,

ಪತ್ರಕರ್ತರ ಸಂಘಕ್ಕೆ ಪ್ರಧಾನ ಕಾರ್ಯದರ್ಶಿಯಾಗಿ ಲಕ್ಕಿಹಳ್ಳಿ ಸಿದ್ಧೇಶ್ ಆಯ್ಕೆ

Author Picture
Published On: February 22, 2026
ಹೊಸದುರ್ಗ: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಹೊಸದುರ್ಗ ತಾಲ್ಲೂಕು ಘಟಕಕ್ಕೆ ಪ್ರಧಾನ ಕಾರ್ಯದರ್ಶಿಯಾಗಿ ಉದಯಕಾಲ ಪತ್ರಿಕೆ ವರದಿಗಾರ ಲಕ್ಕಿಹಳ್ಳಿ ಸಿದ್ಧೇಶ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

—Advertisement—

ಹೊಸದುರ್ಗ: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಹೊಸದುರ್ಗ ತಾಲ್ಲೂಕು ಘಟಕಕ್ಕೆ ಪ್ರಧಾನ ಕಾರ್ಯದರ್ಶಿಯಾಗಿ ಉದಯಕಾಲ ಪತ್ರಿಕೆ ವರದಿಗಾರ ಲಕ್ಕಿಹಳ್ಳಿ ಸಿದ್ಧೇಶ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಹೊಸದುರ್ಗ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವಿನಾಯಕ ತೊಡರನಾಳ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಲಕ್ಕಿಹಳ್ಳಿ ಸಿದ್ಧೇಶ್ ಅವರನ್ನು ಆಯ್ಕೆ ಮಾಡಲಾಯಿತು. ಇವರು ಕಳೆದ 5 ವರ್ಷಗಳಿಂದ ಉದಯಕಾಲ ಪತ್ರಿಕೆಯ ಹೊಸದುರ್ಗ ತಾಲೂಕು ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

READ ALSO: ಬದುಕಲ್ಲಿ ಗೆಲ್ಲಬೇಕೆ? ಹಾಗಾದರೆ ಸ್ವಾಮಿ ವಿವೇಕಾನಂದರ ಈ ಅದ್ಭುತ ಮಾತುಗಳನ್ನು ಒಮ್ಮೆ ಓದಿ!

ನೂತನ ಅಧ್ಯಕ್ಷರಾಗಿ ಮಾನಸ ಬಸವರಾಜ್ ತುಂಬಿನಕೆರೆ, ಗೌರವಾಧ್ಯಕ್ಷರಾಗಿ ಮಹೇಶ್ ಗೌಡ, ಉಪಾಧ್ಯಕ್ಷರಾಗಿ ಶ್ರೀರಾಂಪುರ ರವಿಕುಮಾರ್ ಮತ್ತು ಖಜಾಂಚಿಯಾಗಿ ಎಸ್.ಬಸವರಾಜ್ ಇವರುಗಳನ್ನ ಆಯ್ಕೆ ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ವೀರೇಂದ್ರ ತಿಳಿಸಿದ್ದಾರೆ.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

madhayakarnatakalive@gmail.com

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More

Related News

Leave a Comment

Home
Web Stories
Instagram
WhatsApp