ಚಿತ್ರದುರ್ಗ: ನಗರದ ಕ್ರೀಡಾಸಕ್ತ ವಿದ್ಯಾರ್ಥಿಗಳಿಗೆ ಮತ್ತು ಯುವ ಪ್ರತಿಭೆಗಳಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಭರ್ಜರಿ ಸಿಹಿಸುದ್ದಿ ನೀಡಿದೆ. ನಗರದ ವೀರವನಿತೆ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ವಾಲಿಬಾಲ್ ಮತ್ತು ಅಥ್ಲೆಟಿಕ್ಸ್ ಕ್ರೀಡೆಗಳಿಗೆ ಸಂಬಂಧಿಸಿದಂತೆ ಉಚಿತ ಬೇಸಿಗೆ ಕ್ರೀಡಾ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ.
ತರಬೇತಿಯ ವೇಳಾಪಟ್ಟಿ ಹೀಗಿದೆ:
-
ದಿನಾಂಕ: ಏಪ್ರಿಲ್ 10 ರಿಂದ ಏಪ್ರಿಲ್ 30 ರವರೆಗೆ.
-
ಬೆಳಗ್ಗಿನ ಅವಧಿ: 6.30 ರಿಂದ 8.30 ರವರೆಗೆ.
-
ಸಂಜೆಯ ಅವಧಿ: 5.00 ರಿಂದ 7.00 ರವರೆಗೆ.
ಈ ಶಿಬಿರದಲ್ಲಿ ಹಾಸ್ಟೆಲ್ ವಿದ್ಯಾರ್ಥಿಗಳು ಸೇರಿದಂತೆ ಕ್ರೀಡೆಯಲ್ಲಿ ಆಸಕ್ತಿ ಹೊಂದಿರುವ ಎಲ್ಲಾ ಕ್ರೀಡಾಪಟುಗಳು ಭಾಗವಹಿಸಲು ಅವಕಾಶ ನೀಡಲಾಗಿದೆ. ಬೇಸಿಗೆ ರಜೆಯ ಸದುಪಯೋಗ ಪಡಿಸಿಕೊಳ್ಳಲು ಇದೊಂದು ಉತ್ತಮ ವೇದಿಕೆಯಾಗಿದ್ದು, ತಜ್ಞ ತರಬೇತುದಾರರಿಂದ ಕೌಶಲ್ಯಗಳನ್ನು ಕಲಿಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
ಆಸಕ್ತರು ಹೆಚ್ಚಿನ ವಿವರಗಳಿಗಾಗಿ ಮತ್ತು ನೋಂದಣಿಗಾಗಿ ಈ ಕೆಳಗಿನ ತರಬೇತುದಾರರನ್ನು ಸಂಪರ್ಕಿಸಬಹುದು:
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
-
ವಾಲಿಬಾಲ್ ತರಬೇತಿ: ಮಹಮ್ಮದ್ ಮಹೀಬುಲ್ಲಾ – 9611673475
-
ಅಥ್ಲೆಟಿಕ್ಸ್ ತರಬೇತಿ: ತಿಪ್ಪಣ್ಣ ಎಸ್ ಮಾಳಿ – 9380889647
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
