ಹೊಳಲ್ಕೆರೆಯಲ್ಲಿ ಉಚಿತ ಉದ್ಯಮಶೀಲತಾ ತರಬೇತಿ 2026

ಹೊಳಲ್ಕೆರೆಯಲ್ಲಿ ಉಚಿತ ಉದ್ಯಮಶೀಲತಾ ತರಬೇತಿ 2026.

—Election Update—

ಹೊಳಲ್ಕೆರೆ (ಚಿತ್ರದುರ್ಗ): ನೊಳಂಬ ಸಮಾಜದ ಯುವಜನರಲ್ಲಿ ಉದ್ಯಮಶೀಲತೆಯನ್ನು ಉತ್ತೇಜಿಸುವ ಮತ್ತು ಸ್ವಾವಲಂಬಿ ಬದುಕಿಗೆ ದಾರಿ ಮಾಡಿಕೊಡುವ ನಿಟ್ಟಿನಲ್ಲಿ, ಇದೇ ಬರುವ ಮಾರ್ಚ್ 29ರ ಭಾನುವಾರ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯಲ್ಲಿ ಒಂದು ದಿನದ ಬೃಹತ್ “ನವೀನ ಉದ್ಯಮಶೀಲತಾ ಕಾರ್ಯಗಾರ” ಹಮ್ಮಿಕೊಳ್ಳಲಾಗಿದೆ.

ನೊಳಂಬ ಉದ್ಯಮಿದಾರರ ಸಹಕಾರ ಸಂಘ (ಬೆಂಗಳೂರು) ಮತ್ತು ಕರ್ನಾಟಕ ಸರ್ಕಾರದ ಕೈಗಾರಿಕೆ ಹಾಗೂ ವಾಣಿಜ್ಯ ಇಲಾಖೆಯ ಜಂಟಿ ಆಶ್ರಯದಲ್ಲಿ ಈ ವಿಶೇಷ ಕಾರ್ಯಕ್ರಮ ನಡೆಯಲಿದೆ.

ಉದ್ಯಮ ಸ್ಥಾಪನೆಗೆ ತಜ್ಞರ ಮಾರ್ಗದರ್ಶನ

ಹೊಳಲ್ಕೆರೆಯಲ್ಲಿ ಉಚಿತ ಉದ್ಯಮಶೀಲತಾ ತರಬೇತಿ 2026.

​ನೊಳಂಬ ಪಿ. ಜಯರಾಜ್ ಅವರ ನೇತೃತ್ವದಲ್ಲಿ ಆಯೋಜಿತವಾಗಿರುವ ಈ ಕಾರ್ಯಗಾರದಲ್ಲಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಉದ್ಯಮಿಗಳಿಗಾಗಿ ನೀಡುತ್ತಿರುವ ವಿವಿಧ ಸಬ್ಸಿಡಿಗಳು, ಸಾಲ ಸೌಲಭ್ಯಗಳು ಹಾಗೂ ತಾಂತ್ರಿಕ ನೆರವಿನ ಬಗ್ಗೆ ಸಮಗ್ರ ಮಾಹಿತಿ ನೀಡಲಾಗುವುದು. ವಿಶೇಷವಾಗಿ ನಿರುದ್ಯೋಗಿ ಯುವಕ-ಯುವತಿಯರು ಸ್ವಂತ ಕೈಗಾರಿಕೆ, ಸೇವಾ ವಲಯ ಅಥವಾ ವ್ಯಾಪಾರವನ್ನು ಹೇಗೆ ಶೂನ್ಯದಿಂದ ಆರಂಭಿಸಬಹುದು ಎಂಬ ಬಗ್ಗೆ ಹಂತ ಹಂತವಾಗಿ ಮಾರ್ಗದರ್ಶನ ನೀಡಲಾಗುತ್ತದೆ.

ಕಾರ್ಯಕ್ರಮದ ವಿವರ:

  • ದಿನಾಂಕ: 29-03-2026, ಭಾನುವಾರ
  • ಸಮಯ: ಬೆಳಗ್ಗೆ 8:30 ರಿಂದ ಸಂಜೆ 5:30 ರವರೆಗೆ
  • ಸ್ಥಳ: ಕನ್ನಡ ಮತ್ತು ಸಂಸ್ಕೃತಿಕ ಭವನದ ಸಭಾಂಗಣ, ಹೊಳಲ್ಕೆರೆ.

ಸಮಾಜ ಬಾಂಧವರಿಗೆ ಮನವಿ:

​ಹೊಳಲ್ಕೆರೆ ಹಾಗೂ ಸುತ್ತಮುತ್ತಲಿನ ತಾಲ್ಲೂಕುಗಳ ನೊಳಂಬ ಸಮಾಜದ ಬಾಂಧವರು, ವಿದ್ಯಾರ್ಥಿಗಳು ಮತ್ತು ಆಸಕ್ತ ಉದ್ಯಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಉಚಿತ ಕಾರ್ಯಗಾರದ ಸದುಪಯೋಗ ಪಡೆದುಕೊಳ್ಳಬೇಕೆಂದು ಪದಾಧಿಕಾರಿಗಳು ಮನವಿ ಮಾಡಿದ್ದಾರೆ.

“ನಮ್ಮ ಸಮಾಜದ ಯುವಕರು ಕೇವಲ ಉದ್ಯೋಗಾಕಾಂಕ್ಷಿಗಳಾಗದೆ, ಉದ್ಯೋಗದಾತರಾಗಬೇಕು ಎಂಬುದು ಈ ಕಾರ್ಯಗಾರದ ಮೂಲ ಉದ್ದೇಶ.”

ಸಂಘಟನಾ ಸಮಿತಿ, ನೊಳಂಬ ಸ್ವಯಂ ಸೇವಕ ಸಂಘ.

ಸಂಪರ್ಕಿಸಿ:

​ಹೆಚ್ಚಿನ ಮಾಹಿತಿ ಅಥವಾ ನೋಂದಣಿಗಾಗಿ ಈ ಕೆಳಗಿನ ಸಂಖ್ಯೆಗಳನ್ನು ಸಂಪರ್ಕಿಸಬಹುದು:

  • ರಿಷಿಕುಮಾರ: 8197221508
  • ಕುಮಾರ್: 7676487042
  • ಇತರೆ: 8722988386, 9880111067

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

📩 ಸುದ್ದಿ ಕಳುಹಿಸಿ

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More

Related News

Home
Web Stories
Instagram
WhatsApp