಂಬಿಕೊಳ್ಳಬಹುದು.
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
