ಹೈಕಮಾಂಡ್ ನಡೆಗೆ ಸಿದ್ದೇಶ್ವರ್ ಕಿಡಿ: “ಯಡಿಯೂರಪ್ಪನವರ ಏಕಪಕ್ಷೀಯ ಘೋಷಣೆ ಸಂಘಟನೆಗೆ ಮಾರಕ”

ಜಿಎಂಐಟಿ ಗೆಸ್ಟ್ ಹೌಸ್‌ನಲ್ಲಿ ಜಿ.ಎಂ. ಸಿದ್ದೇಶ್ವರ್ ಸುದ್ದಿಗೋಷ್ಠಿ
— ದಾವಣಗೆರೆಯ ಜಿಎಂಐಟಿ ಅತಿಥಿ ಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿರುವ ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ್.

—Advertisement—

ದಾವಣಗೆರೆ: “ಪಕ್ಷದ ಹಿರಿಯ ನಾಯಕರು ನೀಡಿದ ಭರವಸೆ ಈಡೇರಿಲ್ಲ, ಇತ್ತ ಏಕಪಕ್ಷೀಯವಾಗಿ ಅಭ್ಯರ್ಥಿಗಳ ಘೋಷಣೆ ಮಾಡಲಾಗುತ್ತಿದೆ. ಇದು ಪಕ್ಷದ ಶಿಸ್ತು ಮತ್ತು ಸಂಘಟನೆಗೆ ಮಾರಕ,” ಎಂದು ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ್ ಅವರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗುರುವಾರ ನಗರದ ಜಿಎಂಐಟಿ (GMIT) ಅತಿಥಿ ಗೃಹದಲ್ಲಿ ನೆರೆದಿದ್ದ ನೂರಾರು ಬೆಂಬಲಿಗರು ಮತ್ತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಬಿಜೆಪಿ ನಾಯಕರ ವಿರುದ್ಧ ನೇರ ವಾಗ್ದಾಳಿ ನಡೆಸಿದರು.

ಭರವಸೆ ನೀಡಿದ್ದ ನಾಯಕರು ಈಗ ಮೌನ?

ಸುಮಾರು ಮೂರು ತಿಂಗಳ ಹಿಂದೆಯೇ ನಾವು ಬಿ.ಎಸ್. ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಗೋವಿಂದ ಕಾರ್ಜೋಳ ಹಾಗೂ ಮುರುಗೇಶ್ ನಿರಾಣಿ ಅವರನ್ನೊಳಗೊಂಡ ತಂಡವನ್ನು ಭೇಟಿ ಮಾಡಿ ಜಿಲ್ಲೆಯ ರಾಜಕೀಯ ಸ್ಥಿತಿಗತಿ ಹಾಗೂ ನಮ್ಮ ಬೇಡಿಕೆಗಳ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದೆವು. ಅಂದು ‘ಎರಡು ದಿನಗಳಲ್ಲಿ ಕ್ರಮ ಕೈಗೊಳ್ಳುತ್ತೇವೆ’ ಎಂದು ಭರವಸೆ ನೀಡಿದ್ದ ನಾಯಕರು, ಇಂದು ಆ ಬಗ್ಗೆ ಮೌನ ವಹಿಸಿರುವುದು ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಅವರು ತಿಳಿಸಿದರು.

ಹೊನ್ನಾಳಿ ಘೋಷಣೆಗೆ ಆಕ್ಷೇಪ

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೊನ್ನಾಳಿಯಲ್ಲಿ ಕೆಲವು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿರುವುದನ್ನು ಸಿದ್ದೇಶ್ವರ್ ಬಲವಾಗಿ ವಿರೋಧಿಸಿದ್ದಾರೆ. “ಅವರು ಸಂಸದೀಯ ಮಂಡಳಿಯ ಸದಸ್ಯರಾಗಿದ್ದುಕೊಂಡು ಈ ರೀತಿ ಘೋಷಣೆ ಮಾಡುವುದು ಸರಿ ಅಲ್ಲ. ಇದರಿಂದ ಉಳಿದ ಎಂಟು ಕ್ಷೇತ್ರಗಳ ಆಕಾಂಕ್ಷಿಗಳಲ್ಲಿ ಗೊಂದಲ ಮೂಡಿದೆ. ಈ ನಡೆಯು ಸಂಘಟನೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ,” ಎಂದು ಅವರು ಎಚ್ಚರಿಸಿದರು.

ಕಾರ್ಯಕರ್ತರೇ ನನ್ನ ದೇವರು

ಜಗಳೂರು, ಚನ್ನಗಿರಿ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಗಳಿಂದ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಕಾರ್ಯಕರ್ತರ ಒತ್ತಡದ ಬಗ್ಗೆ ಮಾತನಾಡಿದ ಅವರು, “ನನ್ನ ಕಾರ್ಯಕರ್ತರೇ ನನ್ನ ದೇವರು. ಭಾರತೀಯ ಜನತಾ ಪಕ್ಷವು ಜನಸಾಮಾನ್ಯರ ಧ್ವನಿಯಾಗಬೇಕು. ನನ್ನ ಮುಂದಿನ ಯಾವುದೇ ನಿರ್ಧಾರವು ಜನರ ಮತ್ತು ಕಾರ್ಯಕರ್ತರ ಅಭಿಪ್ರಾಯಕ್ಕೆ ಒಳಪಟ್ಟಿರುತ್ತದೆ,” ಎಂದು ಸ್ಪಷ್ಟಪಡಿಸಿದರು.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

📩 ಸುದ್ದಿ ಕಳುಹಿಸಿ

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More

Related News

Leave a Comment

Home
Web Stories
Instagram
WhatsApp